ಆಷಾಢದ ಬಳಿಕ ನಿವಾಸ ಬದಲಾಯಿಸಲಿರುವ ಸಿಎಂ ಸಿದ್ದರಾಮಯ್ಯ

Date:

  • ಆಷಾಢ ಮಾಸ ಮುಗಿದ ಬಳಿಕ ಸಿದ್ದರಾಮಯ್ಯ ಕಾವೇರಿ ನಿವಾಸ ಪ್ರವೇಶ
  • ಸಿದ್ದರಾಮಯ್ಯರ ಅದೃಷ್ಟದ ಮನೆ ಕುಮಾರಕೃಪಾ ಇನ್ನು ಡಿಕೆಶಿ ಅವರಿಗೆ

ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ಖಾಲಿ ಮಾಡಿ ಡಾಲರ್ಸ್​ ಕಾಲೋನಿಯಲ್ಲಿರುವ ತಮ್ಮ ಸ್ವಂತ ಮನೆ ಧವಳಗಿರಿಗೆ ಶಿಫ್ಟ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರದಲ್ಲೇ ಕುಮಾರಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಿಂದ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಲಿದ್ದಾರೆ.

ಕಾವೇರಿ ನಿವಾಸದಲ್ಲಿ ನವೀಕರಣ ಕಾರ್ಯ ಬಹುತೇಕ ಮುಗಿದಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಶನಿವಾರ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಷಾಢ ಮಾಸ ಮುಗಿದ ಬಳಿಕ ಸಿದ್ದರಾಮಯ್ಯ ಅವರು ಕಾವೇರಿ ನಿವಾಸ ಪ್ರವೇಶ ಮಾಡಲಿದ್ದಾರೆ.

ಈವರೆಗೆ ಸಿದ್ದರಾಮಯ್ಯ ಅವರಿದ್ದ ಸರ್ಕಾರಿ ಬಂಗಲೆ ಕುಮಾರಕೃಪಾ ನಿವಾಸ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಹಂಚಿಕೆಯಾಗಿದೆ. ಇದು ಸಿದ್ದರಾಮಯ್ಯ ಅವರ ಅದೃಷ್ಟದ ಮನೆ ಎಂದೇ ಹೇಳಲಾಗುತ್ತದೆ. ಈ ಅದೃಷ್ಟದ ಮನೆ ತಮಗೆ ಬೇಕೆಂದು ಡಿ ಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದರು. ಅದರಂತೆ ಸಿದ್ದರಾಮಯ್ಯ ಅವರಿದ್ದ ಅದೃಷ್ಟದ ಮನೆ ಡಿ ಕೆ ಶಿವಕುಮಾರ್ ಅವರಿಗೆ ಸಿಕ್ಕಿದ್ದು, ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಶಿಫ್ಟ್ ಆದ ನಂತರ, ಡಿ ಕೆ ಶಿವಕುಮಾರ್ ಕುಮಾರಕೃಪಾದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾವೇರಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ. ಅದರ ಪಕ್ಕದಲ್ಲೇ ಸಿಎಂ ಗೃಹ ಕಚೇರಿ ಕೃಷ್ಣಾ ಇದೆ. ಸಹಜವಾಗಿ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕಾರ ಮಾಡಿದವರು ಈ ನಿವಾಸದಲ್ಲಿ ವಾಸ್ತವ್ಯ ಹೂಡುತ್ತಾರೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಕಾವೇರಿ ನಿವಾಸದಲ್ಲೇ ಉಳಿದುಕೊಂಡಿದ್ದರು. ಬಳಿಕ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಂದಿನ ಸಿಎಂ ಎಚ್​ ಡಿ ಕುಮಾರಸ್ವಾಮಿ ಖಾಸಗಿ ಹೋಟೆಲ್‌ ಒಂದರಲ್ಲಿ ವಾಸ್ತವ್ಯ ಹೂಡಿದ್ದರೆ, ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ವಾಸ್ತವ್ಯ ಮುಂದುವರಿಸಿದ್ದರು.

ಈ ಸುದ್ದಿ ಓದಿದ್ದೀರಾ? ರಾಜಕೀಯ ಭಿನ್ನಮತ ಮರೆತು ಮೋದಿಗೆ ಜೆಡಿಎಸ್ ಬೆಂಬಲಿಸಲಿದೆ: ಶೋಭ ಕರಂದ್ಲಾಜೆ

ಸಮ್ಮಿಶ್ರ ಸರ್ಕಾರದ ಪತನವಾದ ಬಳಿಕವೂ ಸಿದ್ದರಾಮಯ್ಯ ಅವರ ಕಾವೇರಿ ತೊರೆಯಲು ಮನಸ್ಸು ಮಾಡಿರಲಿಲ್ಲ. ಅಂದು ಸಿಎಂ ಆಗಿದ್ದ ಬಿ ಎಸ್‌ ಯಡಿಯೂರಪ್ಪ ಅವರು ಧವಳಗಿರಿಯಲ್ಲಿ ವಾಸ್ತವ್ಯ ಹೂಡಿ ಅಲ್ಲಿಂದಲೇ ಗೃಹ ಕಚೇರಿ ಕೃಷ್ಣಾಗೆ ಆಗಮಿಸುತ್ತಿದ್ದರು. ಆದರೆ, ಇದು ಸಂಚಾರಕ್ಕೆ ಸಮಸ್ಯೆ ಆಗುತ್ತಿದೆ ಎಂಬ ಕಾರಣಕ್ಕಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕುಮಾರಕೃಪಾ ನಿವಾಸವನ್ನು ನೀಡಿ ಕಾವೇರಿಗೆ ಯಡಿಯೂರಪ್ಪ ಶಿಫ್ಟ್ ಆಗಿದ್ದರು. ಆದರೆ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಕಾವೇರಿ ನಿವಾಸದಲ್ಲೇ ತಮ್ಮ ವಾಸ್ತವ್ಯ ಮುಂದುವರಿಸಿದ್ದರು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಯಡಿಯೂರಪ್ಪ ತಾವೇ ಕಾವೇರಿ ನಿವಾಸ ತೊರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...