ಮೋದಿಯವರ ಖಾಲಿ ಚೊಂಬು ದೇವೇಗೌಡರಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ದು ಹೇಗೆ: ಸಿಎಂ ಸಿದ್ದರಾಮಯ್ಯ 

Date:

“ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ, ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೋಲಾರದ ಬಂಗಾರಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ರೋಡ್ ಶೋ ನಡೆಸಿದ ಅವರು, ಬಿಜೆಪಿ ಹಾಗೂ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದರು.

“ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ. ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ರಾಜ್ಯದ ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ? ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ಮೋದಿಯವರೇಕೆ ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ?” ಎಂದು ಸರಣಿ ಪ್ರಶ್ನೆಗಳನ್ನು ಎಸೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿಯವರು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೇ. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸವನ್ನು ಮೋದಿಯವರ ಖಾಲಿ ಚೊಂಬು ಸಾಕ್ಷಿಯಾಗಿದೆ. 15ನೇ ಹಣಕಾಸು ಆಯೋಗದಲ್ಲಿ‌ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ. ಅಕ್ಷಯ ಪಾತ್ರೆಯಿಂದ ಉದುರಿಸಿ ನೋಡೋಣ” ಎಂದು ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ಸವಾಲೆಸೆದರು.

“ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು, ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ಘೋಷಿಸಿದ್ದರು. ದೇವೇಗೌಡರು ಈಗ ಮೋದಿ ಮತ್ತು ತಾವು ಭಾಯಿ ಭಾಯಿ ಎನ್ನುತ್ತಿದ್ದಾರೆ. ಈಗ ಇದೇ ದೇವೇಗೌಡರು ಮೋದಿಯವರ ಖಾಲಿ ಚೊಂಬನ್ನು ಅಕ್ಷಯ ಪಾತ್ರೆ ಎನ್ನುತ್ತಿದ್ದಾರೆ. ಆದ್ದರಿಂದ ಕೋಲಾರದಲ್ಲಿ ದೇವೇಗೌಡರು ಮತ್ತು ಮೋದಿಯವರ ಖಾಲಿ ಚೊಂಬನ್ನು ಸೋಲಿಸಿ ನಮ್ಮ ಗ್ಯಾರಂಟಿಗಳಿಗೆ ಆಶೀರ್ವದಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸಿ” ಎಂದು ಸಿ.ಎಂ ಕರೆ ನೀಡಿದರು.

“ಕೋಲಾರದಲ್ಲಿ ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ಪಾರ್ಕ್, ಟೌನ್‌ಶಿಪ್ ಮಾಡುವ ಬೇಡಿಕೆ ಇದೆ. ಈ ಬಗ್ಗೆ ಸಕಾರಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...