ಬಿಜೆಪಿ ಸಂಸದ ತೇಜಸ್ವಿ ಸೂರ್ಯರಿಂದ ವಿಡಿಯೋ ವಿಕೃತಿ, ಯೋಧರಿಗೆ ಅವಮಾನ: ಸಿದ್ದರಾಮಯ್ಯ

Date:

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ ಕರ್ನಾಟಕದ ವೀರ ಯೋಧ ಪ್ರಾಂಜಲ್‌ ಅವರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರವು ಸದ್ಯ ರಾಜಕೀಯ ತಿರುವು ಪಡೆದುಕೊಂಡಿದೆ.

ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಸಂಪೂರ್ಣ ವಿಡಿಯೋ ಬದಲಿಗೆ ಅರ್ಧ ತುಂಡರಿಸಿದ್ದ ವಿಡಿಯೋವನ್ನಿಟ್ಟುಕೊಂಡು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಆ ಬಳಿಕ ಇದನ್ನೇ ಬಂಡವಾಳವನ್ನಾಗಿಸಿಕೊಂಡಿದ್ದ ಬಿಜೆಪಿ ಐಟಿ ಸೆಲ್, ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಅವರು ಹಿಂದೆಂದೂ ‌ನಡೆದುಕೊಂಡಿಲ್ಲ. ಯೋಧನ ಸಾವಿನ ವಿಚಾರದಲ್ಲಿ ತಮ್ಮ ಹೀನ ಮನಸ್ಥಿತಿಯನ್ನು ತೋರಿಸಿದ್ದಾರೆ ಎಂದು ದೂರಿತ್ತು. ಅದು ವೈರಲ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಸ್ಪಷ್ಟೀಕರಣ ನೀಡಿದ್ದ ಸಿಎಂ ಕಚೇರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದಂತೆ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಚೆಕ್ ಅನ್ನು ಅವರ ಕುಟುಂಬದ ಸದಸ್ಯರಿಗೆ ಅಧಿಕಾರಿಗಳ ಮೂಲಕ ಸರ್ಕಾರದ ವತಿಯಿಂದ ಇಂದು(ಡಿ.5) ನೀಡಲಾಗಿತ್ತು.

ಆ ಬಳಿಕ ಮತ್ತೆ ಖಾಸಗಿ ಸುದ್ದಿವಾಹಿನಿ ಟಿವಿ 9ನೊಂದಿಗೆ ಮಾತನಾಡಿರುವ ಸಂಪೂರ್ಣ ವಿಡಿಯೋವನ್ನು ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ‘ರಾಜಕೀಯ ದುರುದ್ದೇಶದಿಂದ ಸಂಸದ ತೇಜಸ್ವಿ ಸೂರ್ಯ ವಿಡಿಯೋವನ್ನು ತಿರುಚಿ ಹಂಚಿಕೊಂಡಿದ್ದಾರೆ. ಸಂಸದ ಹುತಾತ್ಮ ಪ್ರಾಂಜಲ್ ಕುಟುಂಬ ಮಾತ್ರವಲ್ಲ ಸಮಸ್ತ ಯೋಧರಿಗೆ ಮಾಡಿರುವ ಅವಮಾನ’ ಎಂದು ಕಿಡಿಕಾರಿದ್ದಾರೆ.

ತಮ್ಮ ಟ್ವೀಟ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂತು. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್ ಅನ್ನು ಹುತಾತ್ಮ ಪ್ರಾಂಜಲ್ ಅವರ ಕುಟುಂಬಕ್ಕೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

“ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು ತಿರುಚಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ, ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಈ ಸಂಸದನಲ್ಲಿ ಕಿಂಚಿತ್ತು ಮಾನ – ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ” ಎಂದು ತಿಳಿಸಿದ್ದಾರೆ.

“ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ. ಆದರೆ ಈ ಬಿಜೆಪಿ ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...