ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿಎಂ ಸಿದ್ದರಾಮಯ್ಯ

Date:

ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅವರ ನಿವಾಸದ ಮೇಲೆ ಸಿಬಿಐ ನಡೆಸಿರುವ ದಾಳಿಯನ್ನು ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 40 ದೇಶಪ್ರೇಮಿ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಈ ದಾಳಿ ನಡೆಸಲಾಗಿದೆ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪುಲ್ವಾಮ ದುರಂತದ ಬಗ್ಗೆ ಸತ್ಯಪಾಲ್ ಮಲಿಕ್ ಸತ್ಯ ಹೇಳಿದ್ದೇ ಅಪರಾಧವಾಗಿ ಹೋಯಿತು. ನಿರೀಕ್ಷೆಯಂತೆ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿ, ಬೆದರಿಸುವ ಪ್ರಯತ್ನ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

“ಪುಲ್ವಾಮ ದುರಂತ ನಡೆದ ಸಮಯದಲ್ಲಿ ಸತ್ಯಪಾಲ್ ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಕಾರಣ ಕೇಂದ್ರದ ವಿರುದ್ಧದ ಅವರ ಆರೋಪವನ್ನು ತಳ್ಳಿಹಾಕಲಾಗದು. ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರೀಕ್ಷೆಯಂತೆ ಅವರಿಗೆ ಸಿಬಿಐ ತನಿಖೆ ಮೂಲಕ ಚಿತ್ರಹಿಂಸೆ ನೀಡಲು ಹೊರಟಿದೆ, ಈ ಕೃತ್ಯ ಅತ್ಯಂತ ಖಂಡನೀಯ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಜೆಟ್ ಅಧಿವೇಶನ | ಕೇಂದ್ರದ ತೆರಿಗೆ ತಾರತಮ್ಯ ಖಂಡಿಸಿ ನಿರ್ಣಯ ಮಂಡಿಸಿದ ಸರ್ಕಾರ; ಬಿಜೆಪಿ ಧರಣಿ

“ಕೇಂದ್ರ ಸರ್ಕಾರ ತನ್ನ ದುಷ್ಟಬುದ್ದಿಯನ್ನು ತಿದ್ದಿಕೊಂಡು, ಸತ್ಯಪಾಲ್ ಮಲಿಕ್ ಅವರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು. ಸತ್ಯವನ್ನು ಸಹಿಸದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಪ್ರಶ್ನಿಸುವವರ ವಿರುದ್ಧ ಐಟಿ, ಇಡಿ, ಸಿಬಿಐಗಳನ್ನು ಛೂ ಬಿಟ್ಟು ಬಲತ್ಕಾರದಿಂದ ಬಾಯಿ ಮುಚ್ಚಿಸುವ ಪ್ರಯತ್ನನ್ನು ಮುಂದುವರಿಸಿದ್ದಾರೆ. ಆದರೆ ದೇಶದ ಜನತೆ ಇಂತಹ ಕುಟಿಲ ಕಾರಸ್ತಾನಗಳನ್ನು ಅರ್ಥಮಾಡಿಕೊಳ್ಳುವಷ್ಟು ಪ್ರಬುದ್ಧರಾಗಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...