ಸಿಎಂ ಜನತಾ ದರ್ಶನ | 2013ರಿಂದ ಗೂಡಂಗಡಿ ಇಡಲು ಅಲೆದಾಡುತ್ತಿದ್ದ ನಿಂಗಮ್ಮ: ಸ್ಥಳದಲ್ಲೇ ಪರಿಹಾರ

Date:

ಕಳೆದ 2013ರ ಜನವರಿಯಿಂದ ಕೇವಲ ಒಂದು ಗೂಡಂಗಡಿ ಇಡಲು ಅಲೆಡಾಡುತ್ತಿದ್ದ ಮಹಿಳೆಯೋರ್ವರಿಗೆ ಸಿಎಂ ಸಿದ್ದರಾಮಯ್ಯ ಅವರು ಜನತಾ ದರ್ಶನದ ಮೂಲಕ ಪರಿಹಾರ ಸೂಚಿಸಿದ್ದಾರೆ.

ಬೀದಿ ಬದಿ ವ್ಯಾಪಾರಿಗಳಿಗೆ, ತಳ್ಳುವ ಗಾಡಿಯಲ್ಲಿ ಟೀ ಇಟ್ಟುಕೊಂಡು ವ್ಯಾಪಾರ ಮಾಡಲು ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳು ಕಿರುಕುಳದ ನೀಡುತ್ತಿರುವ ಬಗ್ಗೆ ಬಡ ವ್ಯಾಪಾರಿ ನಿಂಗಮ್ಮ ಅವರು ಮುಖ್ಯಮಂತ್ರಿಗಳಿಗೆ ದೂರು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನನಗೆ ಗಂಡ ಹಾಗೂ ಇಬ್ಬರು ಮಕ್ಕಳಿದ್ದಾರೆ. ಜೀವನ ಸಾಗಿಸಲು ಡೈರಿ ಸರ್ಕಲ್ ಬಳಿ ಗಾಡಿಯಲ್ಲಿ ಟೀ ಇಟ್ಟುಕೊಂಡು ವ್ಯಾಪಾರ ಮಡಲು ಹೊರಟಿದ್ದೆ. ಈ ಬಗ್ಗೆ 2013ರಿಂದಲೂ ಅಲೆದಾಡುತ್ತಿದ್ದೇನೆ. ಆದರೆ ಈವರೆಗೆ ನನಗೆ ಅವಕಾಶ ನೀಡಿಲ್ಲ. ಗಾಡಿ ಇಟ್ಟರೆ ಮೈಕೋ ಲೇಔಟ್ ಸಂಚಾರಿ ಪೊಲೀಸರು ಮತ್ತು ಬಿಬಿಎಂಪಿ ಅಧಿಕಾರಿಗಳು ಬಂದು ಕಿರುಕುಳ ನೀಡುತ್ತಾರೆ. ಹಾಗಾಗಿ ದಯವಿಟ್ಟು ನನಗೆ ಇದಕ್ಕೆ ಅವಕಾಶ ಮಾಡಿಕೊಡಿ ಎಂದು ಮನವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ.

WhatsApp Image 2023 11 27 at 11.47.40 AM
ಜನತಾ ದರ್ಶನದ ವೇಳೆ ಸಿಎಂ ಸಿದ್ದರಾಮಯ್ಯನವರಿಗೆ ಹಿರಿಯರೋರ್ವರು ಆಶೀರ್ವಾದ ಮಾಡಿದ ಕ್ಷಣ

ಮನವಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ, ತಕ್ಷಣ ಪೊಲೀಸ್ ಅಧಿಕಾರಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ಕರೆಸಿ ನಿಂಗಮ್ಮ‌ ಅವರಿಗೇ ಕಿರುಕುಳ ನೀಡದಂತೆ ಹಾಗೂ ಚಹಾ ಅಂಗಡಿ ಇಡಲು ಅವಕಾಶ ನೀಡುವಂತೆ ಸೂಚನೆ ನೀಡುವ ಮೂಲಕ ಪರಿಹಾರ ಸೂಚಿಸಿದರು.

ಮನೆ ಕಂದಾಯ ಕಟ್ಟಿದ್ದರೂ ದುಪ್ಪಟ್ಟು ಪೆನಾಲ್ಟಿ
ಸಿಎಂ ಅವರ ಇಂದಿನ ಜನತಾದರ್ಶನದಲ್ಲಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರುಗಳ ಸರಮಾಲೆಯೇ ಜನರಿಂದ ಬರುತ್ತಿದೆ.

ಜನತಾ ದರ್ಶನಕ್ಕೆ ಆಗಮಿಸಿದ್ದ ವೃದ್ಧರೋರ್ವರು, “ಮನೆ ಕಂದಾಯ ಕಟ್ಟಿದ್ದರೂ ದುಪ್ಪಟ್ಟು ಪೆನಾಲ್ಟಿ ಹಾಕಿದ್ದಾರೆ. ಕಂದಾಯ ಕಟ್ಟಿದ ರಶೀದಿ ಇಟ್ಟುಕೊಂಡು ಬಿಬಿಎಂಪಿಗೆ ಹೋದರೆ, ‘ನಮಗೆ ಗೊತ್ತಿಲ್ಲ ಹೋಗಿ ಸರ್ಕಾರಕ್ಕೆ ಕೇಳಿ’ ಎಂದು ಸಿಬ್ಬಂದಿ ದರ್ಪದಿಂದ ನಡೆದುಕೊಳ್ಳುತ್ತಾರೆ ಎಂದು ಸಿಎಂ ಬಳಿ ದೂರಿದರು.

janata darshana

ಈ ಬಗ್ಗೆ ದೂರು ಸ್ವೀಕರಿಸುತ್ತಿದ್ದಂತೆಯೇ ಅಧಿಕಾರಿಗಳ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಬಿಎಂಪಿ ಅಧಿಕಾರಿಯನ್ನು ಕರೆದು ಸದರಿ ಪ್ರಕರಣವನ್ನು ‘ಖುದ್ದಾಗಿ ಗಮನಿಸಿ ಸಂಜೆಯೊಳಗೆ ಪರಿಹಾರ ಒದಗಿಸಿ ನನಗೆ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.

15 ದಿನಗಳ ಒಳಗೆ ಸಾಲ ಸೌಲಭ್ಯ ಒದಗಿಸಿ: ಬಿಬಿಎಂಪಿ ಆಯುಕ್ತರಿಗೆ ಸಿಎಂ ಸೂಚನೆ

ಸಿಡಾಕ್ ಸಂಸ್ಥೆಯಿಂದ ತರಬೇತಿ ಪಡೆದಿದ್ದರೂ ಎರಡು ವರ್ಷದಿಂದ ನಮಗೆ ಬಿಬಿಎಂಪಿ ನೆರವು ನೀಡಿಲ್ಲ ಎಂದು ವಿಶೇಷ ಚೇತನರು ಸಿಎಂಗೆ ದೂರು ನೀಡಿದ್ದಾರೆ. ತಮ್ಮ ಮನವಿಯಲ್ಲಿ 148 ಮಂದಿ ವಿಶೇಷ ಚೇತನರಿಂದ ಮೂರು ಚಕ್ರ ವಾಹನಕ್ಕೆ ಬೇಡಿಕೆ ಇದೆ. ಆದರೆ ಈವರೆಗೆ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ತಿಳಿಸಿದರು.

‘ತರಬೇತಿ ಪಡೆದಿರುವ 98 ಮಂದಿಗೆ ಮುಂದಿನ 15 ದಿನಗಳ ಒಳಗೆ ಸಾಲ ಸೌಲಭ್ಯ ಒದಗಿಸಬೇಕು. ಉಳಿದವರಿಗೆ ತ್ರಿಚಕ್ರ ವಾಹನ ಕೊಡಲು ತಕ್ಷಣ ಕ್ರಮ ಕೈಗೊಳ್ಳಬೇಕು’ ಎನ್ನುವ ಖಡಕ್ ಸೂಚನೆಯನ್ನು ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ನೀಡಿದರು.

‘ವೃದ್ದಾಪ್ಯ ವೇತನ ಮಂಜೂರಾತಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ’ ಎನ್ನುವ ದೂರುಗಳ ಹಿನ್ನೆಲೆಯಲ್ಲಿ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಇಲಾಖೆ ನಿರ್ದೇಶಕರನ್ನು ಕರೆಸಿ ತಾಂತ್ರಿಕ‌ ತೊಂದರೆ ಇದ್ದರೆ ತಕ್ಷಣ ಬಗೆಹರಿಸಿ ಸಿಬ್ಬಂದಿಯಿಂದ ತೊಂದರೆ ಆಗುತ್ತಿದ್ದರೆ ಅವರ ಮೇಲೆ ಕ್ರಮ ಜರುಗಿಸಿ ಎಂದು ಸಿಎಂ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...