ಕರ್ನಾಟಕದ ಯುವಕರಿಗೆ ಮೋಸ, ಮಲಯಾಳಿ ಯುವಕರಿಗೆ ಕೆಲಸ: ಆರ್ ಅಶೋಕ್ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

Date:

ಕರ್ನಾಟಕದ ಯುವಕರಿಗೆ ಯುವನಿಧಿ ಮೋಸ, ಮಲಯಾಳಿ ಯುವಕರಿಗೆ ಸರ್ಕಾರಿ ಕೆಲಸ ಎಂದು ಆರೋಪಿಸಿದ್ದ ವಿಪಕ್ಷ ನಾಯಕ ಅಶೋಕ್ ಅವರಿಗೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಖರೀದಿ, ನೇಮಕಾತಿ ಮತ್ತಿತರ ವಿಚಾರಗಳ ಬಗ್ಗೆ ಮಾಹಿತಿ ಸಹಿತ ವಿವರಿಸಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

“ನೀವು ಸುಳ್ಳಿನ ಕೋಟೆಯನ್ನು ಎಷ್ಟೇ ದೊಡ್ಡದಾಗಿ ಕಟ್ಟಿದರೂ, ಅದರ ಆಯುಷ್ಯ ಕಡಿಮೆ” ಎಂದು ಆರ್. ಅಶೋಕ್‌ಗೆ ಟಾಂಗ್ ನೀಡಿದ್ದಾರೆ.

ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಸುದೀರ್ಘ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್ ಅಶೋಕ್‌ಗೆ ತಿರುಗೇಟು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಾಮಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರೇ, ನಿಮ್ಮ ಟ್ವೀಟ್ ನಿಮ್ಮ ಪರಮ ಅಜ್ಞಾನದ ಫಲವೋ? ಅಥವಾ ವಿರೋಧ ಪಕ್ಷದ ನಾಯಕ ಅಸ್ವಿತ್ವದಲ್ಲಿದ್ದಾರೆ ಎಂದು ಜನರಿಗೆ ತಿಳಿಸಲು ಟ್ವೀಟ್ ಮಾಡುತ್ತಿರೋ? ಇದು ನಮ್ಮನ್ನೂ ಸೇರಿಸಿಕೊಂಡಂತೆ ರಾಜ್ಯದ ಜನಸಾಮಾನ್ಯರಿಗೂ ಅರ್ಥವಾಗದೆ ಇರುವ ಯಕ್ಷ ಪ್ರಶ್ನೆ. ನೀವು ಸುಳ್ಳಿನ ಕೋಟೆಯನ್ನು ಎಷ್ಟೇ ದೊಡ್ಡದಾಗಿ ಕಟ್ಟಿದರೂ ಅದರ ಆಯುಷ್ಯ ಕಡಿಮೆ. ನಮ್ಮ ಸತ್ಯದ ಒಂದು ಏಟಿಗೆ ಅದು ಕುಸಿದುಬೀಳುತ್ತಲೇ ಇದೆ. ನೀವು ಮತ್ತೆ ಮತ್ತೆ ಸುಳ್ಳುಗಳನ್ನು ಹೇಳಿ ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುತ್ತಲೇ ಇದ್ದೀರಿ. ಇದು ಮುಂದುವರಿಯಲಿ ಆಲ್ ದಿ ಬೆಸ್ಟ್” ಎಂದಿದ್ದಾರೆ.

ಈಗ ಸತ್ಯದ ಮಾತುಗಳನ್ನು ಕೇಳುವಂತವರಾಗಿ. ಪ್ರಪ್ರಥಮವಾಗಿ ಸಾರಿಗೆ ಸಂಸ್ಥೆಗಳಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಸೇರ್ಪಡೆಯು ಕೇಂದ್ರ ಸರ್ಕಾರದ ನೀತಿ ಯೋಜನೆಯಂತೆ ಜಾರಿಯಾಗಿದೆ. ಎಲೆಕ್ಟ್ರಿಕ್ ಬಸ್ಸುಗಳನ್ನು ಸಾರಿಗೆ ಸಂಸ್ಥೆಗಳು ನೇರವಾಗಿ ಖರೀದಿಸುವಂತಿಲ್ಲ, ಖಾಸಗಿ ಕಂಪನಿಯವರು ಮಾಲೀಕತ್ವ ಹೊಂದಿರುತ್ತಾರೆ. ಅವರಿಗೆ ಸಬ್ಸಿಡಿಯನ್ನು ಕೇಂದ್ರ ಸರ್ಕಾರವು ನೇರವಾಗಿ ನೀಡುತ್ತದೆ ಹಾಗೂ ಚಾಲಕರನ್ನು ನಿಯೋಜಿಸುವ ಕಾರ್ಯವು ಖಾಸಗಿ ಅವರಿಗೆ ನೀಡಲಾಗಿದೆ‌. ಚಾಲಕರ ವೇತನ, ಆಯ್ಕೆ ಯಾವುದರಲ್ಲಿಯೂ ಸಾರಿಗೆ ಸಂಸ್ಥೆಗಳಿಗೆ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವಿಲ್ಲ. ಬಸ್ಸುಗಳ ಕಾರ್ಯಾಚರಣೆ ಹೊಣೆ ಮಾತ್ರ ಸಾರಿಗೆ ಸಂಸ್ಥೆಗಳದ್ದು, ಈ ವಿಷಯವನ್ನು ಹತ್ತು ಹಲವಾರು ಬಾರಿ ನಮ್ಮ ಸಾರಿಗೆ ಸಚಿವರು ಪ್ರತಿಯೊ‌ಂದು ವೇದಿಕೆಯಲ್ಲಿಯೂ ಸ್ಪಷ್ಟಪಡಿಸಿರುತ್ತಾರೆ. ತಮಗೆ ಅದು ಅರ್ಥವಾಗದಿರುವುದು ನಿಜಕ್ಕೂ ಶೋಚನೀಯ ಎಂದು ಸಿಎಂ ಸಿದ್ದರಾಮಯ್ಯ ಆರ್ ಅಶೋಕ್ ಕಾಲೆಳೆದಿದ್ದಾರೆ.

ಯುವಕರಿಗೆ ಅದರಲ್ಲಿಯೂ ರಾಜ್ಯದ ಯುವಕರಿಗೆ ನಿರುದ್ಯೋಗ ಭಾಗ್ಯ ಕಲ್ಪಿಸಲು ಕಾರಣವಾದ ಕೇಂದ್ರ ಬಿಜೆಪಿ ಸರ್ಕಾರದ ಈ ಯೋಜನೆಯ ಬಗೆಗಿನ ತಮ್ಮ ನೋವು, ದುಃಖ ಮತ್ತು ಸಂಕಟಗಳಿಗೆ ಉತ್ತರ ಕಂಡುಕೊಳ್ಳುವ ತವಕ ನಿಮ್ಮಲ್ಲಿದ್ದರೆ ದಯವಿಟ್ಟು ನಿಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳಿ ಉತ್ತರ ಪಡೆಯಿರಿ, ಅಸಂಬದ್ಧ ಟ್ವೀಟ್‌ಗಳ ಮೂಲಕ ನಿಮ್ಮ ಅಜ್ಞಾನವನ್ನು ಪ್ರದರ್ಶಿಸಬೇಡಿ ಎಂದು ಜರೆದಿದ್ದಾರೆ.

ರಾಜ್ಯದ ಬಿಜೆಪಿ ನಾಯಕರೇ, ನಿಮ್ಮ ಆಡಳಿತ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳ ಮೇಲೆ ರೂ.5,900 ಕೋಟಿ ಸಾಲ ಮಾಡಿ, ಆ ಹೊರೆಯನ್ನು ನಮ್ಮ‌ ತಲೆ ಮೇಲೆ ಹೊರೆಸಿ ಹೋಗಿದ್ದೀರಿ. ಶಾಂತಿನಗರ ಟಿ.ಟಿ.ಎಂ.ಸಿ ಯನ್ನು ಸಾಲ ಪಡೆಯಲು ಅಡವಿಟ್ಟಿದ್ದು, ತಮ್ಮ ಆಡಳಿತ ಅವಧಿಯಲ್ಲಿಯೇ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲವೆನಿಸುತ್ತದೆ. ಸಾರಿಗೆ ಸಂಸ್ಥೆಗಳಲ್ಲಿ 14,000 ಹುದ್ದೆಗಳು ಖಾಲಿಯಿದ್ದರೂ, ತಮ್ಮ ಅವಧಿಯಲ್ಲಿ ಒಂದೇ ಒಂದು ನೇಮಕಾತಿ ಮಾಡದೆ, ನಮ್ಮ ಅವಧಿಯಲ್ಲಿ ಹೊರಡಿಸಲಾಗಿದ್ದ ನೇಮಕಾತಿ‌ ಪ್ರಕಟಣೆಗಳಿಗೂ ತಡೆತಂದಿರುವುದನ್ನು ಮರೆತು ಬಿಟ್ಟಿದ್ದೀರಾ? ಎಂದು ಕೇಳಿದ್ದಾರೆ.

ನಮ್ಮ‌ ಸರ್ಕಾರ ಬಂದೊಡನೆಯೇ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ನೀಡಿದ್ದು, ಈಗಾಗಲೇ 1,650 ಚಾಲಕ/ ನಿರ್ವಾಹಕರು ಹಾಗೂ 250 ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಉಳಿದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಭರದಿಂದ ಸಾಗಿದೆ. ನಾಲ್ಕು ಸಾರಿಗೆ ನಿಗಮಗಳಲ್ಲಿ‌ ಕಳೆದ ಒಂದು ವರ್ಷದ ಅವಧಿಯಲ್ಲಿ 500ಕ್ಕೂ ಹೆಚ್ಚು ಅನುಕಂಪದ ಆಧಾರದ‌ ಮೇಲೆ‌ ನೇಮಕಾತಿ‌ ಪತ್ರವನ್ನು ಸಿಬ್ಬಂದಿಗಳ ಅವಲಂಬಿತರಿಗೆ ನೀಡಲಾಗಿದೆ.

ಇದನ್ನು ಓದಿದ್ದೀರಾ? ಮಂಗಳೂರು | ರಸ್ತೆಯಲ್ಲಿ ನಮಾಝ್: ಸ್ವಯಂಪ್ರೇರಿತ ಪ್ರಕರಣ ರದ್ದುಗೊಳಿಸಿದ ಪೊಲೀಸರು; ಶರಣ್ ಪಂಪ್‌ವೆಲ್ ವಿರುದ್ಧ FIR

ಯುವಕರಿಗೆ ನಿರುದ್ಯೋಗ ಭಾಗ್ಯ ಕರುಣಿಸಿ, ಸಾರಿಗೆ ಸಂಸ್ಥೆಗಳನ್ನು ಅವನತಿಯತ್ತ ಕೊಂಡ್ಯೊಯ್ದ ಹೆಗ್ಗಳಿಕೆ ತಮ್ಮದೇ ಅಲ್ಲವೇ? ನಾವು ನುಡಿದಂತೆ ನಡೆಯುವವರು, ತಮ್ಮಂತೆ ಬರೀ ಭಾಷಣದಲ್ಲಿ ಕೋಟಿ ಕೋಟಿ ಉದ್ಯೋಗ ಭಾಗ್ಯ ಕರುಣಿಸಿ, ಯುವಜನರನ್ನು ಶೋಷಿಸುವ ಕಾರ್ಯ ಮಾಡಿಲ್ಲ. ಸಾರಿಗೆ ಸಂಸ್ಥೆಗಳಲ್ಲಿ ಕಳೆದ 5 ವರ್ಷಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆ ಮಾಡದೇ, ಡಕೋಟ ಬಸ್ಸುಗಳನ್ನು ದಯಪಾಲಿಸಿರುವ ನೀವು ಮಾತನಾಡುವ ಪರಿಗೆ ವಿಷಾದವಲ್ಲದೇ ಮತ್ತೇನು ವ್ಯಕ್ತಪಡಿಸಲು ಸಾಧ್ಯ? ತಮ್ಮ ಬೇಜವಾಬ್ದಾರಿ, ಆಧಾರರಹಿತ, ತಪ್ಪು ಹೇಳಿಕೆಗಳಿಗೆ ಸಂತಾಪ ಸೂಚಿಸುತ್ತಾ ನಿಮಗೆ ನೀವು ನಂಬಿರುವ ದೇವರು ಸತ್ಯ ಹೇಳುವ ಸದ್ಬುದ್ದಿಯನ್ನು ಕರುಣಿಸಲು ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಆರ್ ಅಶೋಕ್‌ಗೆ ತಿರುಗೇಟು ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...