ಅಲ್ಪಸಂಖ್ಯಾತರ ಕಾಲೋನಿಗೆ ಕೋಟಿ ಕೊಡುವ ಸಿಎಂ ಅವರೇ, ಹಿಂದೂಗಳ ಕಾಲೋನಿ ಎರಡನೇ ದರ್ಜೆಯದ್ದಾ? ವಿಪಕ್ಷ ನಾಯಕ ಆರ್.ಅಶೋಕ್

Date:

ಅಲ್ಪಸಂಖ್ಯಾತರ ಬಡಾವಣೆಗಳ ಸುಧಾರಣೆಗೆ 11 ಸಾವಿರ ಕೋಟಿ ರೂಪಾಯಿ ನೀಡುವುದಾಗಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಪ್ರಶ್ನಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, “ಅಲ್ಪಸಂಖ್ಯಾತರ ಕಾಲೋನಿಗೆ ಕೋಟಿ ಕೊಡುವ ಸಿಎಂ ಅವರೇ, ಹಿಂದೂಗಳ ಕಾಲೋನಿ ಎರಡನೇ ದರ್ಜೆಯದ್ದಾ?” ಎಂದು ಕೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಟಿಪ್ಪು ಸುಲ್ತಾನ್ ಮಾಡಿದಂತೆಯೇ ಸಿದ್ದರಾಮಯ್ಯ ಅವರು ಕೂಡ ಹಿಂದೂ-ಮುಸ್ಲಿಮರನ್ನು ಬೇರೆ ಮಾಡುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಒಂದೇ ವಾರದಲ್ಲಿ ಪ್ರತಿ ರೈತರಿಗೆ 2 ಸಾವಿರ ರೂ. ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ವಾಸ್ತವವಾಗಿ ಪ್ರತಿಯೊಬ್ಬರಿಗೆ 30-40 ಸಾವಿರ ರೂ.‌ ಕೊಡಬೇಕಿತ್ತು. ಇವರಿಗೆ ಅಷ್ಟು ಹಣ ನೀಡಲು ಯೋಗ್ಯತೆ ಇಲ್ಲ. ಬೆಳಗಾವಿ ಅಧಿವೇಶನದಲ್ಲಿ ವಿರೋಧ ಬರುತ್ತದೆಂದು 2 ಸಾವಿರ ರೂ. ಘೋಷಿಸಿದ್ದರು. ಅದನ್ನು ಕೊಡುವ ಯೋಗ್ಯತೆ ಇಲ್ಲದವರು, ಮಾನ ಮರ್ಯಾದೆ ಇಲ್ಲದೆ 11 ಸಾವಿರ ಕೋಟಿ ರೂಪಾಯಿಯನ್ನು ಅಲ್ಪಸಂಖ್ಯಾತರ ಬಡಾವಣೆಗೆ ಖರ್ಚು ಮಾಡುತ್ತೇನೆ ಎಂದು ಹೇಳುತ್ತಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದೆ ಟಿಪ್ಪು ಸುಲ್ತಾನ್ ಹಿಂದೂ ಮುಸ್ಲಿಮರನ್ನು ಬೇರೆ ಮಾಡಿದಂತೆ ಸಿಎಂ ಸಿದ್ದರಾಮಯ್ಯನವರು ಈಗ ಮಾಡುತ್ತಿದ್ದಾರೆ. ಮುಸ್ಲಿಮರ ಕಾಲೋನಿ ಬೇರೆ, ಹಿಂದೂಗಳ ಪ್ರದೇಶ ಬೇರೆ ಎಂದು ವರ್ಗೀಕರಣ ಮಾಡಿ ಸಂವಿಧಾನಕ್ಕೆ ಅಪಚಾರವಸೆಗಿದ್ದಾರೆ‌. ಹಿಂದೂಗಳ ಕಾಲೋನಿ ಎರಡನೇ ದರ್ಜೆಯದ್ದಾ? ದಲಿತರು ಇರುವ ಕಾಲೋನಿಗಳ ಪಾಡೇನು” ಎಂದು ಪ್ರಶ್ನಿಸಿದರು.

“ಕಾಂಗ್ರೆಸ್ ಸರ್ಕಾರ, ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ನೀಡುತ್ತಿದೆ. ಬರಗಾಲದಿಂದ ನೊಂದ ರೈತರಿಗೆ ನೇಣಿನ ಕುಣಿಕೆ ನೀಡಿದೆ. ಸಾಲ ತೀರಿಸಲಾಗದೆ ಕಳೆದ ಏಳು ತಿಂಗಳಲ್ಲಿ 500ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಷ್ಟಿದ್ದರೂ ಅಲ್ಪಸಂಖ್ಯಾತರಿಗೆ ಬಂಪರ್ ಮೇಲೆ ಬಂಪರ್ ಕಾಣಿಕೆ ನೀಡುತ್ತಿದ್ದಾರೆ. ಈ ಹಿಂದೆ 10 ಸಾವಿರ ಕೋಟಿ ರೂಪಾಯಿ ಎಂದು ಘೋಷಣೆ ಮಾಡಿದ್ದರು. ಈಗ 1 ಸಾವಿರ ಕೋಟಿ ರೂ. ಸೇರಿ 11 ಸಾವಿರ ಕೋಟಿ ರೂಪಾಯಿ ಆಗಿದೆ” ಆರ್ ಅಶೋಕ್ ಟೀಕಿಸಿದರು.

“ರಾಜ್ಯದಲ್ಲಿ ಅಭಿವೃದ್ಧಿಗೆ ಸಿಗುವುದೇ 50 ರಿಂದ 60 ಸಾವಿರ ಕೋಟಿ ರೂ. ಉಳಿದಿದ್ದು ವೆಚ್ಚಗಳಿಗೆ ಹೋಗುತ್ತದೆ. ಅದರಲ್ಲಿ 11 ಸಾವಿರ ಕೋಟಿ ರೂಪಾಯಿಯನ್ನು ಅಲ್ಪಸಂಖ್ಯಾತರ ಪ್ರದೇಶಗಳಿಗೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಮುಸಲ್ಮಾನರನ್ನು ಓಲೈಕೆ ಮಾಡುವ ಪ್ರವೃತ್ತಿ ಅವರಿಗೆ ಕರಗತವಾಗಿದೆ. ಸರ್ಕಾರ ರೈತರ ತಲೆಯ ಮೇಲೆ ಕಲ್ಲು ಹಾಕಿದೆ” ಎಂದು ದೂರಿದರು.

ಇದನ್ನು ಓದಿದ್ದೀರಾ? ‘ಇಂಡಿಯಾ’ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗುವ ಪರಿಸ್ಥಿತಿ ಇಲ್ಲ: ಎಚ್‌ಡಿ ಕುಮಾರಸ್ವಾಮಿ

“ಕಳೆದ ಏಳು ತಿಂಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಹಿಂದಿನ ಸರ್ಕಾರದ ಯೋಜನೆಗಳ ಅನುದಾನ ಸ್ಥಗಿತಗೊಂಡಿದೆ. ಆದರೂ ಓಲೈಕೆ ರಾಜಕಾರಣ ನಡೆಯುತ್ತಿದೆ. ಪಿಎಫ್ಐ ಮೊದಲಾದ ಸಂಘಟನೆಗಳ ಮೇಲಿದ್ದ 135 ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಘಟನೆ ಕುರಿತು ಮುಸ್ಲಿಮ್ ಶಾಸಕರು ಪತ್ರ ಬರೆದಾಗ ಸರ್ಕಾರ ಬಹಳ ಮುತುವರ್ಜಿ ವಹಿಸಿ ಕಡತವನ್ನು ಕಳುಹಿಸಿದೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಎಲ್ಲ ಧರ್ಮದವರನ್ನು ಒಂದಾಗಿ ಕರೆದೊಯ್ಯುತ್ತೇನೆ ಎನ್ನುತ್ತಾರೆ. ಈಗ ಅದಕ್ಕೆ ಅಪವಾದವಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ದೂರಿದರು.

ಮಧು ಬಂಗಾರಪ್ಪ ಚೆಕ್ ಬೌನ್ಸ್ ಪ್ರಕರಣ ಉಲ್ಲೇಖಿಸಿದ ಅವರು, “ಶಿಕ್ಷಣ ಸಚಿವರು ಚೆಕ್ ಬೌನ್ಸ್ ಮಾಡಿ ಯಾರಿಗೋ ನಾಮ ಹಾಕಿದ್ದಾರೆ. ಕೋರ್ಟ್ ಆದೇಶ ಬಂದ ನಂತರವೂ ಆ ಸಚಿವರ ರಾಜೀನಾಮೆ ಪಡೆಯದೆ ಮುಖ್ಯಮಂತ್ರಿಯವರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಕೂಡಲೇ ಅವರ ರಾಜೀನಾಮೆ ಪಡೆಯಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...