ಸಿಎಂ ಕುರ್ಚಿ ಖಾಲಿಯಿಲ್ಲ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ: ಡಿ ಕೆ ಶಿವಕುಮಾರ್

Date:

ಸಿಎಂ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿ ಎನ್ನುವ ಆರ್ ವಿ ದೇಶಪಾಂಡೆಯವರ ಹೇಳಿಕೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು.

“ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ. ಆದರೆ ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನೀಡೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ಅವರ ವಿರುದ್ದವಾಗಿ ತೀರ್ಪು ಬಂದರೆ ಮುಂದಿನ ನಡೆ ಏನು ಎಂದು ಕೇಳಿದಾಗ “ಯಾವುದೇ ವ್ಯತಿರಿಕ್ತವಾಗುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ಕೆಲಸ ಮಾಡುತ್ತಾರೆ” ಎಂದರು.

ಕಾಂಗ್ರೆಸ್ ಬಗ್ಗೆ ಸಂಸದ ಸುಧಾಕರ್ ಪ್ರಮಾಣ ಪತ್ರ ನೀಡಲಿ

ಕೋವಿಡ್ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಂಸದ ಡಾ.ಕೆ.ಸುಧಾಕರ್ ಅವರು, ಕಾಂಗ್ರೆಸ್ ಅವರು ಸತ್ಯಹರಿಶ್ಚಂದ್ರರೇ ಎನ್ನುವ ಹೇಳಿಕೆ ಬಗ್ಗೆ ಕೇಳದಾಗ, “ಕಾಂಗ್ರೆಸ್ ಅಲ್ಲಿ ಇದ್ದು ಈಗ ಬಿಜೆಪಿಗೆ ಹೋಗಿರುವ ಸಂಸದ ಸುಧಾಕರ್ ಅವರು ತಮ್ಮ ಹೇಳಿಕೆಯ ಬಗ್ಗೆ ಮೊದಲು ಪ್ರಮಾಣ ಪತ್ರ ನೀಡಲಿ. ಅವರ ರಕ್ತ, ಆಚಾರ, ವಿಚಾರ ಎಲ್ಲವೂ ಕಾಂಗ್ರೆಸ್ ಇತ್ತು. ಈಗ ನಾಲ್ಕೈದು ವರ್ಷದಿಂದ ಬದಲಾಗಿದೆ” ಎಂದು ಹೇಳಿದರು.

“ನಾನು ಕೋವಿಡ್ ಹಗರಣದ ವರದಿಯನ್ನು ಓದಿಲ್ಲ. ಕೇವಲ ಮಾಧ್ಯಮಗಳ ವರದಿಯನ್ನು ಮಾತ್ರ ಓದಿದ್ದೇನೆ. ವರದಿ ಪರಿಶೀಲನೆ ನಂತರ ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದರು.

ಯಡಿಯೂರಪ್ಪ ಅವರ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣದ ಶೀಘ್ರ ತನಿಖೆಗೆ ರಾಜ್ಯ ಮಹಿಳಾ ಆಯೋಗ ಸೂಚಿಸಿರುವ ಬಗ್ಗೆ ಕೇಳಿದಾಗ “ಇರ ಬಗ್ಗೆ ನನಗೆ ಮಾಹಿತಿಯಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...