ಬಿಜೆಪಿ ಸೇರಲಿರುವ ಡಾ ಸಿ ಎನ್ ಮಂಜುನಾಥ್; ಡಿ ಕೆ ಸುರೇಶ್‌ ವಿರುದ್ಧ ಸ್ಪರ್ಧೆ ಖಚಿತ!

Date:

ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಮತ್ತು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ಅಳಿಯ
ಡಾ ಸಿ ಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಬುಧವಾರ ಸಂಜೆ (ಮಾ.13) ಬಿಜೆಪಿ ಮುಖಂಡ ಬಿ ಎಸ್​ ಯಡಿಯೂರಪ್ಪ ಅವರನ್ನು ಮಂಜುನಾಥ್‌ ಅವರು ಭೇಟಿಯಾಗಿ ಮಾತುಕತೆ ನಡೆಸಲಿದ್ದು, ಗುರುವಾರ (ಮಾ.14)ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಸಿ ಎನ್ ಮಂಜುನಾಥ್‌ ಅವರು ಕೆಲ ಬಿಜೆಪಿ ನಾಯಕರನ್ನು ಭೇಟಿಯಾಗುವ ಮೂಲಕ ಚುನಾವಣಾ ತಯಾರಿ ನಡೆಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯೊಂದಿಗೆ ಕಣಕ್ಕಿಳಿಯುತ್ತಿರುವ ಅವರು ಅಧಿಕೃತವಾಗಿ ಬಿಜೆಪಿ ಚಿಹ್ನೆ ಮೇಲೆ ಸ್ಪರ್ಧಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದದಲ್ಲಿ‌ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಅಶೋಕ್ ಸೇರಿದಂತೆ ಪ್ರಮುಖ ನಾಯಕರ ನೇತೃತ್ವದಲ್ಲಿ ಮಂಜುನಾಥ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರ ಗಮನ ಬೇರೆಡೆಗೆ ಸೆಳೆಯಲು ‘ಸಿಎಎ’ ಮುಂದೆ ಮಾಡಿದ ‘ಮೋಶಾ’

ಬಿಜೆಪಿಯಿಂದ ಇನ್ನೂ ಅಧಿಕೃತವಾಗಿ ಟಿಕೆಟ್‌ ಘೋಷಣೆ ಆಗಿಲ್ಲದಿದ್ದರೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಮಂಜುನಾಥ್‌ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್‌ ಸಂಸದ ಡಿ ಕೆ ಸುರೇಶ್‌ ವಿರುದ್ಧ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಮೊನ್ನೆ ಶಿವರಾತ್ರಿ ದಿನದಂದು ಮತ್ತೀಕೆರೆಯ ಜೆಪಿ ಪಾರ್ಕ್​ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಂಜುನಾಥ್ ಅವರು ವೇದಿಕೆ ಮೇಲೆ ಕಾಣಿಸಿಕೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...