ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಕೋಮು ಪ್ರಚೋದನೆ ಪೋಸ್ಟ್‌; ದೂರು ದಾಖಲು

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿದ್ದ ವಿಡಿಯೋ ತುಣುಕುಗಳನ್ನು ಬಳಿಸಿಕೊಂಡು, ಧಾರ್ಮಿಕ ಭಾವನೆ ಕೆರಳಿಸುವಂತೆ ತಿರುಚಿ ಟ್ವೀಟ್‌ ಮಾಡಿದ್ದ ಹಿಂದು ಮಹಾಸಭಾದ ಟ್ವಿಟರ್ ಖಾತೆ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ಕೆಪಿಸಿಸಿ ವಕ್ತಾರ ಎಲ್ ಸೂರ್ಯ ಮುಕುಂದರಾಜ್‌ ದೂರು ನೀಡಿದ್ದಾರೆ. ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರು ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋವನ್ನು ಬಳಸಿಕೊಂಡು ಹಿಂದು ಮಹಾಸಭಾದ ಟ್ವಿಟರ್ ಖಾತೆಯಲ್ಲಿ ಮೇ 19ರಂದು ಪೋಸ್ಟ್‌ ಮಾಡಲಾಗಿದೆ. ಪೋಸ್ಟ್‌ನಲ್ಲಿ “ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ರಚಿಸಿರುವ ಇಸ್ಲಾಮಿಕ್ ಸರ್ಕಾರದಲ್ಲಿ, ಮುಂದಿನ 5 ವರ್ಷಗಳಲ್ಲಿ ಜಿಹಾದ್ ಮತ್ತು ಮತಾಂತರ ಹೆಚ್ಚಾಗಲಿದೆ. ಕಾಂಗ್ರೆಸ್ ಆಡಳಿತದಲ್ಲಿ ಹಿಂದುಗಳ ಮೇಲಿನ ದಾಳಿಗಳು ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗುತ್ತವೆ” ಎಂದು ಬರೆಯಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...