ಅರಣ್ಯ ಹುತಾತ್ಮರ ಪರಿಹಾರ ಮೊತ್ತ 30 ರಿಂದ 50 ಲಕ್ಷ ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

Date:

ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು. ಇವರ ತ್ಯಾಗ ಅರಣ್ಯ ಸಂರಕ್ಷಣೆಗೆ ಸ್ಫೂರ್ತಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದರು.

ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ‌ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, “ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ” ಎಂದು ಹೇಳಿದರು.

“ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ. ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು. ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ‌ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ಎಂದರೆ ನಾವು ನಮ್ಮ‌ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಆನೆ, ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತೋಷದ ಸಂಗತಿ. ಆದರೆ ಪ್ರಾಣಿ-ಮನುಷ್ಯ ಸಂಘರ್ಷ ತಪ್ಪಿಸಿ ಮಾನವ, ಪ್ರಾಣಿ ಸಂಪತ್ತನ್ನು ಕಾಪಾಡುವ ದಿಕ್ಕಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳು ಆಗಬೇಕಿದೆ. ಇದಕ್ಕಾಗಿ ಲಭ್ಯ ಇರುವ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಅರಣ್ಯ ಸಿಬ್ಬಂದಿಗೂ ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ: ಈಶ್ವರ್ ಖಂಡ್ರೆ

ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡುವಂತೆ ಅರಣ್ಯ‌ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದ ಬಳಿಕ ಮಾತನಾಡಿ, “ಕಾಡ್ಗಿಚ್ಚು ನಂದಿಸುವಾಗ, ಮಾನವ-ವನ್ಯಜೀವಿ ಸಂಘರ್ಷ ತಡೆಯುವ ಸಂದರ್ಭದಲ್ಲಿ ಮತ್ತು ಒತ್ತುವರಿದಾರರು ಮತ್ತು ಕಾಡುಗಳ್ಳರ ಆಕ್ರೋಶಕ್ಕೆ ಗುರಿಯಾಗಿ ಈವರೆಗೆ 61 ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ಎಲ್ಲರ ಕುಟುಂಬದೊಂದಿಗೆ ಇಲಾಖೆ ನಿಂತಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...