ಕಾಂಗ್ರೆಸ್‌ನಲ್ಲಿ ಸಿಎಂ ಆಗಲು ಮ್ಯೂಸಿಕಲ್ ಚೇರ್‌ನಂತೆ ಸ್ಪರ್ಧೆ ನಡೆಯುತ್ತಿದೆ: ಆರ್‌ ಅಶೋಕ್‌ ವ್ಯಂಗ್ಯ

Date:

ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಮೊದಲು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ರೂಪಿಸಿದೆ. ಇಂತಹ ವಿಧೇಯಕಗಳ ಸಾಧಕ-ಬಾಧಕಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ” ಎಂದರು.

“ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಹತ್ತಾರು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದರು. ರಾಜಭವನ ಎಂದರೆ ಬಿಜೆಪಿ ಕಚೇರಿ ಎನ್ನುವುದು ಹಳಸಿದ ಮಾತು.‌ ವಿಧೇಯಕವನ್ನು ಮರಳಿ ಕಳುಹಿಸಿದರೆ ಅದಕ್ಕೆ ಸರ್ಕಾರ ಸ್ಪಷ್ಟೀಕರಣ ಕೊಟ್ಟು ಗೊಂದಲ ನಿವಾರಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾವು ಸರ್ಕಾರ ಬೀಳಿಸಲ್ಲ

“ಬಿಜೆಪಿ ಎಂದಿಗೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ. ಅಂತಹ ಅವಶ್ಯಕತೆ ನಮಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ. ಡಿ ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಹೀಗೆ ಎಲ್ಲರೂ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಈ ವಿಷಯ ಬಹಳ ಚರ್ಚೆಯಾಗುತ್ತಿದೆ” ಎಂದರು.

“ಲೋಕಸಭೆ ಚುನಾವಣೆಯಲ್ಲಿ ಸೋತ ಕೂಡಲೇ, ಜನರಿಗೆ ನಿಯತ್ತಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ನಿಂದಿಸುತ್ತಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಿದ್ದು, ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ಬೆಂಗಳೂರಿನ ಜನರನ್ನು ಕಾಂಗ್ರೆಸ್ ನಾಯಕರು ಹೀಯಾಳಿಸಿ ಮಾತಾಡುತ್ತಾರೆ. ಬೆಂಗಳೂರಿನ ಜನರ ಬಗ್ಗೆ ಮಾತಾಡುವ ನೈತಿಕತೆ ಅವರಿಗಿಲ್ಲ. ಜನರಿಗೆ ಕುಡಿಯುವ ನೀರು ನೀಡುವುದು ಸರ್ಕಾರದ ಕರ್ತವ್ಯ. ಹೀಗೆ ಮಾತಾಡಿದ್ದಕ್ಕೆ ಕಾಂಗ್ರೆಸ್ ಜನರ ಕ್ಷಮೆ ಯಾಚಿಸಬೇಕು” ಎಂದು ಆಗ್ರಹಿಸಿದರು.

“ರಾಜ್ಯದಲ್ಲಿ ಮೊದಲಿನಿಂದಲೂ ಹಿಂದೂಗಳಿಗೆ ರಕ್ಷಣೆ ಇಲ್ಲ. ಬಾಂಗ್ಲಾದಂತೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ಐವನ್ ಡಿಸೋಜ ಹೇಳಿದ್ದಾರೆ. ಅದಕ್ಕೆ ಹಿರಿಯ ನಾಯಕರು ಏನೂ ಸ್ಪಷ್ಟನೆ ನೀಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...