ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯದ ಇತರ ಸಚಿವರ ವಿರುದ್ಧ ‘ಅವಹೇಳನಕಾರಿ’ ಪೋಸ್ಟ್ ಮಾಡಿದ ಆರೋಪದಲ್ಲಿ ಕರ್ನಾಟಕ ಬಿಜೆಪಿಯ ಎಕ್ಸ್ ಖಾತೆಯ ವಿರುದ್ಧ ಪ್ರಕರಣ ದಾಖಲಾಗಿದೆ.
ಕರ್ನಾಟಕ ಬಿಜೆಪಿ ‘ಸ್ಕ್ಯಾಮ್ ಲಾರ್ಡ್’ ಎಂಬ ಶೀರ್ಷಿಕೆಯೊಂದಿಗೆ ಸಚಿವರ ಚಿತ್ರಗಳಿರುವ ಪೋಸ್ಟರ್ ಒಂದನ್ನು ಪೋಸ್ಟ್ ಮಾಡಿದ್ದು, “ಇದು ಕರ್ನಾಟಕವನ್ನು ಹಗಲಿರುಳು ಲೂಟಿ ಹೊಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ಸ್ಕ್ಯಾಮ್ ಸಾಮ್ರಾಜ್ಯದ ಅಸಲಿ ಕತೆ” ಎಂದು ಬರೆಯಲಾಗಿದೆ.
ಇದನ್ನು ಓದಿದ್ದೀರಾ? ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು
ಈ ಪೋಸ್ಟ್ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ದೂರಿನಲ್ಲಿ, ಬಿಜೆಪಿಯ ಎಕ್ಸ್ ಖಾತೆಯು “ಚಾರಿತ್ರ್ಯ ಹರಣ ಮತ್ತು ಸಮಾಜದಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.
ಇದು ಕರ್ನಾಟಕವನ್ನು ಹಗಲಿರುಳು ಲೂಟಿ ಹೊಡೆಯುತ್ತಿರುವ @INCKarnataka ಸರ್ಕಾರದ ಸ್ಕ್ಯಾಮ್ ಸಾಮ್ರಾಜ್ಯದ ಅಸಲಿ ಕತೆ!!#CongressFailsKarnataka #ScamSarkara pic.twitter.com/lhgJ9PALH2
— BJP Karnataka (@BJP4Karnataka) January 29, 2026
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಮಾಡಿತ್ತು. ಬಿಜೆಪಿ ಬಹಳ ಸಮಯದಿಂದ ಕರ್ನಾಟಕ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ. ಹೀಗೆ ಉಭಯ ಪಕ್ಷಗಳು ಪರಸ್ಪರ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ.





