ಹೈಕಮಾಂಡ್‌ಗೆ ದೂರು | ಕೆಎನ್ ರಾಜಣ್ಣ, ಸತೀಶ್​ ಜಾರಕಿಹೊಳಿರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹ

Date:

ಸಹಕಾರ ಸಚಿವ ಕೆ ಎನ್ ರಾಜಣ್ಣ ಮತ್ತು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರೇ ದೂರು ನೀಡಿದ್ದಾರೆ.

ಕಾಂಗ್ರೆಸ್​​ನ 10 ಕಾರ್ಯಕರ್ತರು ದೂರು ಪತ್ರ ಬರೆದಿದ್ದು, “ಸಚಿವ ಕೆಎನ್​ ರಾಜಣ್ಣ ಅವರು ಪದೇ ಪದೆ ಎಐಸಿಸಿ ಅಧ್ಯಕ್ಷ, ಕೆಪಿಸಿಸಿ ಅಧ್ಯಕ್ಷರ ಆದೇಶದ ವಿರುದ್ಧ ಮಾತನಾಡುತ್ತಿದ್ದಾರೆ. ಅನವಶ್ಯಕವಾಗಿ ಡಿಸಿಎಂ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಹೀಗಾಗಿ ಕೆ ಎನ್​​ ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡಬೇಕು” ಎಂದು ಆಗ್ರಹಿಸಿದ್ದಾರೆ.

“ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಕೂಡ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದೆ. ಅವರ ಇತ್ತೀಚಿನ ಹೇಳಿಕೆಗಳು ಮತ್ತು ನಡವಳಿಕೆಯು ಪಕ್ಷಕ್ಕೆ ಹಿನ್ನಡೆ ಉಂಟುಮಾಡುತ್ತಿದೆ. ಪಕ್ಷ ಸಂಘಟನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ 18ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಖಚಿತ. ಕೆಲವು ಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುತ್ತಿದ್ದು ಶಿಸ್ತು ಕ್ರಮ ಜರುಗಿಸುವಂತೆ ಮನವಿ ಮಾಡುತ್ತಿದ್ದೇವೆ” ಎಂದು ಎಐಸಿಸಿ ನಾಯಕರಿಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

“ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ತಂದರು. ಕಾಂಗ್ರೆಸ್ ಸರಕಾರ ನೀಡಿದ ಐದು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ನೀಡುತ್ತಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಸರ್ಕಾರ ನೀಡಿದ ಹಲವು ಯೋಜನೆಗಳು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ತಲುಪುತ್ತಿದ್ದು, ಇದನ್ನು ಹೆಚ್ಚಿನ ರೀತಿಯಲ್ಲಿ ತಲುಪಿಸಲು ಕೆಲವು ಸಚಿವರು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಈ ಇಬ್ಬರು ಸಚಿವರ ಹೇಳಿಕೆ ಪಕ್ಷಕ್ಕೆ ಮುಜುಗರ ತರುತ್ತಿದೆ” ಎಂದಿದ್ದಾರೆ.

satish rajanna11

“ಸಚಿವರ ಔತಣಕೂಟಗಳ ಹೆಸರಿನಲ್ಲಿ ಪದೇ ಪದೇ ರಾಜಕೀಯ ಮಾಡುವುದು ಅತ್ಯಂತ ಕೆಟ್ಟ ಅಭ್ಯಾಸ, ಜನರಿಗೆ ತಪ್ಪು ಸಂದೇಶ ರವಾನೆ ಮಾಡುವ ಇಂತಹ ಚಟುವಟಿಕೆಗಳನ್ನು ಕಾಂಗ್ರೆಸ್ ಪಕ್ಷ ಸಹಿಸಬಾರದು.
ಕೆ.ಎನ್.ರಾಜಣ್ಣ ಅವರು ಸಚಿವರಾದ ನಂತರ ತಮಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ” ಎಂದು ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...