ನಕಲಿ ಪತ್ರ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ; ಎಸ್‌ಪಿಗೆ ದೂರು ಸಲ್ಲಿಸಿದ ಶಾಸಕ ಬಿ ಆರ್‌ ಪಾಟೀಲ್‌

Date:

ನಕಲಿ ಪತ್ರದ ಕುರಿತು ಸಮಗ್ರ ತನಿಖೆ ನಡೆಸಿ ಸುಳ್ಳು ಸುದ್ದಿ ಸೃಷ್ಠಿಸಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಶಾಸಕ ಬಿ ಆರ್ ಪಾಟೀಲ್ ಕಲಬುರಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ಎಸ್‌ಪಿಗೆ ಸಲ್ಲಿಸಿದ ದೂರಿನಲ್ಲಿ, “ಶಾಸಕನಾದ ನನ್ನ ಹೆಸರಿನಲ್ಲಿ ಹಳೆ ಲೆಟರ್‌ ಹೆಡ್‌ ಉಪಯೋಗಿಸಿ ಇಲ್ಲಸಲ್ಲದ ವಿಷಯವನ್ನು ಪ್ರಸ್ತಾಪ ಮಾಡಿ ನನ್ನ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ದ್ವೇಷ ಹುಟ್ಟಿಸಿ ಅದರ ರಾಜಕೀಯ ಲಾಭ ಪಡೆಯಲು ಕೆಲವರು ಹುನ್ನಾರ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ನಕಲಿ ಪತ್ರದಲ್ಲಿ ಸಹಿ ಮಾಡಿದ್ದು, ನನ್ನ ಹಸ್ತಾಕ್ಷರದ ಪ್ರತಿಯನ್ನು ಪೇಸ್ಟ್‌ ಮಾಡಿದ್ದಾರೆ. ಕಳೆದ ಬಾರಿ ನಾನು ಶಾಸಕನಾಗಿದ್ದಾಗ ಕಲಬುರಗಿ ಶಾಂತಿ ನಗರದಲ್ಲಿ ವಾಸವಿದ್ದೆ. ಅದೇ ವಿಳಾಸವಿರುವ ಲೆಟರ್‌ ಹೆಡ್‌ ಕಲರ್‌ ಜೆರಾಕ್ಸ್‌ ತೆಗೆದು ಸುದ್ದಿ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನಾನು ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿ ವಾಸ ಮಾಡುತ್ತಿದ್ದು, ಈಗ ಬಳಸುವ ಲೆಟರ್‌ಹೆಡ್‌ನಲ್ಲಿ ಹೊಸ ವಿಳಾಸವಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜುಲೈ 24ರಂದು ಮುಖ್ಯಮಂತ್ರಿಗೆ ಪತ್ರ ನೀಡಿರುವುದಾಗಿ ದಿನಾಂಕ ನಮೂದಿಸಲಾಗಿದೆ. ಆದರೆ, ನಾನು ಜುಲೈ 23ರಂದು ಬೆಂಗಳೂರಿನಿಂದ ರಾತ್ರಿ ರೈಲಿನಲ್ಲಿ ಹೊರಟು ಜು. 24ರ ಬೆಳಗ್ಗೆ ಕಲಬುರಗಿಗೆ ತಲುಪಿರುತ್ತೆನೆ” ಎಂದು ತಿಳಿಸಿದ್ದಾರೆ.

“ಪತ್ರದಲ್ಲಿ ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಸ್ಥಳೀಯ ಶಾಸಕರು ನಾವಾಗಿದ್ದರೂ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿದೆ ಎಂಬ ಆರೋಪ ಹೊರಿಸಿ ಈ ರೀತಿ ಸುಳ್ಳು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದು ತನಿಖೆ ಆಗಬೇಕು. ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಬಯಲಿಗೆ ಬರಬೇಕು. ಅಂತವರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಿಯಾಂಕ್‌ ಖರ್ಗೆ ಮತ್ತು ನನ್ನ ನಡುವೆ ಮನಸ್ಥಾಪ ಮೂಡಿಸಲು ನಕಲಿ ಪತ್ರ ಸೃಷ್ಟಿ: ಬಿ ಆರ್‌ ಪಾಟೀಲ್

ಬಿಜೆಪಿ ನಕಲಿ ಸೃಷ್ಟಿಯ ಮೊರೆ ಹೋಗಿದೆ

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ನಮ್ಮ ಸರ್ಕಾರವನ್ನು ವಿರೋಧಿಸಲು, ಆಪಾದಿಸಲು ಬಿಜೆಪಿಗೆ ಈಗ ವಾಸ್ತವ ವಿಷಯಗಳೇ ಇಲ್ಲದಾಗಿದೆ, ಹಾಗಾಗಿ ನಕಲಿ ಸೃಷ್ಟಿಯ ಮೊರೆ ಹೋಗಿದೆ. ಬಿಜೆಪಿಯ ಫೇಕ್ ಫ್ಯಾಕ್ಟರಿಯಲ್ಲಿ ತಯಾರಾದ ನಕಲಿ ಪತ್ರದ ಕುರಿತು ನಮ್ಮ ಶಾಸಕ ಬಿ ಆರ್ ಪಾಟೀಲ್ ಅವರು ಕಲಬುರಗಿ ಎಸ್‌ಪಿ ಅವರನ್ನು ಭೇಟಿಯಾಗಿ ನಕಲಿ ಪತ್ರದ ಕುರಿತು ಸಮಗ್ರ ತನಿಖೆಯಾಗಬೇಕೆಂದು ದೂರು ಸಲ್ಲಿಸಿದರು” ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...