ಚನ್ನಪಟ್ಟಣದ ಅಭಿವೃದ್ಧಿ ನನ್ನ ಜವಾಬ್ದಾರಿ, ಯೋಗೇಶ್ವರ್‌ ಗೆಲ್ಲಿಸಿ: ಸಿದ್ದರಾಮಯ್ಯ ಕರೆ

Date:

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಯೋಗೀಶ್ವರ್ ಪರ ಬೃಹತ್ ರೋಡ್ ಶೋ ನಲ್ಲಿ‌ ಭಾಗವಹಿಸಿ ಮಾತನಾಡಿದ ಅವರು, “ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡುತ್ತೇವೆ” ಎಂದು ತಿಳಿಸಿದರು.

“ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೀಶ್ವರ್ ಅವರೇ ಭರ್ಜರಿ ಜಯಗಳಿಸೋದು ಖಚಿತ” ಎಂದು ಭರವಸೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್‌, ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣಕ್ಕೆ 500 ಕೋಟಿ ಅನುದಾನ: ಡಿ ಕೆ ಶಿವಕುಮಾರ್

“ಚನ್ನಪಟ್ಟಣಕ್ಕೆ ಹೊಸರೂಪವನ್ನು ನೀಡುವುದಕ್ಕೆ ನಾವು ಬದ್ಧವಾಗಿದ್ದೇವೆ. ಕರ್ನಾಟಕದ ಅಭಿವೃದ್ದಿಯೇ ನಮ್ಮ ಸಂಕಲ್ಪ. ಈ ಗುರಿಯನ್ನಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ. ಚನ್ನಪಟ್ಟಣದ ಅಭಿವೃದ್ದಿಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಸುಮಾರು 500 ಕೋಟಿ ಅನುದಾನ ನೀಡಲಾಗಿದೆ”‌ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

“ಎರಡು ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ದಿಗೆ ತಮ್ಮ ಕೊಡುಗೆ ಏನು ಎನ್ನುವ ಪಟ್ಟಿಯನ್ನು ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಕ್ಷೇತ್ರದ ಅಭಿವೃದ್ದಿಗೆ ಅವರ ಸಾಕ್ಷಿ ಗುಡ್ಡೆಯನ್ನು ಜನರ ಮುಂದಿಡಲಿ” ಎಂದು ಸವಾಲು ಹಾಕಿದರು.

“ಶುಭ ಘಳಿಗೆಯಲ್ಲಿ ಯೋಗೇಶ್ವರ್ ಪಕ್ಷ ಸೇರಿದ್ದಾರೆ. ಇವರ ಕೈ ಬಲಪಡಿಸುವುದರ ಮೂಲಕ ದೇಶಕ್ಕೆ ಬಲವಾದ ಸಂದೇಶ ನೀಡಬೇಕು. ಅತಿ ಹೆಚ್ಚು ಮತಗಳ ಅಂತರದಿಂದ ಇವರನ್ನು ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

ಸಚಿವರಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಮಾಜಿ ಸಚಿವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಮಾಜಿ ಸಂಸದರಾದ ಡಿ.ಕೆ.ಸುರೇಶ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...