ರೆಸಾರ್ಟ್, ಅತಿಥಿ ತಂಗುದಾಣಗಳ ಲ್ಯಾಂಡ್ ಆಡಿಟಿಂಗ್ ನಡೆಸಿ: ಸಿಎಂಗೆ ರಮೇಶ್‌ ಬಾಬು ಪತ್ರ

Date:

  • ‘ಬೆಂಗಳೂರು ಸೇರಿ ಒಂದು ನೂರು ಕಿಮೀ ವ್ಯಾಪ್ತಿಯೊಳಗೆ ಆಡಿಟಿಂಗ್‌ ಆಗಲಿ’
  • ‘ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿ’

ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಒಂದು ನೂರು ಕಿಮೀ ವ್ಯಾಪ್ತಿಯ ಒಳಗಿನ ರೆಸಾರ್ಟ್ ಹಾಗೂ ಅತಿಥಿ ತಂಗುದಾಣಗಳ ಭೂಮಿ ಒತ್ತುವರಿ ಕುರಿತು ಲ್ಯಾಂಡ್ ಆಡಿಟಿಂಗ್ ನಡೆಸಬೇಕು ಎಂದು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು, “ತಂಗುದಾಣಗಳ ಅಕ್ರಮ ಭೂಮಿ ಸ್ವಾಧೀನ ಕುರಿತು ಲ್ಯಾಂಡ್ ಆಡಿಟಿಂಗ್ ಮಾಡಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ರಾಜ್ಯ ಸರ್ಕಾರದ ಸಂಪನ್ಮೂಲ ಕ್ರೋಡೀಕರಣದ ದೃಷ್ಟಿಯಿಂದ ಅವಶ್ಯಕವಾಗಿದ್ದು, ತಾವು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡುವುದರ ಮೂಲಕ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಪತ್ರದಲ್ಲೇನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ದಿನಗಳಲ್ಲಿ ಕಂದಾಯ ಭೂಮಿಯ ಬೆಲೆ ಏರಿಕೆಯನ್ನು ನಾವು ಮನಗಂಡಿರುತ್ತೇವೆ. ವಿಶೇಷವಾಗಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಭೂಮಿಯ ಬೆಲೆಯು ಬಹಳಷ್ಟು ಏರಿಕೆಯಾಗಿದ್ದು, ಕೆಲವರು ವಾಣಿಜ್ಯ ಉದ್ದೇಶಗಳಿಗೆ ಮತ್ತು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸರ್ಕಾರಿ ಭೂಮಿಗಳನ್ನು ಒತ್ತುವರಿ ಮಾಡುತ್ತಿರುವುದನ್ನು ಮತ್ತು ಅಕ್ರಮ ದಾಖಲೆಗಳನ್ನು ನಿರ್ಮಿಸಿ ಸ್ವಾಧೀನದಲ್ಲಿರುವುದು ಅಂಕಿ ಅಂಶಗಳ ಮೂಲಕ ಬಹಿರಂಗವಾಗಿರುತ್ತದೆ. ಎ.ಟಿ.ರಾಮಸ್ವಾಮಿಯವರ ಸದನ ಸಮಿತಿ, ವಿ.ಬಾಲಸುಬ್ರಮಣ್ಯನ್‍ರವರ ಸಮಿತಿ ನೀಡಿರುವ ವರದಿಗಳಲ್ಲಿ ದಾಖಲೆಯ ಸಮೇತ ಇಂತಹ ಭೂ ಕಬಳಿಕೆ ಪ್ರಕರಣಗಳನ್ನು ಬಹಿರಂಗಪಡಿಸಲಾಗಿದೆ.

ಬೆಂಗಳೂರು ನಗರ ಮತ್ತು ಇದರ ಸುಮಾರು ಒಂದು ನೂರು ಕಿಮೀ ವ್ಯಾಪ್ತಿಯಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ರೆಸಾರ್ಟ್‍ಗಳು (ತಂಗುದಾಣಗಳು) ಮತ್ತು ಸ್ಟೇ ಹೋಮ್‍ಗಳು ತಲೆಯೆತ್ತಿವೆ. ವಿಶೇಷವಾಗಿ ಬಹುತೇಕ ಇಂತಹ ತಂಗುದಾಣಗಳು ಸರ್ಕಾರಿ ಕಂದಾಯ ಭೂಮಿಯ ಒತ್ತುವರಿ ಅಥವಾ ಅಕ್ರಮ ದಾಖಲೆಯ ಮೂಲಕ ಸ್ವಾಧೀನವನ್ನು ಹೊಂದಿರುತ್ತವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸಮಾಧಾನದ ಕಿಡಿ ಜ್ವಾಲೆಯಾಗಿ ಸರ್ಕಾರವನ್ನು ಸುಡದಿರಲಿ

ದಾಖಲೆಗಳಲ್ಲಿ ಇರುವ ವಿಸ್ತೀರ್ಣಕ್ಕೂ ಅವರು ಸ್ವಾಧೀನದಲ್ಲಿರುವ ವಿಸ್ತೀರ್ಣಕ್ಕೂ ಬಹಳಷ್ಟು ವ್ಯತ್ಯಾಸ ಇರುತ್ತದೆ. ರೆವಿನ್ಯೂ ದಾಖಲೆಗಳನ್ನು ತಿದ್ದುವ ಮೂಲಕ ಸರ್ಕಾರಿ ಭೂಮಿಯಲ್ಲಿ ವಿಲಾಸಿ ತಂಗುದಾಣಗಳನ್ನು ಹೊಂದಿರುವ ಮತ್ತು ನಡೆಸುತ್ತಿರುವ ಅನೇಕ ದೂರುಗಳು ಸರ್ಕಾರದಲ್ಲಿ ದಾಖಲಾಗಿರುತ್ತವೆ. ರಾಜ್ಯ ಸರ್ಕಾರವು ಇಂತಹ ಅನುಮಾನಿತ ಮತ್ತು ಆರೋಪಿತ ರೆಸಾರ್ಟ್‍ಗಳ/ ತಂಗುದಾಣಗಳ ಭೂಮಿ ಲೆಕ್ಕ ಪರಿಶೋಧನೆಯನ್ನು (ಲ್ಯಾಂಡ್ ಆಡಿಟಿಂಗ್) ಮಾಡುವುದರ ಮೂಲಕ ಒತ್ತುವರಿಯಾಗಿರುವ ಸರ್ಕಾರಿ ಭೂಮಿಯನ್ನು ತೆರವುಗೊಳಿಸಿ ಅಂತಹ ಭೂಮಿಯನ್ನು ಬಹಿರಂಗ ಹರಾಜಿನ ಮೂಲಕ ವಿಲೇವಾರಿ ಮಾಡಿದರೆ ಸಾವಿರಾರು ಕೋಟಿ ರೂಪಾಯಿಗಳ ಆದಾಯ ಸರ್ಕಾರಕ್ಕೆ ಬರಲಿದೆ.

ಬೆಂಗಳೂರು ನಗರ, ನಗರ ಜಿಲ್ಲೆ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು 75 ಸಾವಿರ ಎಕರೆ ಭೂಮಿಯನ್ನು ಒತ್ತುವರಿ ಮಾಡಿರುವ ಮಾಹಿತಿಯು ಲಭ್ಯವಿರುತ್ತದೆ. ಅದೇ ರೀತಿ ಬೆಂಗಳೂರು ಮತ್ತು ಇದರ ಸುತ್ತಮುತ್ತಲಿನ ಬಹುತೇಕ ತಂಗುದಾಣಗಳು ಸುಮಾರು 5 ರಿಂದ 6 ಸಾವಿರ ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಸ್ವಾಧೀನ ಪಡೆದಿರುವ ಮಾಹಿತಿ ಇರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...