ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಡಿಸಿಎಂ ಡಿ ಕೆ ಶಿವಕುಮಾರ್

Date:

ಮುಂದಿನ ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.

ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮೊದಲು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆ ಬಳಿಕ ಅದನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಈಗ ಫೆ.17ರಂದು ನಡೆಸಲು ತೀರ್ಮಾನಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಸಮಾವೇಶ ಮಂಗಳೂರಿನಲ್ಲಿ ನಡೆಯಲಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಐಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಈ ಸಮಾವೇಶಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಪಕ್ಷದ ಕಾರ್ಯಕರ್ತರು ಆಗಮಿಸಬೇಕು. ಸಮಾವೇಶವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು” ಎಂದು ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಕನ್ನಡ ಕಡ್ಡಾಯ | ಸರ್ಕಾರದ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು

ರಾಜ್ಯಪಾಲರು ತಮ್ಮ ತೀರ್ಮಾನ ಮರು ಪರಿಶೀಲಿಸಲಿ

“ವ್ಯಾಪಾರ ಸಂಸ್ಥೆಗಳ ಸೂಚನಾ ಫಲಕಗಳಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಾಪಸ್ ಕಳುಹಿಸಿದ್ದಾರೆ. ನೀವು ಕರ್ನಾಟಕದಲ್ಲಿದ್ದೀರಿ. ಇದೊಂದು ಭಾವನಾತ್ಮಕ ವಿಚಾರ. ಹಾಗಾಗಿ, ರಾಜ್ಯಪಾಲರು ತಮ್ಮ ತೀರ್ಮಾನವನ್ನು ಮತ್ತೊಮ್ಮೆ ಪರಿಶೀಲನೆ ನಡೆಸಬೇಕು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...