ಕಾಂಗ್ರೆಸ್‌ 5ನೇ ಪಟ್ಟಿ ಬಿಡುಗಡೆ : ಪುಲಿಕೇಶಿ ನಗರಕ್ಕೆ ಎ ಸಿ ಶ್ರೀನಿವಾಸ್‌, ಮುಳಬಾಗಿಲಿಗೆ ಮುದ್ದುಗಂಗಾಧರ್‌

Date:

  • ಐದನೇ ಪಟ್ಟಿಯಲ್ಲಿ ನಾಲ್ಕು ಕ್ಷೇತ್ರಗಳ ಘೋಷಣೆ ಮಾಡಿದ ಕಾಂಗ್ರೆಸ್‌
  • ಇನ್ನೂ ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಾಕಿ ಉಳಿಸಿಕೊಂಡ ಕೈ ಪಡೆ

ಕಾಂಗ್ರೆಸ್‌ನ ಬಹು ನಿರೀಕ್ಷಿತ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆಯಾಗಿದ್ದು, ನಾಲ್ಕು ಕ್ಷೇತ್ರಗಳ ಉಮೇದುವಾರರನ್ನು ಕೈ ಪಕ್ಷ ಘೋಷಿಸಿದೆ.

ವಿವಾದಿತ ಪುಲಿಕೇಶಿನಗರವನ್ನೂ ಒಳಗೊಂಡಂತೆ ಇತರೆ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿರುವ ಕೈ ಪಡೆ ಇನ್ನೂ ನಾಲ್ಕು ಕ್ಷೇತ್ರಗಳ ಉಮೇದುವಾರಿಕೆಯನ್ನು ಕುತೂಹಲದಲ್ಲಿಟ್ಟಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದುರು ಪ್ರಭಲ ಅಭ್ಯರ್ಥಿ ಹಾಕುವುದಾಗಿ ಹೇಳಿದ್ದ ಕಾಂಗ್ರೆಸ್‌ ಇಲ್ಲಿ ಹೊಸ ಮುಖ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌ ಅವರನ್ನು ಕಣಕ್ಕಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮೊದಲು ಈ ಕ್ಷೇತ್ರದಿಂದ ಮೊಹ್ಮದ್‌ ಯೂಸೂಪ್‌ ಸುರಾನಾ ಅವರನ್ನು ಕಣಕ್ಕಿಳಿಸಿತು. ಈಗ ಅವರನ್ನು ಬದಲಾಯಿಸಿ ಹೊಸ ಅಭ್ಯರ್ಥಿ ಯಾಸಿರ್‌ಗೆ ಅವಕಾಶ ನೀಡಿದೆ. ನಾಲ್ಕನೇ ಪಟ್ಟಿ

ಪುಲಿಕೇಶಿನಗರಕ್ಕೆ ನೆಡೆದಿದ್ದ ಟಿಕೆಟ್‌ ಗುದ್ದಾಟದಲ್ಲಿ ಅಖಂಡ ಶ್ರೀನಿವಾಸ್‌ ಮೂರ್ತಿ ಮೀರಿಸಿ ಟಿಕೆಟ್‌ ಪಡೆಯುತ್ತಾರೆಂದು ಬಿಂಬಿತವಾಗಿದ್ದ ಮಾಜಿ ಮೇಯರ್‌ ಸಂಪತ್‌ ಕುಮಾರ್‌ ಅವರಿಗೂ ಟಿಕೆಟ್‌ ತಪ್ಪಿದ್ದು, ಈ ಹಿಂದೆ ಮಹದೇವಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಎ ಸಿ ಶ್ರೀನಿವಾಸ್‌ಗೆ ಇಲ್ಲಿನ ಟಿಕೆಟ್‌ ನೀಡಲಾಗಿದೆ.

ಹಾಗೆಯೇ ಎಲ್ಲರ ಕುತೂಹಲ ಕಾಯಿಸಿದ್ದ ಮುಳಬಾಗಿಲು ಕ್ಷೇತ್ರಕ್ಕೂ ಕಾಂಗ್ರೆಸ್‌ ಹೊಸ ಮುಖ, ಪಕ್ಷದ ಕಾರ್ಯಕರ್ತ ಡಾ. ಮುದ್ದುಗಂಗಾಧರ್‌ ಅವರನ್ನು ಕಣಕ್ಕಿಳಿಸಿದೆ.ನಾಲ್ಕನೇ ಪಟ್ಟಿ

ಮುದ್ದುಗಂಗಾಧರ್‌ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಆಪ್ತ, ಸಂವಿಧಾನ ಕರಡು ಸಮಿತಿ ಸದಸ್ಯರಾಗಿದ್ದ ಟಿ ಚೆನ್ನಯ್ಯನವರ ಮೊಮ್ಮಗ.

ಉಳಿದಂತೆ ಕೆ ಆರ್‌ ಪುರಕ್ಕೆ ಡಿ ಕೆ ಮೋಹನ್‌ ಅವರನ್ನು ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನಾಗಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...