‘ಗೋಲ್‌ಪೋಸ್ಟ್‌’ ಬದಲಿಸುತ್ತಿರುವವರು ಒಲಿಂಪಿಕ್ಸ್ ಬಗ್ಗೆ ಮಾತನಾಡುತ್ತಾರೆ: ಬಿಜೆಪಿ ಪ್ರಣಾಳಿಕೆಗೆ ಕಾಂಗ್ರೆಸ್, ಎಎಪಿ ಟೀಕೆ

Date:

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿಯು ‘ಸಂಕಲ್ಪ ಪತ್ರ’ ಎಂಬ ಶೀರ್ಷಿಕೆಯ ಪ್ರಣಾಳಿಕೆ ಬಿಡುಗಡೆ ಮಾಡಿದ್ದು ಈ ಪ್ರಣಾಳಿಕೆಯನ್ನು ಟೀಕಿಸಿದ ವಿಪಕ್ಷಗಳು ‘ಗೋಲ್‌ಪೋಸ್ಟ್‌’ ಬದಲಿಸುತ್ತಿರುವವರು ಒಲಿಂಪಿಕ್ಸ್ ಬಗ್ಗೆ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದೆ.

ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಸೇರಿದಂತೆ ವಿರೋಧ ಪಕ್ಷಗಳು ಬಿಜೆಪಿ ಪ್ರಣಾಳಿಕೆಯನ್ನು ಟೀಕೆ ಮಾಡಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕರಾದ ಪವನ್ ಖೇರಾ, ಸುಪ್ರಿಯಾ ಶ್ರೀನತೆ ಮತ್ತು ಅಮಿತಾಭ್ ದುಬೆ “ಬಿಜೆಪಿ ನಾಯಕರು ಈಗ ತುಂಬಾ ಸುಳ್ಳು ಹೇಳುತ್ತಾರೆ, ಯಾರೂ ನಂಬುವುದಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಕೆಲವು ವರ್ಷಗಳಿಂದ ದೇಶದ ಯುವಕರು ಮತ್ತು ರೈತರಿಗೆ ಅನುಕೂಲವಾಗುವ ಯಾವುದೇ ಕೆಲಸವನ್ನು ಬಿಜೆಪಿ ಮಾಡಿಲ್ಲ. ಯುವಕರು ಉದ್ಯೋಗಕ್ಕಾಗಿ ಹಾತೊರೆಯುತ್ತಿದ್ದಾರೆ. ಹಣದುಬ್ಬರದಲ್ಲಿ ಏರಿಕೆ ಕಂಡುಬರುತ್ತಿದೆ. ಆದರೆ ಬಿಜೆಪಿ ನಾಯಕರು ಮಾತ್ರ ಇದೆಲ್ಲದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಹಾಗಿರುವಾಗ ಪ್ರಣಾಳಿಕೆಯನ್ನು ನಂಬುವುದು ಸರಿಯಲ್ಲ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಿಸಿದ್ದಾರೆ.

“ಹಿಂದಿನ ಯಾವುದೇ ಸರ್ಕಾರಗಳು ಬಿಜೆಪಿಯಂತೆ ಗೋಲ್‌ಪೋಸ್ಟ್‌ಗಳನ್ನು ಬದಲಾಯಿಸುವ ‘ರೋಗ’ವನ್ನು ಹೊಂದಿರಲಿಲ್ಲ. 2014ರಲ್ಲಿ ನೀವು ಏನು ಹೇಳಿದ್ದೀರೋ ಅದರ ಬಗ್ಗೆ 2019ರಲ್ಲಿ ಯಾವುದೇ ಮಾಹಿತಿ ನೀಡಿಲ್ಲ” ಎಂದು ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ| ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ ಪತ್ರ’ ಬಿಡುಗಡೆ

“2024ರಲ್ಲಿ 2047ರ ಬಗ್ಗೆ ಮಾತನಾಡುತ್ತಿದ್ದೀರಿ. ಅವರು (ಬಿಜೆಪಿ) 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುವುದಾಗಿ ಪ್ರಣಾಳಿಕೆಯಲ್ಲಿ ಬರೆದಿದ್ದಾರೆ. ಆಗ ನೀವು ಎಲ್ಲಿರುತ್ತೀರಿ, ನಿಮ್ಮ ಸರ್ಕಾರ ಇರುತ್ತಾ? ನೀವು ಕಳೆದ 5 ವರ್ಷಗಳ ಬಗ್ಗೆ ಮೊದಲು ಮಾತನಾಡಿ ಬಳಿಕ ಮುಂಬರುವ ಐದು ವರ್ಷಗಳ ಬಗ್ಗೆ ಮಾತನಾಡಿ” ಎಂದು ಪವನ್ ಖೇರಾ ಹೇಳಿದರು.

ಪ್ರಣಾಳಿಕೆಯನ್ನು ‘ಕ್ಷಮಾಪತ್ರ’ ಮತ್ತು ‘ಜುಮ್ಲಾ ಪತ್ರ’ (ಪೊಳ್ಳು ಆಶ್ವಾಸನೆ) ಎಂದು ಕರೆದ ಪವನ್ ಖೇರಾ “ಬಿಜೆಪಿಯ ಸಂಕಲ್ಪ ಪತ್ರ ಎಂಬ ಹೆಸರಿನ ಬಗ್ಗೆ ನಮಗೆ ತೀವ್ರ ಆಕ್ಷೇಪವಿದೆ. ಅದನ್ನು ನಾವು ಕ್ಷಮಾಪತ್ರ ಎಂದು ಹೆಸರಿಸಬೇಕು. ಮೋದಿ ಅವರು ದೇಶದ ದಲಿತರು, ರೈತರು, ಯುವಕರು ಮತ್ತು ಬುಡಕಟ್ಟು ಜನರ ಕ್ಷಮೆ ಕೇಳಬೇಕಿತ್ತು” ಎಂದಿದ್ದಾರೆ.

“ಕಪ್ಪುಹಣದ ವಿರುದ್ಧದ ಕ್ರಮದಿಂದ ಹಿಡಿದು ರೈತರ ಸಂಕಷ್ಟದವರೆಗೆ, ವಿದೇಶಾಂಗ ನೀತಿಯವರೆಗೆ ಪ್ರಣಾಳಿಕೆಯಲ್ಲಿ ಮಾಡಿದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ. 2022 ರ ವೇಳೆಗೆ ನಾವು ರೈತರ ಆದಾಯವನ್ನು ದ್ವಿಗುಣಗೊಳಿಸುತ್ತೇವೆ ಎಂದು ಬಿಜೆಪಿ ಹೇಳಿದೆ. ಆದರೆ ಇಂದು ರೈತರ ಆದಾಯ ಕಡಿಮೆಯಾಗಿದೆ, ಸಾಲ ದ್ವಿಗುಣವಾಗಿದೆ” ಎಂದು ಖೇರಾ ಟೀಮಿಸಿದರು.

ಇದನ್ನು ಓದಿದ್ದೀರಾ?   ಕಾಂಗ್ರೆಸ್‌ ಪ್ರಣಾಳಿಕೆ ‘ಮುಸ್ಲಿಂ ಲೀಗ್‌’ ಗುರುತು ಹೊಂದಿದೆ ಎಂದ ಮೋದಿ; ಬಿಜೆಪಿ ಇತಿಹಾಸ ನೆನಪಿಸಿದ ಕಾಂಗ್ರೆಸ್‌

ಇರಾನ್ ಮತ್ತು ಇಸ್ರೇಲ್ ನಡುವಿನ ಇತ್ತೀಚಿನ ಉದ್ವಿಗ್ನತೆಯ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಖೇರಾ, ಮೋದಿ ಸರ್ಕಾರದ ವಿದೇಶಾಂಗ ನೀತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಒಬ್ಬ ವ್ಯಕ್ತಿಯ ಸುಳ್ಳು ವೈಭವೀಕರಿಸಲ್ಪಟ್ಟಿದೆ. 10-12 ದಿನಗಳ ಹಿಂದೆ ಮೋದಿ ಸರ್ಕಾರ ಭಾರತೀಯ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿದೆ. ಈಗ ಸರ್ಕಾರವು ಅವರನ್ನು ಮರಳಿ ಕರೆತರಲು ಯುದ್ಧವನ್ನು ನಿಲ್ಲಿಸುತ್ತದೆಯೇ” ಎಂದು ಪ್ರಶ್ನಿಸಿದರು.

ಆಮ್ ಆದ್ಮಿ ಪಕ್ಷವೂ ಸಹ ಪ್ರಣಾಳಿಕೆಯನ್ನು ಟೀಕಿಸಿದೆ. ಎಎಪಿ ನಾಯಕಿ ಅತಿಶಿ, “ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಚುನಾವಣೆಗಾಗಿ ಬಿಜೆಪಿಯ ಜುಮ್ಲಾ ಪತ್ರವನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರಣಾಳಿಕೆಯು ಅವರು ನೀಡಿದ ಮತ್ತು ಎಂದಿಗೂ ಈಡೇರಿಸದ ಭರವಸೆಗಳನ್ನು ಎತ್ತಿ ತೋರಿಸುತ್ತದೆ” ವ್ಯಂಗ್ಯ ಮಾಡಿದ್ದಾರೆ.

“ಮೋದಿ ಅವರು ಯುವಕರಿಗೆ ಉದ್ಯೋಗದ ಭರವಸೆ ನೀಡಿದ್ದರು. 2019 ರಲ್ಲಿ ಚುನಾವಣಾ ಭರವಸೆಗಳಲ್ಲಿ ಇದು ಕೂಡಾ ಒಂದಾಗಿತ್ತು. ಆದರೆ ಕಳೆದ ಒಂಬತ್ತು ವರ್ಷಗಳಲ್ಲಿ ಮೋದಿ ಅವರು ಯಾವುದೇ ಉದ್ಯೋಗವನ್ನು ಒದಗಿಸಿಲ್ಲ. ಪದವೀಧರರು, ಸ್ನಾತಕೋತ್ತರ ಪದವೀಧರರು ಮತ್ತು ಯುವಕರು ನಿರುದ್ಯೋಗಿಗಳಾಗಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...