ಬಿಹಾರ ಚುನಾವಣೆ | ಎನ್‌ಡಿಎ ಮುನ್ನಡೆ; ನಮ್ಮ ‘ಮತಗಳ ಕಳವು’ ನಡೆದಿದೆ: ಕಾಂಗ್ರೆಸ್ ಆರೋಪ

Date:

ಬಿಹಾರ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಎನ್‌ಡಿಎ ಮುನ್ನಡೆ ಸಾಧಿಸಿದೆ. ಈ ನಡುವೆ “ನಮ್ಮ ಮತಗಳ ಕಳವು ನಡೆದಿದೆ” ಎಂದು ಬಿಹಾರ ಕಾಂಗ್ರೆಸ್ ಮುಖ್ಯಸ್ಥ ರಾಜೇಶ್ ರಾಮ್ ಹೇಳಿದ್ದಾರೆ. ಹಾಗೆಯೇ ಮತ ಎಣಿಕೆಯಲ್ಲಿ ಅಕ್ರಮ ನಡೆಯುತ್ತಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ 180ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಮಹಾಘಟಬಂಧನ 56ಕ್ಕೂ ಕಡಿಮೆ ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಒಟ್ಟಾರೆ ಚುನಾವಣೆಯು ಎನ್‌ಡಿಎ ಕಡೆ ವಾಲುವಂತಿದೆ. ಇವೆಲ್ಲವುದರ ನಡುವೆ ಕಾಂಗ್ರೆಸ್ ನಾಯಕರು ಮತಗಳ್ಳತನದ ಆರೋಪ ಮಾಡಿದೆ.

ಇದನ್ನು ಓದಿದ್ದೀರಾ? SIR ಮೂಲಕ ಬಿಹಾರ ಚುನಾವಣೆಯಲ್ಲಿ ಮತ ಕಳವು ನಡೆಸುವ ಪಿತೂರಿ ಯಶಸ್ಸಾಗಲು ಬಿಡಲ್ಲ: ರಾಹುಲ್ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಡಳಿತ ಪಕ್ಷವು ಮತಗಳನ್ನು ಕದಿಯುವ ಯತ್ನವನ್ನು ಮಾಡುತ್ತಲೇ ಇದೆ. ಎಣಿಕೆ ಕೇಂದ್ರಗಳ ಸುತ್ತಲೂ ಸರ್ವರ್‌ ವ್ಯಾನ್‌ಗಳು ಸುಳಿದಾಡುತ್ತಿವೆ. ಬೂತ್‌ಗಳಲ್ಲಿ ಅಕ್ರಮ ನಡೆಯುತ್ತಿವೆ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಮತ ಕಳ್ಳತನ ನಡೆದಿದೆ. ಇಲ್ಲಿನ ಜನರು ಅದೇ ಅನುಮಾನವನ್ನು ಹೊಂದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಬಿಹಾರದ ಮತದಾರರು ನಿರುದ್ಯೋಗ, ಪ್ರಶ್ನೆಪತ್ರಿಕೆ ಸೋರಿಕೆ, ಆರೋಗ್ಯ ಸೇವೆಯ ಕೊರತೆ ಮತ್ತು ನಿರಂತರ ವಲಸೆಯ ಸಂಕಷ್ಟದ ಬಗ್ಗೆ ಅಸಮಾಧಾನವನ್ನು ತೋರಿಸುತ್ತಿದ್ದಾರೆ. ತಮ್ಮ ಗಂಡಂದಿರು ರಾಜ್ಯದಿಂದ ಹೊರ ಹೋಗಿ ಹಣ ಗಳಿಸುವುದನ್ನು ಮಹಿಳೆಯರು ಬಯಸಲ್ಲ. ಯುವಕರು ಹತಾಶೆಗೊಂಡಿದ್ದಾರೆ. ಬಿಜೆಪಿ ಬೆಂಬಲದ 20 ವರ್ಷಗಳ ಆಡಳಿತವು ಜನರೇ ವಿಫಲವಾಗುವಂತೆ ಮಾಡಿದೆ” ಎಂದಿದ್ದಾರೆ.

ಇನ್ನು ಮತ ಎಣಿಕೆಯಲ್ಲಿ ಅಕ್ರಮ ನಡೆದರೆ ನೇಪಾಳ ಮಾದರಿ ಪ್ರತಿಭಟನೆಯ ಎಚ್ಚರಿಕೆಯನ್ನು ಆರ್‌ಜೆಡಿ ನಾಯಕರು ನೀಡಿದ್ದು, ಕಾಂಗ್ರೆಸ್ ನಾಯಕರೂ ಈ ಆತಂಕ ವ್ಯಕ್ತಪಡಿಸಿದ್ದಾರೆ. “ನಾವು ಯಾರಿಗೆ ಮತ ಹಾಕಿದ್ದೇವೆ ಎಂಬುದು ಜನರಿಗೆ ತಿಳಿದಿದೆ. ತಮ್ಮ ನಿರೀಕ್ಷೆಗೆ ಸರಿಯಾಗಿ ಫಲಿತಾಂಶ ಬರದಿದ್ದರೆ ಜನರು ಕೋಪಗೊಳ್ಳುವುದು ಸಹಜ” ಎಂದು ಅಭಿಪ್ರಾಯಿಸಿದ್ದಾರೆ.

ಬಿಹಾರದಲ್ಲಿ ಎರಡು ಹಂತದಲ್ಲಿ ನವೆಂಬರ್ 6 ಮತ್ತು 11ರಂದು ಚುನಾವಣೆ ನಡೆದಿದ್ದು ಇಂದು ಮತ ಎಣಿಕೆ ನಡೆಯುತ್ತಿದೆ. ಈ ಬಾರಿ ಬಿಹಾರದಲ್ಲಿ ದಾಖಲೆ ಪ್ರಮಾಣದಲ್ಲಿ ಮತದಾನ ನಡೆದಿದೆ. ಅರ್ಹ ಮತದಾರರಲ್ಲಿ ಸುಮಾರು ಶೇಕಡ 67ರಷ್ಟು ಮತ ಚಲಾಯಿಸಿದ್ದಾರೆ. ಇಂದು(ನ.14) ಮತ ಎಣಿಕೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...