ತಮಿಳುನಾಡು ರಾಜ್ಯಪಾಲರು ಆಯೋಜಿಸಿದ ಉಪಕುಲಪತಿಗಳ ಸಮಾವೇಶಕ್ಕೆ ಕಾಂಗ್ರೆಸ್, ಸಿಪಿಎಂ ವಿರೋಧ

Date:

ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಏಪ್ರಿಲ್ 25 ಮತ್ತು 26ರಂದು ಊಟಿಯಲ್ಲಿ ಆಯೋಜಿಸಿರುವ ವಿಶ್ವವಿದ್ಯಾಲಯದ ಉಪಕುಲಪತಿಗಳು ಮತ್ತು ರಿಜಿಸ್ಟ್ರಾರ್‌ಗಳ ಎರಡು ದಿನಗಳ ಸಮಾವೇಶವನ್ನು ತಮಿಳುನಾಡು ಕಾಂಗ್ರೆಸ್ ಮತ್ತು ಸಿಪಿಐಎಂ ತೀವ್ರವಾಗಿ ಟೀಕಿಸಿವೆ.

ರಾಜ್ಯಪಾಲರು ಮಸೂದೆಗಳಿಗೆ ಅನಿರ್ದಿಷ್ಟಾವಧಿಗೆ ಒಪ್ಪಿಗೆ ನೀಡದೆ ತಡೆಹಿಡಿದಿರುವುದನ್ನು ಸುಪ್ರೀಂ ಕೋರ್ಟ್‌ ಸಂವಿಧಾನಕ್ಕೆ ವಿರುದ್ಧವಾದುದ್ದು ಎಂದು ಹೇಳಿದೆ. ರಾಜ್ಯಪಾಲರ ಕ್ರಮವು ಸುಪ್ರೀಂ ಕೋರ್ಟ್‌ನ ಈ ತೀರ್ಪು ಮತ್ತು ಸಂವಿಧಾನದ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಕೆ. ಸೆಲ್ವಪೆರುಂಥಗೈ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಡಿಎಂಕೆ ನಾಯಕನನ್ನು ಸಚಿವರಾಗಿ ನೇಮಿಸಲು ನಕಾರ; ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಚಾಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಪ್ರೀಂ ಕೋರ್ಟ್ ತೀರ್ಪಿನ ನಂತರ ರಾಜ್ಯಪಾಲರು ರಾಜೀನಾಮೆ ನೀಡಬೇಕಿತ್ತು. ಆ ತೀರ್ಪನ್ನು ಗೌರವಿಸದೆ ರಾಜ್ಯಪಾಲರು ಉಪಕುಲಪತಿಗಳ ಸಮಾವೇಶವನ್ನು ಕರೆಯುವುದು ಸಂವಿಧಾನವನ್ನು ಅಗೌರವಿಸಿದ್ದಂತೆ” ಎಂದು ಎಕ್ಸ್‌ನಲ್ಲಿ ಸೆಲ್ವಪೆರುಂಥಗೈ ಪೋಸ್ಟ್ ಮಾಡಿದ್ದಾರೆ.

ಇದೇ ರೀತಿ ರಾಜ್ಯಪಾಲರು ಆಯೋಜಿಸಿರುವ ಸಮಾವೇಶವನ್ನು ಎಡ ಪಕ್ಷ ಕೂಡಾ ವಿರೋಧಿಸಿದೆ. ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಈ ಸಮಾವೇಶವನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ. “ರಾಜ್ಯಪಾಲ ರವಿ ಅವರು ‘ಆರ್‌ಎಸ್‌ಎಸ್‌ ಏಜೆಂಟ್’ ಆಗಿ ವರ್ತಿಸುತ್ತಿದ್ದಾರೆ” ಎಂದು ಸಿಪಿಐಎಂ ನಾಯಕರು ಆರೋಪಿಸಿದ್ದಾರೆ.

“ಸುಪ್ರೀಂ ಕೋರ್ಟ್ ತೀರ್ಪು ರಾಜ್ಯಪಾಲರ ಅತಿರೇಕವನ್ನು ತಡೆದಿದೆ. ಈ ಹಿನ್ನಡೆಯನ್ನು ಅರಗಿಸಿಕೊಳ್ಳಲು ಸಾಧ್ಯವಾಗದೆ, ಅವರು ಈ ಸಮಾವೇಶದ ಮೂಲಕ ವಿವಾದವನ್ನು ಹುಟ್ಟುಹಾಕಲು ಪ್ರಯತ್ನಿಸುತ್ತಿದ್ದಾರೆ” ಎಂದು ಷಣ್ಮುಗಮ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ತಮಿಳುನಾಡು | ರಾಜ್ಯ ಸರ್ಕಾರದ ಭಾಷಣ ಓದದೆ ಸದನದಿಂದ ಸಭಾತ್ಯಾಗ ಮಾಡಿದ ರಾಜ್ಯಪಾಲ

ತಮಿಳುನಾಡು ವಿಧಾನಸಭೆಯು ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದುಹಾಕುವ ಮಸೂದೆಗಳನ್ನು ಅಂಗೀಕರಿಸಿದೆ. ಅದನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. ಈ ಬೆಳವಣಿಗೆಗಳ ಹೊರತಾಗಿಯೂ ಈಗ ಸಮಾವೇಶವನ್ನು ಕರೆಯುವುದು ಸಂವಿಧಾನಬಾಹಿರವಾಗಿದೆ” ಎಂದೂ ಹೇಳಿದರು. ಹಾಗೆಯೇ ಉಪಕುಲಪತಿಗಳು ಹಾಜರಾಗದಂತೆ ತಿಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್ ರಾಜ್ಯಪಾಲರು ಮೂರು ತಿಂಗಳೊಳಗೆ ಮಸೂದೆಗೆ ಒಪ್ಪಿಗೆ ನೀಡುವ, ಅದನ್ನು ಸದನಕ್ಕೆ ಹಿಂತಿರುಗಿಸುವ ಅಥವಾ ರಾಷ್ಟ್ರಪತಿಗಳಿಗೆ ಕಳುಹಿಸುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದೆ. ಹಾಗೆಯೇ ತಮಿಳುನಾಡು ಶಾಸಕಾಂಗವು ಅಂಗೀಕರಿಸಿದ, ಆದರೆ ರಾಜ್ಯಪಾಲರ ಅನುಮೋದನೆ ಬಾಕಿಯಿರುವ ಹತ್ತು ಮಸೂದೆಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...