ಮಣಿಪುರದಲ್ಲಿ ಅಧಿವೇಶನ ಕರೆಯದೆ ಸಂವಿಧಾನದ ನೀತಿಯ ಉಲ್ಲಂಘನೆ; ರಾಜ್ಯಪಾಲರ ವಿರುದ್ದ ಕಾಂಗ್ರೆಸ್‌ ಟೀಕೆ

Date:

ಸಂವಿಧಾನದ 174(1)ನೇ ವಿಧಿಯು ವಿಧಾನಸಭಾ ಅಧಿವೇಶನಗಳ ನಡುವಿನ ಅಂತರ ಆರು ತಿಂಗಳಿಗಿಂತ ಹೆಚ್ಚು ಇರಬಾರದು. ಅಧಿವೇಶನ ಮುಗಿದ ಆರು ತಿಂಗಳೊಳಗೆ ಮತ್ತೊಂದು ಅಧಿವೇಶನ ನಡೆಸಬೇಕು ಎಂದು ಹೇಳುತ್ತದೆ. ಆದರೂ, ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲ ಅವರು ಅಧಿವೇಶನ ನಡೆಸಲು ಸರ್ಕಾರಕ್ಕೆ ಸೂಚಿಸುತ್ತಿಲ್ಲ. ಸಾಂವಿಧಾನಿಕವಾಗಿ ಕಡ್ಡಾಯವಾಗಿರುವ ನಿಯಮವನ್ನು ರಾಜ್ಯಪಾಲರು ಯಾಕೆ ಉಲ್ಲಂಘಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಸುಮಾರು 2ವರ್ಷದಿಂದ ಮಣಿಪುರವು ಜನಾಂಗೀಯ ಹಿಂಸಾಚಾರವನ್ನು ಎದುರಿಸುತ್ತಿದೆ. ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಮಣಿಪುರ ಸರ್ಕಾರ ಮತ್ತು ಕೇಂದ್ರ ಸರ್ಕಾರ ವಿಫಲವಾಗಿದೆ. ಇದೀಗ, ಹಿಂಸಾಚಾರ ಆರಂಭವಾಗಿ 2 ವರ್ಷಗಳ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ. ಇದೆಲ್ಲ ಬೆಳವಣಿಗೆಗಳ ನಡುವೆ ಅಧಿವೇಶನ ಕರೆಯದೇ ಇರುವ ರಾಜ್ಯಪಾಲರನ್ನು ಕಾಂಗ್ರೆಸ್‌ ಪ್ರಶ್ನಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಸಾಂವಿಧಾನಿಕ ನಿಯಮದ ಪ್ರಕಾರ, ಮಣಿಪುರ ವಿಧಾನಸಭಾ ಅಧಿವೇಶನ ಕರೆಯಲು ಇಂದು (ಮಂಗಳವಾರ) ಕಡೆಯ ದಿನವಾಗಿದೆ. ಆದರೂ, ರಾಜ್ಯಪಾಲರು ಮೌನವಾಗಿದ್ದಾರೆ” ಎಂದು ಗಮನ ಸೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಣಿಪುರ ರಾಜ್ಯಪಾಲರು ಮಣಿಪುರ ವಿಧಾನಸಭೆ ಅಧಿವೇಶನವನ್ನು ಕರೆಯದೆ, ಸಂವಿಧಾನದ 174(1)ನೇ ವಿಧಿಯನ್ನು ಯಾಕೆ ಉಲ್ಲಂಘಿಸುತ್ತಿದ್ದಾರೆ?” ರಮೇಶ್ ಹೇಳಿದ್ದಾರೆ.

“ಸೋಮವಾರ ವಿಧಾನಸಭೆ ಕರೆದರೆ, ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್‌ ನಿರ್ಧರಿಸಿತ್ತು. ಈ ನಡುವೆ, ಬಿರೇನ್ ಸಿಂಗ್ ಭಾನುವಾರ ರಾಜೀನಾಮೆ ನೀಡಿದರು. ಬಿರೇನ್ ಸಿಂಗ್‌ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮತ್ತೊಬ್ಬರನ್ನು ನೇಮಿಸಲು ಬಿಜೆಪಿಗ ಸಾಧ್ಯವಾಗಿಲ್ಲ. ಹೀಗಾಗಿಯೇ, ವಿಧಾನಸಭಾ ಅಧಿವೇಶನವನ್ನೇ ಅನೂರ್ಜಿತಗೊಳಿಸಲಾಗಿದೆ” ಎಂದು ರಮೇಶ್ ಆರೋಪಿಸಿದ್ದಾರೆ.

ಮಣಿಪುರ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್‌ ಸಿಂಗ್ ಅವರ ರಾಜೀನಾಮೆ ನೀಡಿದ್ದನ್ನು ‘ವಿಳಂಬ’ ಎಂದು ಕಾಂಗ್ರೆಸ್ ಬಣ್ಣಿಸಿದೆ. ಮುಖ್ಯಮಂತ್ರಿ ರಾಜೀನಾಮೆ ತಡವಾಯಿತು ಎಂದಿದೆ. ರಾಜ್ಯದ ಜನರು ಈಗಲಾದರೂ, ಪ್ರಧಾನಿ ಮೋದಿ ಅವರನ್ನು ರಾಜ್ಯಕ್ಕೆ ಬರಬಹುದೆಂದು ಕಾಯುತ್ತಿದ್ದಾರೆ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...