ಬಿಜೆಪಿಯ ನಿರ್ದಿಷ್ಟ ಪ್ರಕರಣಗಳ ಬಗ್ಗೆ ಎಸ್ಐಟಿ ತನಿಖೆ: ಸಚಿವ ಕೃಷ್ಣಭೈರೇಗೌಡ

Date:

ಬಿಜೆಪಿ ಅವಧಿಯಲ್ಲಿ ನಡೆದಿರುವ ಅಕ್ರಮಗಳ ಪೈಕಿ ನಿರ್ದಿಷ್ಟ ಪ್ರಕರಣಗಳ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತ ಎಸ್ಐಟಿ ತನಿಖೆ ವಿಚಾರವಾಗಿ ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿ, “ನಿರ್ದಿಷ್ಟ ಪ್ರಕರಣಗಳಲ್ಲಿ ತನಿಖೆ ಮಾಡಿಯೇ ಮಾಡ್ತೀವಿ. ಕೇಸ್ ಬೈ ಕೇಸ್ ಮಾಹಿತಿ ಪಡೆದು ತನಿಖೆ ಮಾಡುವುದಕ್ಕೆ ಸರ್ಕಾರ ನಿರ್ಧಾರ ಮಾಡಿದೆ” ಎಂದು ಹೇಳಿದರು.

“ಸಿಎಂ, ಡಿಸಿಎಂ ಕೂಡ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಭರವಸೆ ನೀಡಿದ್ದಾರೆ. ಸಾರಾಸಗಟಾಗಿ ಎಲ್ಲ ಪ್ರಕರಣಗಳನ್ನೂ ತನಿಖೆಗೆ ಒಳಪಡಿಸ್ತೀವಿ ಅಂತಲ್ಲ. ನಿರ್ದಿಷ್ಟ ಪ್ರಕರಣಗಳಲ್ಲಿ ಎಲ್ಲಿ ಲೋಪದೋಷಗಳಾಗಿವೆ ಅವನ್ನು ತನಿಖೆಗೆ ಒಳಪಡಿಸ್ತೀವಿ” ಎಂದು ಸ್ಪಷ್ಟನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವ ಇಲಾಖೆಯಲ್ಲಿ ಅಕ್ರಮವಾಗಿದೆ ಎಂದು ನಿರ್ದಿಷ್ಟ ಪ್ರಕರಣಗಳ ಮಾಹಿತಿ ಪಡೆಯುತ್ತೇವೆ. ಬಳಿಕ ತನಿಖೆಯ ಬಗ್ಗೆ ನಿರ್ಧಾರ ಮಾಡುತ್ತೇವೆ” ಎಂದು ತಿಳಿಸಿದರು.

ಇನ್ನು ಇದೇ ಸಂದರ್ಭದಲ್ಲಿ ಬುಧವಾರರಿಂದ ಬಿಜೆಪಿ ಅನ್ನಭಾಗ್ಯ ಯೋಜನೆ ಜಾರಿಗೆ ಆಗ್ರಹಿಸಿ ಅಭಿಯಾನ ನಡೆಸುತ್ತಿರುವ ವಿಚಾರವಾಗಿ ಮಾತನಾಡಿ, “ಅಧಿಕಾರ ಇದ್ದಾಗ ಬಡವರಿಗೆ ಬಿಜೆಪಿ ಒಂದೇ ಒಂದು ಸಹಾಯ ಮಾಡಲಿಲ್ಲ. ತಿಗಣೆಯಂತೆ ಬಡವರ ರಕ್ತ ಹೀರಿದವರು ಬಿಜೆಪಿಯವರು. ಈಗ ನಾವು ಬಡವರಿಗೆ ಸಹಾಯ ಮಾಡುವುದಕ್ಕೆ ಹೊರಟಾಗ ಅಡ್ಡಿಪಡಿಸ್ತಿದ್ದಾರೆ” ಎಂದು ಕಿಡಿ ಕಾರಿದರು.

ಈ ಸುದ್ದಿ ಓದಿದ್ದೀರಾ? ಹಾಸನ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಹೊಂದಾಣಿಕೆ ರಾಜಕಾರಣದಿಂದ ನಾವು ಸೋತೆವು: ಡಿ ವಿ ಸದಾನಂದಗೌಡ

ಇನ್ನು ಇದೇ ವಿಚಾರವಾಗಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ‌”ಬಿಜೆಪಿ ಕಾಲದ ಹಗರಣಗಳ ಬಗ್ಗೆ ಹಿಂದಿನ ಸಚಿವ ಸಂಪುಟದಲ್ಲಿ ಚರ್ಚೆ ಆಗಿತ್ತು. ನಾವು ವಿರೋಧ ಪಕ್ಷದಲ್ಲಿ ಇದ್ದಾಗ ಯಾವೆಲ್ಲ ಹಗರಣಗಳು ತನಿಖೆ ಮಾಡ್ತೇವೆ ಎಂದು ಹೇಳಿದ್ದೆವೊ ಆ ಎಲ್ಲ ಹಗರಣಗಳನ್ನು ಎಸ್.ಐ.ಟಿ ಮೂಲಕ ತನಿಖೆ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಸಿಎಂ ಸಿದ್ದರಾಮಯ್ಯ ಅವರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...