ಒಡಿಶಾ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

Date:

ಒಡಿಶಾದ ವಿಧಾನಸಭೆ ಮಳೆಗಾಲದ ಅಧಿವೇಶನದಲ್ಲಿ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದೆ.

ವಿಶೇಷವಾಗಿ ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳು ಮತ್ತು ರಸಗೊಬ್ಬರ ಕೊರತೆಯನ್ನು ನಿಯಂತ್ರಿಸುವಲ್ಲಿ ಸರ್ಕಾರವು ವಿಫಲವಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಈ ಕಾರಣಗಳೂ ಸೇರಿದಂತೆ ಹಲವು ಕಾರಣಗಳನ್ನು ಮುಂದಿಟ್ಟು, ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್‌ ಸಜ್ಜಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳ ವಿಷಯವನ್ನು ಕಳೆದ ವಿಧಾನಸಭಾ ಅಧಿವೇಶನದಲ್ಲಿಯೂ ಕಾಂಗ್ರೆಸ್ ಎತ್ತಿತ್ತು. ಆದರೆ, ಈ ವಿಷಯವನ್ನು ಚರ್ಚಿಸುವ ಬದಲು, ಪಕ್ಷದ ಎಲ್ಲ 14 ಶಾಸಕರನ್ನು ಸದನದಿಂದ ಅಮಾನತುಗೊಳಿಸಿ, ವಿಷಯವನ್ನು ಚರ್ಚೆಯಿಂದ ಹೊರಗಿಡಲಾಯಿತು ಎಂದು ವಿಪಕ್ಷ ನಾಯಕ ರಾಮಚಂದ್ರ ಕದಮ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಎಥೆನಾಲ್ ಪೆಟ್ರೋಲ್ ಬಳಕೆ ಮೈಲೇಜ್ ಡ್ರಾಪ್ ಎಷ್ಟು? ಕೇಂದ್ರ ಸಚಿವ ಗಡ್ಕರಿಯ ಲೂಟಿ ಎಷ್ಟು…?

ಕಿಯೋಂಝಾರ್‌ನ ಘಟಗಾಂವ್‌ ಅರಣ್ಯ ಪ್ರದೇಶದಲ್ಲಿ ಮಹಿಳಾ ಟ್ರಾಫಿಕ್ ಕಾನ್‌ಸ್ಟೆಬಲ್‌ ಮೃತದೇಹ ಪತ್ತೆಯಾಗಿದೆ. ಅವರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಅವರ ಹತ್ಯೆಯನ್ನು ಖಂಡಿಸಿದ ಕದಮ್, “ಈ ಘಟನೆಯು ಸರ್ಕಾರದ ವೈಫಲ್ಯವನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ” ಎಂದು ಹೇಳಿದ್ದಾರೆ.

ಈ ಘಟನೆಗೆ ಗೃಹ ಖಾತೆಯನ್ನೂ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಮೋಹನ್ ಚರಣ್ ಮಾಜ್ಹಿ ಅವರು ಉತ್ತರ ನೀಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿದೆ.

“ಮಹಿಳೆಯರ ಸುರಕ್ಷತೆ, ಕಾನೂನು ಸುವ್ಯವಸ್ಥೆ ಕಾಪಾಡುವುದು, ರೈತರು, ದಲಿತರು, ಬುಡಕಟ್ಟು ಜನಾಂಗದವರು ಹಾಗೂ ಒಬಿಸಿಗಳು ಎದುರಿಸುತ್ತಿರುವ ಸಮಸ್ಯೆಗಳಂತಹ ಗಂಭೀರ ವಿಚಾರಗಳನ್ನು ನಿಭಾಯಿಸಲು ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಆದ್ದರಿಂದ, ಈ ವಿಧಾನಸಭಾ ಅಧಿವೇಶನದಲ್ಲಿ ಈ ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಾವು ನಿರ್ಧರಿಸಿದ್ದೇವೆ” ಎಂದು ರಾಮಚಂದ್ರ ಕದಮ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...