ಕಾಂಗ್ರೆಸ್‌ ʼದಿಲ್ಲಿ ಯಾತ್ರೆʼ ಲೋಕಸಭೆ ಚುನಾವಣೆಯ ತಂತ್ರ ಅಷ್ಟೇ: ಎಚ್‌ ಡಿ ಕುಮಾರಸ್ವಾಮಿ

Date:

ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ‌, ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಉದ್ದೇಶ; ಲೋಕಸಭೆ ಚುನಾವಣೆ” ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದಿದ್ದಾರೆ” ಎಂದು ತಿಳಿಸಿದ್ದಾರೆ.

“ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ; ಫೆಬ್ರುವರಿ 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

“ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, “ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ..” ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ. ಜೆಡಿಎಸ್‌ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ?” ಎಂದು ವ್ಯಂಗ್ಯವಾಡಿದ್ದಾರೆ.

“ಕೇರಳದ ಎಲ್‌ಡಿಎಫ್‌ ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು? ಕೇರಳದಲ್ಲಿ ಅಸಹಕಾರ! ಕರ್ನಾಟಕದಲ್ಲಿ ಸಹಕಾರ!! ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ಕಾಂಗ್ರೆಸ್‌ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ” ಎಂದು ಹರಿಹಾಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...