ರಾಹುಲ್, ಸಿದ್ದರಾಮಯ್ಯ ಬಗ್ಗೆ ಅಪಪ್ರಚಾರ: ‘ಕ್ರಿಮಿ-ಕೀಟ’ ಫೇಸ್‌ಬುಕ್ ಖಾತೆ ವಿರುದ್ಧ ದೂರು ನೀಡಿದ ಕಾಂಗ್ರೆಸ್

Date:

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಪಪ್ರಚಾರ ಮಾಡುವ ‘ಕ್ರಿಮಿ-ಕೀಟ’ ಫೇಸ್‌ಬುಕ್ ಖಾತೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ದೂರು ಸಲ್ಲಿಸಿದೆ. ಈ ಫೇಸ್‌ಬುಕ್ ಖಾತೆಯಲ್ಲಿ ಎಐ ರಚಿತ ರಾಹುಲ್, ಸಿದ್ದರಾಮಯ್ಯ, ಸೋನಿಯಾ ಗಾಂಧಿಯವರ ವಿಡಿಯೋಗಳನ್ನು ಹಾಕಲಾಗುತ್ತಿದೆ.

ಈ ಸಂಬಂಧ ಬೆಂಗಳೂರು ಪಶ್ಚಿಮ ಕಾಂಗ್ರೆಸ್ ಜಿಲ್ಲಾ ಸಮಿತಿ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಸ್ಟೇಷನ್‌ನ ಎಸ್‌ಎಸ್‌ಒ ಅವರಿಗೆ ದೂರು ಸಲ್ಲಿಸಿದೆ. ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರ ಅಪಪ್ರಚಾರದ ವಿಡಿಯೋಗಳು, ನಕಲಿ ಧ್ವನಿಸುರುಳಿಯನ್ನು ಸೃಷ್ಟಿಸಿ ವೈಯಕ್ತಿಕವಾಗಿ ಹಾಗೂ ಪಕ್ಷಕ್ಕೆ ಧಕ್ಕೆ ತಂದಿರುವ ಕ್ರಿಮಿ ಕೀಟ ಎಂಬ ಫೇಸ್‌ಬುಕ್ ಖಾತೆ ವಿರುದ್ಧ ಕಾನೂನಾತ್ಮಕವಾಗಿ ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಮೋದಿ ಬದುಕಿರುವುದೇ ಪ್ರಚಾರದಿಂದ, ಅವರ ಸರ್ಕಾರಕ್ಕೆ ಸೊನ್ನೆ ಅಂಕ: ಸಿಎಂ ಸಿದ್ದರಾಮಯ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕ್ರಿಮಿ ಕೀಟ ಎಂಬ ಫೇಸ್‌ಬುಕ್ ಖಾತೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ವಿಡಿಯೋಗಳನ್ನು ಮತ್ತು ನಕಲಿ ಧ್ವನಿಸುರುಳಿಯನ್ನು ಸೃಷ್ಟಿಸಿ ಸಮಾಜಕ್ಕೆ ತಪ್ಪು ಮಾಹಿತಿಗಳನ್ನ ರವಾನಿಸುತ್ತಿರುವ ಕ್ರಿಮಿ ಕೀಟ ಎಂಬ ಫೇಸ್‌ಬುಕ್ ಖಾತೆ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಅಧಿಕೃತವಾಗಿ ದೂರು ಸಲ್ಲಿಸುತ್ತಿದ್ದೇನೆ” ಎಂದು ಬೆಂಗಳೂರು ಪಶ್ಚಿಮ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಕುಶಾಲ್ ಹರುವೇಗೌಡ ತಿಳಿಸಿದ್ದಾರೆ.

ದೂರು ಸಲ್ಲಿಕೆ

“ಈ ಕ್ರಿಮಿ ಕೀಟ ಫೇಸ್‌ಬುಕ್ ಖಾತೆಯು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರ ವಿರುದ್ಧ ಆಧಾರವಿಲ್ಲದ ಅವಹೇಳನಕಾರಿ ವಿಡಿಯೋಗಳನ್ನು, ನಕಲಿ ಧ್ವನಿಸುರುಳಿಯನ್ನು ಸೃಷ್ಟಿಸುತ್ತಿದೆ. ವ್ಯಕ್ತಿತ್ವಕ್ಕೆ ಧಕ್ಕೆ ತರಲು ಮತ್ತು ಸಾರ್ವಜನಿಕರಲ್ಲಿ ತಪ್ಪು ಸಂದೇಶ ಹರಡಲು ಉದ್ದೇಶಪೂರ್ವಕವಾಗಿ ಈ ಕೃತ್ಯ ಮಾಡುತ್ತಿರುವ ಈ ಖಾತೆಯ ಹಿಂದಿರುವ ವ್ಯಕ್ತಿಗಳನ್ನು ಬಂಧಿಸಿ ಸೂಕ್ತ ವಿಚಾರಣೆ ನಡೆಸಿ ಸಂಬಂಧಪಟ್ಟ ಎಲ್ಲ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ದೂರು ಸಲ್ಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...