ಮೀರ್‌ ಸಾಧಿಕ್‌ನಂತೆ ಕಾಂಗ್ರೆಸ್‌ ಸರ್ಕಾರದಿಂದ ಜನರಿಗೆ ದ್ರೋಹ: ಆರ್ ಅಶೋಕ್

Date:

“ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ” ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸುಮಾರು ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಕಾಂಗ್ರೆಸ್‌ ಸರ್ಕಾರ ಹರಿಸಿದೆ. ಅಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ತೃಪ್ತಿಪಡಿಸಲು ಡಿಸಿಎಂ ಡಿ ಕೆ ಶಿವಕುಮಾರ್‌ ಕನ್ನಡಿಗರ ಹಿತವನ್ನು ಕಡೆಗಣಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಮಧ್ಯಮ ವರ್ಗಕ್ಕೆ ಬಂಪರ್‌ ಉಡುಗೊರೆ, ಈ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡಲ್ಲ: ಆರ್ ಅಶೋಕ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಚಿವ ಪ್ರಿಯಾಂಕ್‌ ಖರ್ಗೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ಮಾಡುತ್ತಿದ್ದಾರೆ. ಈಗ ಅದೇ ಸರ್ಕಾರದ ಸಚಿವರು ನೀರು ಹರಿಸಿರುವುದು ಜನರಿಗೆ ಮಾಡಿರುವ ದ್ರೋಹ. ಮೀರ್‌ ಸಾಧಿಕ್‌ನಂತೆ ಸರ್ಕಾರ ವರ್ತಿಸಿರುವುದನ್ನು ರೈತರು ಕ್ಷಮಿಸುವುದಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವಾಗ ನೀರು ಹರಿಸಿರುವುದರಿಂದ ಜನರಿಗೆ ತೊಂದರೆಯಾಗಲಿದೆ. ಒಬ್ಬೊಬ್ಬ ಸಚಿವರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ” ಎಂದು ದೂರಿದರು.

“ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಿಬ್ಬಂದಿಗೆ ಸರಿಯಾಗಿ ವೇತನ ಪಾವತಿಸಿಲ್ಲ. ಕಾಯಂ ಮಾಡುತ್ತೇವೆ, ಸಂಬಳ ನೀಡುತ್ತೇವೆಂದು ಭರವಸೆ ನೀಡಿ ಈಗ ಕೈ ಕೊಟ್ಟಿದ್ದಾರೆ. ಮೋಸದ ಆಶ್ವಾಸನೆಗಳಿಂದಾಗಿ ಭಿಕ್ಷೆ ಬೇಡುವ ಮಟ್ಟಕ್ಕೆ ಸರ್ಕಾರ ಬಂದಿದೆ” ಎಂದು ಟೀಕಿಸಿದರು.

“ಬೆಂಗಳೂರಿನ ಆಸ್ಪತ್ರೆಗಳ ವೈದ್ಯರಿಗೆ ವೇತನ ನೀಡಿಲ್ಲ. ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗಿದೆ. ಹಾಲಿನ ಪ್ರೋತ್ಸಾಹಧನ ನೀಡುವುದು ಬಾಕಿ ಉಳಿದಿದೆ. ಇದರ ಜೊತೆಗೆ ತೆರಿಗೆಗಳನ್ನು ಏರಿಸಲಾಗಿದೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ರಾಜ್ಯ ಸರ್ಕಾರ ದಿವಾಳಿಯತ್ತ ಸಾಗಿದೆ: ಆರ್ ಅಶೋಕ್

“ಬೆಂಗಳೂರಿನಲ್ಲಿ ಇ-ಖಾತಾ ಮಾಡಿಸಲು 12 ಸಾವಿರ ರೂ. ವಸೂಲಿ ಮಾಡಲಾಗುತ್ತಿದೆ. ಇದನ್ನು ಪ್ರಶ್ನೆ ಮಾಡಿದರೆ ಹೊಸ ವ್ಯವಸ್ಥೆಯಲ್ಲಿ ಇದು ಸಾಮಾನ್ಯ ಎಂದು ಹೇಳುತ್ತಾರೆ. ಏಜೆಂಟ್‌ಗಳು ಜನರಿಂದ ಹಣ ವಸೂಲಿ ಮಾಡುತ್ತಿದ್ದು, ಇಂತಹವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ” ಎಂದು ಪ್ರಶ್ನಿಸಿದರು.

“ಮಹಾ ಕುಂಭಮೇಳಕ್ಕೆ ಹೋಗುವುದು ಬಿಜೆಪಿಗೆ ಸಾಮಾನ್ಯ. ಡಿಸಿಎಂ ಡಿ ಕೆ ಶಿವಕುಮಾರ್‌ ಏಕೆ ಹೋಗುತ್ತಾರೆ ಎಂದು ಅವರ ಪಕ್ಷದವರೇ ಪ್ರಶ್ನಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಕೀಳಾಗಿ ಮಾತಾಡಿದ್ದು, ಆ ಮಾತನ್ನು ಡಿ ಕೆ ಶಿವಕುಮಾರ್‌ ಧಿಕ್ಕರಿಸಿದ್ದಾರೆ. ಈಶ ಫೌಂಡೇಶನ್‌ನ ಕಾರ್ಯಕ್ರಮಕ್ಕೂ ಹೋಗಿದ್ದಾರೆ. ಅವರ ಮನಸ್ಸಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಇದು ಪಕ್ಷದ ಆಂತರಿಕ ವಿಚಾರ. ಕಾಂಗ್ರೆಸ್‌ನಲ್ಲಿ ಕರಿ ಬೆಕ್ಕಿನ ಕಾಟ ಹೆಚ್ಚಾಗಿದೆ. ಅದರ ಬಗ್ಗೆ ಡಿ ಕೆ ಶಿವಕುಮಾರ್‌ ಅವರೇ ಉತ್ತರಿಸಬೇಕು” ಎಂದು ವ್ಯಂಗ್ಯವಾಡಿದರು.

“ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಡಿ ಕೆ ಶಿವಕುಮಾರ್‌ ಹೇಳಿದಾಗಲೇ ಎಲ್ಲರೂ ಸುಮ್ಮನಿದ್ದರು. ಪಕ್ಷದೊಳಗಿನ ಆಂತರಿಕ ಕಚ್ಚಾಟ ಎಲ್ಲರಿಗೂ ಗೊತ್ತಾಗಿದೆ. ಇದು ಮುಖ್ಯಮಂತ್ರಿ ಬದಲಾಗುವ ಸ್ಥಿತಿಯ ಲಕ್ಷಣ. ಸಿಎಂ ಸಿದ್ದರಾಮಯ್ಯ ಅವರು ದುರ್ಬಲರಾಗಿದ್ದಾರೆ. ಆದ್ದರಿಂದ ತಾವೇ ಮಾಸ್‌ ಲೀಡರ್‌ ಎಂಬ ಸಂದೇಶವನ್ನು ಡಿ ಕೆ ಶಿವಕುಮಾರ್‌ ನೀಡಿದ್ದಾರೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...