ಕಾಂಗ್ರೆಸ್ ಸರ್ಕಾರ ಭದ್ರ, ಅದೃಷ್ಟ ಬಂದರೆ ಡಿ ಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಜಿ ಟಿ ದೇವೇಗೌಡ‌

Date:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭದ್ರವಾಗಿದೆ. ಅದೃಷ್ಟ ಒಲಿದು ಬಂದಾಗ ಡಿ ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ‌ ಅಭಿಪ್ರಾಯಪಟ್ಟರು.

ಮೈಸೂರಿನಲ್ಲಿ ಶನಿವಾರ ಮಾತನಾಡಿದ ಅವರು, “ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಇದ್ದಾರೆ. 138 ಸ್ಥಾನದಿಂದ ಕಾಂಗ್ರೆಸ್ ಸುಭದ್ರವಾಗಿದೆ” ಎಂದರು.

ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡ ಬಗ್ಗೆ ಪ್ರತಿಕ್ರಿಯಿಸಿ, “ನನ್ನ ಕ್ಷೇತ್ರ ತುಂಬಾ ವಿಶಾಲವಾಗಿದೆ. ಚಾಮುಂಡೇಶ್ವರಿ ಕ್ಷೇತ್ರ ಸಮಸ್ಯೆಗಳ ಆಗರವಾಗಿದೆ. ಮಹಾನಗರ ಪಾಲಿಕೆಯ ಹಲವು ವಾರ್ಡುಗಳು ಸೇರಿದಂತೆ ರಿಂಗ್ ರಸ್ತೆ ಸುತ್ತಲಿನ ಪ್ರದೇಶಗಳು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸೇರಿವೆ. ಹಾಗಾಗಿ ಕ್ಷೇತ್ರದ ಜನರ ಸಮಸ್ಯೆ ಬಗೆಹರಿಸಲು ಹೆಚ್ಚು ಆದ್ಯತೆ ನೀಡಿದ್ದೇನೆ” ಎಂದು ಸಮಜಾಯಿಷಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆಯಿದೆ. ಕಬಿನಿಯಿಂದ 180 ಎಂ.ಎಲ್.ಡಿ ನೀರು ತರಬೇಕು. ಇದಕ್ಕೆ ಬಜೆಟ್ ನಲ್ಲಿ ಹಣ ಕೇಳಿದ್ದೇವೆ. ನನ್ನ ಕ್ಷೇತ್ರದ ನೀರಿನ ಸಮಸ್ಯೆ, ಯುಜಿಡಿ ಸಮಸ್ಯೆ ಎಲ್ಲವನ್ನೂ ಸರಿ ಮಾಡಬೇಕು. ಪಟ್ಟಣ ಪಂಚಾಯತಿಗಳನ್ನು ಸೇರಿಸಿ ಗ್ರೇಟರ್ ಮೈಸೂರು ಮಾಡಿ ಅಂತ ಹೇಳಿದ್ದೇನೆ. ಬಜೆಟ್‌ನಲ್ಲಿ ಇದನ್ನು ಸೇರಿಸಿ ಅಂತ ಹೇಳಿದ್ದೇನೆ” ಎಂದು ತಿಳಿಸಿದರು.

ಮುಂಬರುವ ಜಿಲ್ಲಾ ತಾಲ್ಲೂಕು ಪಂಚಾಯಿತಿ ಚುನಾವಣೆ ವೇಳೆ ಜೆಡಿಎಸ್ ಪರ ಪ್ರಚಾರ ಕೈಗೊಳ್ಳುತ್ತೀರಾ? ಎಂಬ ಪ್ರಶ್ನೆಗೆ ಚುನಾವಣೆ ಘೋಷಣೆ ಆದಾಗ ನೋಡೋಣ’ ಎಂದು ಪ್ರತಿಕ್ರಿಯಿಸಿದರು.

“ಚಾಮುಂಡೇಶ್ವರಿ ಕ್ಷೇತ್ರದ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಆಯೋಜನೆ ಮಾಡಲಾಗಿದೆ. ಎಲ್ಲ ಇಲಾಖೆ ಅಧಿಕಾರಿಗಳ ಸಭೆ ಮಾಡಿದ್ದೇನೆ. ರಾಜ್ಯ ಬಜೆಟ್ ಬರ್ತಿದೆ. ಯಾವೆಲ್ಲ ಕೆಲಸ ಆಗಬೇಕು, ಕುಡಿಯುವ ನೀರು, ನಗರಾಭಿವೃದ್ದಿ ಪ್ರಾಧಿಕಾರ ಸ್ಥಳೀಯ ಪಂಚಾಯತಿಗಳಿಗೆ ವರ್ಗಾವಣೆ ಆಗಿದೆ. ಆದರೆ ಸ್ಥಳೀಯ ಆಡಳಿತದಲ್ಲಿ ಹಣವಿಲ್ಲ. ಹೀಗಾಗಿ ಸಿಎಂ ಗಮನಕ್ಕೆ ಈ ವಿಚಾರ ತರುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...