ಕನ್ನಡಿಗರ ತಲೆ ಮೇಲೆ ಕಾಂಗ್ರೆಸ್‌ ಸರ್ಕಾರ ಚಪ್ಪಡಿ ಕಲ್ಲು ಹಾಕಿದೆ: ಆರ್ ಅಶೋಕ್

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌ ಆಶೋಕ್ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಅಶೋಕ್, “15ನೇ ಹಣಕಾಸು ಆಯೋಗ ತನ್ನ 2020-21ರ ಮಧ್ಯಂತರ ವರದಿಯಲ್ಲಿ ಕರ್ನಾಟಕಕ್ಕೆ 5,495 ಕೋಟಿ ರೂ. ಶಿಫಾರಸು ಮಾಡಿದ್ದುದು ನಿಜ. ಆದರೆ, 2021-22 ರಿಂದ 2025-26ರವರೆಗಿನ ತನ್ನ ಅಂತಿಮ ವರದಿಯಲ್ಲಿ ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೆ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ. ಇದು ಸತ್ಯಾಂಶ. ತಾವು ಹೇಳಿರುವುದು ಅರ್ಧ ಸತ್ಯವೆಂದು ತಮಗೂ ಗೊತ್ತು. ಅಲ್ಲವೇ?” ಎಂದಿದ್ದಾರೆ.

“ಕೋವಿಡ್-19 ಸಾಂಕ್ರಾಮಿಕದ ನಂತರದ ಪರಿಸ್ಥಿತಿಯಲ್ಲಿ ಆರ್ಥಿಕ ಪುನಶ್ಚೇತನಕ್ಕಾಗಿ 2020-21ನೇ ಹಣಕಾಸು ವರ್ಷದಿಂದ ಈವರೆಗೆ ಕರ್ನಾಟಕಕ್ಕೆ 6,561.91 ಕೋಟಿ ರೂ. ಮೊತ್ತವನ್ನು 50 ವರ್ಷಗಳ ಬಡ್ಡಿ ರಹಿತ ಸಾಲವಾಗಿ ಕರ್ನಾಟಕಕ್ಕೆ ನೀಡಲಾಗಿದೆ. ಇದಕ್ಕೆ ಕೇಂದ್ರ ಸರ್ಕಾರವೇ ಬಡ್ಡಿ ಭರಿಸುತ್ತದೆ. ಇದು ಸತ್ಯವಲ್ಲವೇ?” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ನು ತೆರಿಗೆ ಹಂಚಿಕೆ ವಿಷಯಕ್ಕೆ ಬಂದರೆ, 2004-14ರ ನಡುವಿನ UPA ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ
81,795 ಕೋಟಿ ರೂ. ತೆರಿಗೆ ಹಂಚಿಕೆಯಾಗಿತ್ತು. NDA ಸರ್ಕಾರದ ಅವಧಿಯಲ್ಲಿ 2014-24 (2023, ನವೆಂಬರ್ 17 ರವರೆಗೆ) 2.77 ಲಕ್ಷ ಕೋಟಿ ರೂ.ಗೂ ಹೆಚ್ಚು ಬಿಡುಗಡೆಯಾಗಿದೆ. ಅಂದರೆ UPA ಅವಧಿಗೆ ಹೋಲಿಸಿದರೆ 239% ಅಥವಾ 3.4 ಪಟ್ಟು ಹೆಚ್ಚಳವಾಗಿದೆ” ಎಂದಿದ್ದಾರೆ.

“ಅನುದಾನದ ವಿಷಯದಲ್ಲಿ, 2004-14ರ ನಡುವಿನ UPA ಸರ್ಕಾರದ ಅವಧಿಯಲ್ಲಿ ಕರ್ನಾಟಕವು 60,779 ಕೋಟಿ ರೂ. ಅನುದಾನವನ್ನು ಪಡೆದಿದ್ದರೆ, NDA ಸರ್ಕಾರದ ಅವಧಿಯಲ್ಲಿ 2014-24ರ ನಡುವೆ (ಆರ್ಥಿಕ ವರ್ಷ 2022-23 ರವರೆಗೆ) 2.08 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ಪಡೆದಿದೆ. ಅಂದರೆ UPA ಅವಧಿಗೆ ಹೋಲಿಸಿದರೆ ಕರ್ನಾಟಕಕ್ಕೆ ಸಿಕ್ಕ ಕೇಂದ್ರ ಅನುದಾನ 243% ಅಥವಾ 3.4 ಪಟ್ಟು ಹೆಚ್ಚಳವಾಗಿದೆ” ಎಂದು ಅಶೋಕ್ ಟ್ವೀಟ್ ಮಾಡಿದ್ದಾರೆ.

“ರೈಲ್ವೆ ಯೋಜನೆಗಳಿಗೆ 2009ರಿಂದ 2014ರ ಅವಧಿಯಲ್ಲಿ ಕರ್ನಾಟಕದವರೇ ಇಬ್ಬರು ರೈಲ್ವೆ ಖಾತೆ ಸಚಿವರಾಗಿದ್ದರೂ ಸಹ ಕರ್ನಾಟಕಕ್ಕೆ ಕೇವಲ 835 ಕೋಟಿ ದೊರೆತಿತ್ತು. ಅದೇ NDA ಸರ್ಕಾರ ಬಂದ ಮೇಲೆ 2014-22ರ ಅವಧಿಯಲ್ಲಿ ಒಟ್ಟು 3,424 ಕೋಟಿ ಹಾಗೂ 2023-24 ಒಂದೇ ವರ್ಷದಲ್ಲಿ 7,561 ಕೋಟಿ ಅನುದಾನ ದೊರೆತಿದೆ” ಎಂದು ಹೇಳಿದ್ದಾರೆ.

 

“ಸಾಲ ಮನ್ನಾ ಆಸೆಗಾಗಿ ಬರ ಬರಲಿ ಎಂದು ರೈತರು ಆಸೆ ಪಡುತ್ತಾರೆ ಎಂದು ಉಡಾಫೆ ಮಾತಾಡುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ರೈತರಿಗೆ ಬರ ಪರಿಹಾರದ ವಿಷಯದ ಬಗ್ಗೆ ಮಾತನಾಡುವ ನೈತಿಕತೆಯೇ ಉಳಿದಿಲ್ಲ. ಕೇಂದ್ರ ಸರ್ಕಾರದ ಪ್ರಕ್ರಿಯೆ ಮುಗಿದ ಕೂಡಲೇ ರಾಜ್ಯ ಪಾಲಿನ ಪರಿಹಾರ ತಾನಾಗಿಯೇ ಬಂದೇ ಬರುತ್ತದೆ. ಆದರೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ₹2000 ರೂಪಾಯಿ ಇನ್ನು ಯಾಕೆ ರೈತರನ್ನು ತಲುಪಿಲ್ಲ? ಉತ್ತರ ಕೊಡಿ ಸಿದ್ದರಾಮಯ್ಯ ಅವರೇ” ಎಂದು ಕುಟುಕಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಯಡಿಯೂರಪ್ಪ ಅವರು ನಮ್ಮ ಪಕ್ಷದಲ್ಲಿ ಶಕುನಿ ಇದ್ದ ಹಾಗೆ: ಬಸನಗೌಡ ಪಾಟೀಲ ಯತ್ನಾಳ್‌

“ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿಗಳಾಗಿ 12 ವರ್ಷಗಳ ಕಾಲ ಒಂದು ರಾಜ್ಯವನ್ನ ಯಶಸ್ವಿಯಾಗಿ ಮುನ್ನಡೆಸಿರುವ ಅನುಭವ ಇದೆ. ರಾಜ್ಯ ಸರ್ಕಾರಗಳ ಹಣಕಾಸಿನ ಇತಿಮಿತಿ, ಅಗತ್ಯತೆಗಳ ಬಗ್ಗೆ ಸಂಪೂರ್ಣ ಅರಿವಿದೆ, ಸಂವೇದನೆಯೂ ಇದೆ. Cooperative Federalism ನಲ್ಲಿ ನಂಬಿಕೆ ಇಟ್ಟಿರುವ ಪ್ರಧಾನಿ ಮೋದಿ ಅವರಿಂದ ಕರ್ನಾಟಕ ಸೇರಿದಂತೆ ಯಾವ ರಾಜ್ಯಕ್ಕೂ ಎಂದಿಗೂ ಅನ್ಯಾಯವಾಗುವುದಿಲ್ಲ” ಎಂದು ಹೇಳಿದ್ದಾರೆ.

“ಮುಖ್ಯಮಂತ್ರಿಯಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರು, 14 ಬಾರಿ ಬಜೆಟ್ ಮಂಡಿಸಿರುವ ಅನುಭವ ಇರುವ ತಾವು ಅಂಕಿ-ಅಂಶಗಳನ್ನು ಅಧ್ಯಯನ ಮಾಡಿ, ವಾಸ್ತವಾಂಶ ಅರಿತು ಮಾತನಾಡಬೇಕು ಮಾನ್ಯ ಸಿದ್ಯರಾಮಯ್ಯರೇ. ಎಲ್ಲವನ್ನೂ ರಾಜಕೀಯ ದೃಷ್ಟಿಯಿಂದ ನೋಡಿ ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ ತಮಗೆ ಶೋಭೆ ತರುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...