ಕಾಂಗ್ರೆಸ್‌ ಸರ್ಕಾರ ಪ್ರತಿ ಕುಟುಂಬದಿಂದ 8-10 ಸಾವಿರ ರೂ. ದರೋಡೆ ಮಾಡುತ್ತಿದೆ: ಆರ್‌ ಅಶೋಕ್

Date:

ಒಂದು ಕುಟುಂಬಕ್ಕೆ 2,000 ರೂ. ನೀಡುತ್ತೇವೆಂದು ಹೇಳಿದ ಕಾಂಗ್ರೆಸ್‌, 8-10 ಸಾವಿರ ರೂ. ದರೋಡೆ ಮಾಡುತ್ತಿದೆ. ಹಾಲಿನ ದರವನ್ನು ಕಳೆದ ವರ್ಷ 3 ರೂ. ಹೆಚ್ಚಿಸಿ, ಈಗ 2 ರೂ. ಹೆಚ್ಚಿಸಿದ್ದಾರೆ. ಪೆಟ್ರೋಲ್‌-ಡೀಸೆಲ್‌ ದರವನ್ನು ನಿರ್ದಾಕ್ಷಿಣ್ಯವಾಗಿ ಏರಿಸಿದ್ದರಿಂದ ಎಲ್ಲ ದರಗಳು ಏರಿಕೆಯಾಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆರೋಪಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಿಎಂ ಸ್ಥಾನದ ಕುರಿತು ಕಾಂಗ್ರೆಸ್‌ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಘೀ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸೂಕ್ತ ಕ್ರಮ ವಹಿಸಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ಒಕ್ಕಲಿಗರು ಹಾಗೂ ಲಿಂಗಾಯತರು ಮಾತಾಡುತ್ತಿದ್ದಾರೆ. ಮುಂದೆ ಕುರುಬ ಸಮುದಾಯದವರು ಮಾತಾಡುತ್ತಾರೆ. ಜಾತಿಗಳ ನಡುವೆ ಕಾಂಗ್ರೆಸ್‌ ಕಚ್ಚಾಟ ಹುಟ್ಟುಹಾಕಿರುವುದು ಒಳ್ಳೆಯದಲ್ಲ. ಜಾತಿಗಳನ್ನು ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಚೊಂಬು ನೀಡುತ್ತಿದೆ ಎಂದು ಕಾಂಗ್ರೆಸ್‌ ತೋರಿಸಿತ್ತು. ಆದರೆ ವಾಸ್ತವದಲ್ಲಿ ಕಾಂಗ್ರೆಸ್‌ ಸರ್ಕಾರವೇ ಜನರಿಗೆ ಚೊಂಬು ನೀಡುತ್ತಿದೆ. ಕೇಂದ್ರ ಸರ್ಕಾರದ ಬಳಿ ಹೋಗಿ ಅಲ್ಲಿಯೂ ದ್ವೇಷದ ಕಿಡಿ ಕಾರುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಟಾಚಾರಕ್ಕೆ ಸಂಸದರ ಸಭೆ ಕರೆದು ಮಾತಾಡಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ಯೋಜನೆಗೆ ಅನುದಾನ ನೀಡಿದರೆ, ಅದಕ್ಕೆ ಸಮನಾಗಿ ತಮ್ಮ ಪಾಲನ್ನು ನೀಡಲು ಕೂಡ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಇಡೀ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...