ಬಿಡಿಎ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪ

Date:

ಗ್ಯಾರಂಟಿಗಳಿಂದ ಪಾಪರ್‌ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿ ದಿವಾಳಿಯ ಪರಮಾವಧಿಗೆ ತಲುಪಿದೆ. ಬಿಡಿಎ ಆಸ್ತಿಗಳನ್ನು ಮಾರಾಟ ಮಾಡುತ್ತಿದೆ. 200 ಕೋಟಿ ರೂ. ಗೂ ಅಧಿಕ ಕಿಕ್‌ಬ್ಯಾಕ್‌ ಇದೆ. ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವುದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ” ಎಂದು ತಿಳಿಸಿದ್ದಾರೆ.

“ಕೇರಳ ಸರ್ಕಾರವು ದಿವಾಳಿಯಾಗಿ ಸಾಲವೂ ಸಿಗುತ್ತಿಲ್ಲ. ಅದೇ ರೀತಿ ನಮ್ಮ ರಾಜ್ಯವೂ ಆರ್ಥಿಕತೆಯಲ್ಲಿ ಕೊನೆಯ ಸ್ಥಾನಕ್ಕೆ ಬರಲಿದೆ. ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಿ ದುಡ್ಡು ಹೊಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈ ಹಿಂದೆ ಸರ್ಕಾರ ಪಾರ್ಕಿಂಗ್‌ ಕಾಂಪ್ಲೆಕ್ಸ್‌, ಹಾಕಿ ಸ್ಟೇಡಿಯಂನ ಕಟ್ಟಡವನ್ನು ಗುತ್ತಿಗೆಗೆ ನೀಡಿ ಮಾರಾಟ ಮಾಡಿತ್ತು. ಈಗ ಆರು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಸುಮಾರು ಐವತ್ತು ವರ್ಷಕ್ಕೆ ಗುತ್ತಿಗೆಗೆ ನೀಡಲಾಗುತ್ತಿದೆ. ಇದು ಮಾರಾಟದ ಮಾದರಿಯಲ್ಲೇ ಇದೆ” ಎಂದು ಅಶೋಕ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದಿರಾನಗರ, ಎಚ್‌ಎಸ್‌ಆರ್‌ ಲೇಔಟ್‌, ಆಸ್ಟಿನ್‌ ಟೌನ್‌, ಕೋರಮಂಗಲ, ವಿಜಯನಗರ, ಆರ್‌.ಟಿ.ನಗರ, ಸದಾಶಿವನಗರ ಕಾಂಪ್ಲೆಕ್ಸ್‌ಗಳು ಬಿಡಿಎ ಸ್ವತ್ತು. ಈಗ ಇದನ್ನು ನುಂಗಣ್ಣಗಳು ನುಂಗಲು ಹೊರಟಿದ್ದಾರೆ. ಈ ಹಿಂದೆ ಕಾಂಗ್ರೆಸ್‌ ಈ ಕಾರ್ಯಕ್ಕೆ ಮುಂದಾದಾಗ ಜನರು ಪ್ರತಿಭಟಿಸಿದ್ದರು. ಈಗ ಮತ್ತೆ ಈ ಕಾರ್ಯಕ್ಕೆ ಮುಂದಾಗಿದ್ದು, ಜನರು ಪ್ರತಿಭಟನೆ ಮಾಡಿದ್ದಾರೆ. ಇದರಲ್ಲಿ 200 ಕೋಟಿ ರೂ. ಗೂ ಅಧಿಕ ಕಿಕ್‌ಬ್ಯಾಕ್‌ ಇದೆ. ಇದು ಸುಮಾರು 3,000 ಕೋಟಿ ರೂ. ಮೌಲ್ಯದ ಆಸ್ತಿಗಳಾಗಿವೆ” ಎಂದು ಅಶೋಕ್‌ ಹೇಳಿದ್ದಾರೆ.

“ಬಿಡಿಎ ಆಸ್ತಿಯನ್ನು ನುಂಗಲು ಹೊರಟ ಸರ್ಕಾರದ ಕ್ರಮದ ವಿರುದ್ಧ ಪ್ರತಿಭಟಿಸಲಾಗುವುದು. ಸರ್ಕಾರ ಆದಾಯ ಹೆಚ್ಚಿಸಿಕೊಳ್ಳಲು ಬೇರೆ ಮಾರ್ಗ ನೋಡಲಿ. ಕೂಡಲೇ ಈ ಟೆಂಡರ್‌ ರದ್ದುಪಡಿಸಲಿ. ಇಲ್ಲವಾದರೆ ವಿಧಾನಸಭೆ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ” ಎಂದು ತಿಳಿಸಿದರು.

“ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಲು ಕಾಂಗ್ರೆಸ್‌ ಕಾರಣ. ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲೆಂದೇ ಸುರ್ಜೇವಾಲ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಹೀಗೆ ಪ್ಲಾನ್‌ ಮಾಡಿದ್ದಾರೆ. ಚಿತ್ರಕಥೆಯನ್ನು ಸುರ್ಜೇವಾಲ ಬರೆದಿದ್ದು, ಸಿದ್ದರಾಮಯ್ಯ ನಿರ್ದೇಶನ ಹಾಗೂ ಡಿ.ಕೆ.ಶಿವಕುಮಾರ್‌ ನಿರ್ಮಾಣ ಮಾಡಿದ್ದಾರೆ” ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

“ವೀರೇಂದ್ರ ಪಾಟೀಲ್‌ ಅವರಿಂದ ಅಧಿಕಾರ ಕಿತ್ತುಕೊಂಡು, ಬಿ.ಎಸ್.ಯಡಿಯೂರಪ್ಪನವರನ್ನು ಜೈಲಿಗೆ ಕಳುಹಿಸಿ ಲಿಂಗಾಯತರಿಗೆ ಕಾಂಗ್ರೆಸ್‌ ಅಪಮಾನ ಮಾಡಿತ್ತು. ಈಗ ಒಕ್ಕಲಿಗರನ್ನು ಟಾರ್ಗೆಟ್‌ ಮಾಡಿ ಒಂದು ಲಕ್ಷ ಪೆನ್‌ಡ್ರೈವ್‌ ತಯಾರು ಮಾಡಿ ಹಂಚಲಾಗಿದೆ. ಎಸ್‌ಐಟಿ ರಬ್ಬರ್‌ ಸ್ಟಾಂಪ್‌ ಆಗಿದ್ದು, ಸಿಎಂ ಸಿದ್ದರಾಮಯ್ಯ ಹೇಳಿದಂತೆ ಕೇಳುತ್ತದೆ. ವೀಡಿಯೋ ಹಂಚುವುದು ಅಪರಾಧ ಎಂದೇ ಎಸ್‌ಐಟಿ ಹೇಳಿದೆ. ಪೆನ್‌ಡ್ರೈವ್‌ ಕೊಟ್ಟ ಚಾಲಕನನ್ನು ಜೈಲಿಗೆ ಹಾಕಿಲ್ಲ. ಪೆನ್‌ಡ್ರೈವ್‌ ಹಂಚಿದವರಲ್ಲಿ ಎಷ್ಟು ಜನರನ್ನು ಎಸ್‌ಐಟಿ ಜೈಲಿಗೆ ಹಾಕಿದೆ” ಎಂದು ಪ್ರಶ್ನಿಸಿದರು.

 “ಈ ಪ್ರಕರಣದಲ್ಲಿ ಸರ್ಕಾರದ ಪಾತ್ರವಿದೆ ಎಂದು ಕಾನೂನು ತಜ್ಞರೇ ಹೇಳಿದ್ದಾರೆ. ಆದ್ದರಿಂದ ರಾಜ್ಯಪಾಲರು ಸರ್ಕಾರವನ್ನು ವಜಾಗೊಳಿಸಬೇಕು” ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...