ಮನೆ ಕಳೆದುಕೊಂಡವರಿಗೆ ಕಾಂಗ್ರೆಸ್ ಸರಕಾರ ಹೆಚ್ಚಿನ ಪರಿಹಾರ ಕೊಡಲಿ: ವಿಜಯೇಂದ್ರ ಆಗ್ರಹ

Date:

ನೆರೆಪೀಡಿತರು ಮತ್ತು ಮನೆ ಕಳೆದುಕೊಂಡವರಿಗೆ ಹಿಂದಿನ ಬಿಜೆಪಿ ಸರಕಾರ ಸ್ಪಂದಿಸಿದ ಮಾದರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಹೆಚ್ಚು ಪರಿಹಾರ ಕೊಟ್ಟು ಸ್ಪಂದಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಅಂಕೋಲಾ ತಾಲ್ಲೂಕಿನ ಉಳುವಾರೆ, ಶಿರೂರು ಮತ್ತಿತರ ಕಡೆ ಆದ ಮಳೆ ಹಾನಿ, ಅನಾಹುತದಿಂದ ಬಡವರು ಮನೆ ಕಳೆದುಕೊಂಡಿದ್ದಾರೆ. ಅದನ್ನು ನಾನು ವೀಕ್ಷಿಸಿ ಬಂದಿದ್ದೇನೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ರಾಜ್ಯ ಸರಕಾರವು ಎನ್‍ಡಿಆರ್‌ಎಫ್ ನಿಯಮದ ಪ್ರಕಾರ ಮನೆ ಕಳೆದುಕೊಂಡ ಬಡವರಿಗೆ ಸುಮಾರು 1 ಲಕ್ಷ ಕೊಡಬೇಕಿತ್ತು. ಅದು ಸಾಕಾಗುವುದಿಲ್ಲ ಎಂದು 5 ಲಕ್ಷ ನೀಡುವ ನಿರ್ಧಾರವನ್ನು ಯಡಿಯೂರಪ್ಪ ಅವರು ಕೈಗೊಂಡಿದ್ದರು” ಎಂದರು.

“ಗೋಡೆ ಕುಸಿದ ಮನೆಗೆ ಎನ್‍ಡಿಆರ್‌ಎಫ್ ನಿಯಮದ ಪ್ರಕಾರ 40 ಸಾವಿರ ಕೊಡುತ್ತಿದ್ದರು. ಅದನ್ನು ಒಂದು ಲಕ್ಷಕ್ಕೆ ಹೆಚ್ಚಿಸುವ ನಿರ್ಧಾರವನ್ನು ಯಡಿಯೂರಪ್ಪ ಅವರು ಕೈಗೊಂಡಿದ್ದರು. ರಾಜ್ಯಾದ್ಯಂತ ಬಡವರು ಅತಿವೃಷ್ಟಿಯಿಂದ ಮನೆಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳು ಇದೇ ಮಾದರಿಯಲ್ಲಿ ಪರಿಹಾರ ಕೊಡಬೇಕು; ತಕ್ಷಣ ಈ ಸಮಸ್ಯೆಗೆ ಸ್ಪಂದಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿರೂರು ಗುಡ್ಡ ಕುಸಿತದಲ್ಲಿ ಲಕ್ಷ್ಮಣ ನಾಯ್ಕರ ಅವರು ಮೃತರಾಗಿದ್ದು, ಕುಟುಂಬದ ಮೂವರು ಮಹಿಳೆಯರು ನಿರ್ಗತಿಕರಾಗಿದ್ದಾರೆ. ಆದರೆ, ಅವರ ಮನೆಗೆ ಶಾಸಕರು, ಸಚಿವರು ಭೇಟಿ ಕೊಟ್ಟಿಲ್ಲ. ಕಾನೂನು ಏನೇ ಇದ್ದರೂ ಪರಿಹಾರ ನೀಡಬೇಕಿತ್ತು. ನಿನ್ನೆ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಧೈರ್ಯ ತುಂಬಿದ್ದೇನೆ. ಬಡವರ ಕುಟುಂಬಕ್ಕೆ ರಾಜ್ಯ ಸರಕಾರ ಕೂಡಲೇ ಸ್ಪಂದಿಸಬೇಕು, ಪರಿಹಾರ ಕೊಡಬೇಕಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...