ಪತ್ರಕರ್ತರಿಗೆ ಕಾಂಗ್ರೆಸ್‌ ಸರ್ಕಾರ ಬೆಂಬಲ; ಹಿಂದಿನ ಸರ್ಕಾರದ ವಿರುದ್ಧ ಟೀಕೆ

Date:

10 ವರ್ಷಗಳ ಬಿಆರ್‌ಎಸ್ ಆಡಳಿತದಲ್ಲಿ ಪತ್ರಕರ್ತರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಆ 10 ವರ್ಷಗಳಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗಿದೆ. ನಮ್ಮ ಸರ್ಕಾರ ಪತ್ರಕರ್ತರಿಗೆ ಬೆಂಬಲ ನೀಡುತ್ತದೆ ಎಂದು ತೆಲಂಗಾಣ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ, ಕಂದಾಯ ಹಾಗೂ ವಸತಿ ಸಚಿವ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.

ಖಮ್ಮಂನಲ್ಲಿ ನಡೆದ ಟಿಯುಡಬ್ಲ್ಯೂಜೆ (ಐಜೆಯು) ರಾಜ್ಯ ಸಮ್ಮೇಳನದಲ್ಲಿ ಅವರು ಮಾತನಾಡಿದರು. “ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಪತ್ರಕರ್ತರನ್ನು ಕಡೆಗಣಿಸಿದ್ದರು. ನಾವು ಪತ್ರಕರ್ತರ ಬೆಂಬಲಕ್ಕಿದ್ದೇವೆ. ಪತ್ರಕರ್ತರ ಮೇಲಿನ ದಾಳಿ ತಡೆಗೆ ವಿಶೇಷ ಕಾನೂನು ತರಲಾಗುವುದು. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಮನೆ ನೀಡಲು ಶೀಘ್ರವೇ ನೀತಿ ರೂಪಿಸಿ, ಜಾರಿಗೊಳಿಸಲಾಗುವುದು” ಎಂದು ಸಚಿವರು ತಿಳಿಸಿದ್ದಾರೆ.

“ತೆಲಂಗಾಣ ಚಳವಳಿಯಲ್ಲಿ ಪತ್ರಕರ್ತರು ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ, ಬಿಆರ್‌ಎಸ್ ಆಳ್ವಿಕೆಯಲ್ಲಿ ಕೆಸಿಆರ್ ಅವರು ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲರಾಗಿದ್ದರು. ಅವರ ಭರವಸೆಗಳು ಕೇವಲ ಮಾತಿಗೆ ಸೀಮಿತವಾಗಿದ್ದವು. ಅವರ ಆಡಳಿತದಲ್ಲಿ ಒಂದೇ ಒಂದು ಸಮಸ್ಯೆಯೂ ಬಗೆಹರಿದಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ವರ್ಷದ ಹಿಂದೆ ಪ್ರಕರಣ ತೆರವಾದರೂ ಹಿಂದಿನ ಆಡಳಿತದಲ್ಲಿ ಪತ್ರಕರ್ತರಿಗೆ ಮನೆ ನಿವೇಶನ ಮಂಜೂರು ಮಾಡಿಲ್ಲ. ನಮ್ಮ ಸರ್ಕಾರ, ಹೈದರಾಬಾದ್ ಜರ್ನಲಿಸ್ಟ್ಸ್ ಹೌಸಿಂಗ್ ಸೊಸೈಟಿಯ ಸದಸ್ಯರಿಗೆ ಶೀಘ್ರದಲ್ಲೇ ಸೈಟ್‌ಗಳನ್ನು ಹಸ್ತಾಂತರಿಸಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಘೋಷಿಸಿದ್ದಾರೆ. ಒಂದು ವಾರ ಅಥವಾ 10 ದಿನಗಳಲ್ಲಿ ಜಿಒ ಬಿಡುಗಡೆಯಾಗುವ ನಿರೀಕ್ಷೆಯಿದೆ. ಹೈದರಾಬಾದ್‌ನಲ್ಲಿರುವ ಅರ್ಹ ಪತ್ರಕರ್ತರು ಹಾಗೂ ಜಿಲ್ಲೆಗಳು ಮತ್ತು ಮಂಡಲಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಪತ್ರಕರ್ತರಿಗೆ ಮನೆ ನಿವೇಶನ ನೀಡಲು ನಾವು ನೀತಿಯನ್ನು ರೂಪಿಸುತ್ತಿದ್ದೇವೆ” ಎಂದು ಶ್ರೀನಿವಾಸ ರೆಡ್ಡಿ ಹೇಳಿದರು.

“ಆರೋಗ್ಯ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳ ನೀತಿಗಳನ್ನು ಅಧ್ಯಯನ ಮಾಡಿ ಅದರಂತೆ ಪತ್ರಕರ್ತರಿಗೆ ಆರೋಗ್ಯ ರಕ್ಷಣೆಯನ್ನು ವಿಸ್ತರಿಸಲಾಗುವುದು. ಪತ್ರಕರ್ತರ ಕಲ್ಯಾಣ ಮತ್ತು ರಕ್ಷಣೆಗಾಗಿ ಎಲ್ಲ ರೀತಿಯ ಸಮಿತಿಗಳನ್ನು ಶೀಘ್ರವೇ ಮರುಸ್ಥಾಪಿಸಲಾಗುವುದು” ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರೆಸ್ ಅಕಾಡೆಮಿ ಅಧ್ಯಕ್ಷ ಕೆ ಶ್ರೀನಿವಾಸ್ ರೆಡ್ಡಿ, ಐಜೆಯು ಮಾಜಿ ಅಧ್ಯಕ್ಷ ದೇವುಲಪಲ್ಲಿ ಅಮರ್, ಟಿಯುಡಬ್ಲ್ಯೂಜೆ (ಐಜೆಯು) ರಾಜ್ಯಾಧ್ಯಕ್ಷ ನಗುನೂರಿ ಶೇಖರ್, ಪ್ರಧಾನ ಕಾರ್ಯದರ್ಶಿ ವಿರ್ಹತ್ ಅಲಿ, ಟಿಯುಡಬ್ಲ್ಯುಜೆ ರಾಜ್ಯ ಉಪಾಧ್ಯಕ್ಷ ಕೆ ರಾಮನಾರಾಯಣ, ಐಜೆಯು ಪ್ರತಿನಿಧಿಗಳಾದ ನರೇಂದ್ರ ರೆಡ್ಡಿ, ಕೆ ಸತ್ಯನಾರಾಯಣ, ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮತ್ತು ರಾಷ್ಟ್ರೀಯ ಮತ್ತು ರಾಜ್ಯ ಮಂಡಳಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...