ಸಂಕ್ರಾಂತಿ ನಂತರ ಕಾಂಗ್ರೆಸ್‌ ಸರ್ಕಾರ ಪತನ: ಸಿ.ಪಿ ಯೋಗೇಶ್ವರ್

Date:

ಸಂಕ್ರಾಂತಿ ಹಬ್ಬದ ನಂತರ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇರುವುದು ಅನುಮಾನ. ಸಂಕ್ರಾಂತಿ ವೇಳೆ ಸೂರ್ಯ ಪಥ ಬದಲಿಸುವಂತೆ, ರಾಜ್ಯದಲ್ಲಿ ಸರ್ಕಾರ ಬದಲಾಗಬಹುದು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಇನ್ನು ಆರು ತಿಂಗಳಲ್ಲಿ ಸರ್ಕಾರ ಉರುಳುತ್ತದೆ ಎಂದು ಹೇಳಿದ್ದರು. ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿತ್ತು. ಈ ಬೆನ್ನಲ್ಲೇ, ಸಿ.ಪಿ ಯೋಗೇಶ್ವರ್ ಕೂಡ ಅಂತದ್ದೇ ಹೇಳಿಕೆ ನೀಡಿದ್ದಾರೆ. ಅಂದಹಾಗೆ, ಯೋಗೇಶ್ವರ್ ಮತ್ತು ಕುಮಾರಸ್ವಾಮಿ ಪರಸ್ಪರ ವಿರೋಧಿಗಳಾಗಿದ್ದು, ಚನ್ನಪಟ್ಟಣದಲ್ಲಿ ಹಲವಾರು ಭಾರೀ ನೇರಾ-ನೇರಾ ವಾಗ್ದಾಳಿ ನಡೆಸಿದ್ದರು. ಇದೀಗ, ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಈ ಇಬ್ಬರೂ ಒಂದೇ ರೀತಿ ಮಾತನಾಡುತ್ತಿದ್ದಾರೆ.

ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿನ ಇಂದಿನ ರಾಜಕೀಯ ಬೆಳವಣಿಗೆಯಿಂದಾಗಿ ಕಾಂಗ್ರೆಸ್ ನಾಯಕರ ನಡುವೆ ಬಿರುಕಿದೆ.ಕಾಂಗ್ರೆಸ್‌ನಲ್ಲಿ ಅಸಮಾಧಾನಗೊಂಡಿರುವ ಶಾಸಕರು ವಿಮುಖವಾಗಿ ಯೋಚಿಸುತ್ತಿದ್ದಾರೆ. ಹೀಗಾಗಿ, 2023ರ ಬಳಿಕ ರಾಜಕೀಯ ಬದಲಾಗುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಶಾಸಕರಿಗೆ ರಾಜಕೀಯ ಭವಿಷ್ಯದ ಆತಂಕ ಇದೆ. ಕೆಲವರು ನನ್ನೊಂದಿಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ. ನಾವು ಯಾವುದೇ ಆಪರೇ‍ಷನ್ ಮಾಡುತ್ತಿಲ್ಲ” ಎಂದು ಹೇಳಿದ್ದಾರೆ.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಧಮನಕಾರಿ ಆಡಳಿತ ಮಾಡುತ್ತಿದೆ. ಡಿಕೆ ಶಿವಕುಮಾರ್​ ಆಪರೇಷನ್ ಹಸ್ತ ನಡೆಸಲು ಮುಂದಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎದುರಿಸಲು ಮೈತ್ರಿ ಅನಿವಾರ್ಯ” ಎಂದು ಅವರು ಹೇಳಿದ್ದಾರೆ.

“ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ವಿಚಾರ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...