ಮೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ಕುಮಾರಸ್ವಾಮಿ ಪುನರುಚ್ಚಾರ

Date:

ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಮೇ ತಿಂಗಳಲ್ಲಿ ಉರುಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಮತ್ತೆ ಪುನರುಚ್ಚರಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಕ್ಷೇತ್ರದ ಬೆಳತೂರು ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತಾಡಿದ ಅವರು, “ರಾಜ್ಯದ ಅಭಿವೃದ್ಧಿಗೆ ಹಣ ಹೊಂದಿಸಲು ಹರಸಾಹಸ ಪಡುತ್ತಿರುವ ಈ ಸರಕಾರ ಲೋಕಸಭಾ ಚುನಾವಣೆ ನಂತರ ಖಂಡಿತವಾಗಿಯೂ ಬಿದ್ದುಹೋಗಲಿದೆ” ಎಂದರು.

ಈ ಮೂಲಕ ಸಿದ್ದರಾಮಯ್ಯ ಸರ್ಕಾರ ಉರುಳಲಿದೆ ಎಂದು ಹೇಳುವುದನ್ನು ಕುಮಾರಸ್ವಾಮಿ ಮುಂದುವರಿಸಿದ್ದಾರೆ. “ಸ್ವಲ್ಪ ದಿನ ಕಾಯಿರಿ, ರಾಜ್ಯದ 6.5 ಕೋಟಿ ಜನರ ಕಷ್ಟ ಸುಖವನ್ನು ಅರಿತು ಕೆಲಸ ಮಾಡುವ ಸರಕಾರ ಬರಲಿದೆ. ಜಿಲ್ಲೆಯಿಂದ ಜೆಡಿಎಸ್ ಪಕ್ಷದ ಏಕೈಕ ಶಾಸಕರಾಗಿರುವ ಹೆಚ್ ಟಿ ಮಂಜು ಮೇಲೆ ಪ್ರೀತಿ ವಿಶ್ವಾಸವಿಟ್ಟು ಗೆಲ್ಲಿಸಿರುವುದಕ್ಕೆ ಜನತೆಗೆ ಧನ್ಯವಾದಗಳು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇವರಿಗೆ ಗ್ಯಾರಂಟಿಗಳ ಬಗ್ಗೆ ಇರುವ ಚಿಂತೆ ಜನಸಾಮಾನ್ಯರ ಮೇಲೆ ಇಲ್ಲ. ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಸರಕಾರಿ ನೌಕರರಿಗೆ ವೇತನ ನೀಡಲೂ ಹಣವಿರುವುದಿಲ್ಲ” ಎಂದು ಟೀಕಿಸಿದರು.

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲಿ

“ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಳೆದ ಒಂದು ವಾರದಿಂದಲೂ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದುವರೆಗೂ ಉನ್ನತ ಶಿಕ್ಷಣ ಸಚಿವರು ಇದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ಈಡಿಗರ ಒಗ್ಗಟ್ಟು ಪ್ರದರ್ಶನ; ಸಾಗರೋಪಾದಿಯಲ್ಲಿ ಜನ ಭಾಗಿ

ಸಮುದಾಯ ಭವನಕ್ಕೆ ಅನುದಾನ

”ದೇವೇಗೌಡರ ಬಗ್ಗೆ ನೀವುಗಳು ಇಟ್ಟಿರುವ ಅಭಿಮಾನ, ಪ್ರೀತಿಗಾಗಿ ಬೆಳತೂರು ಗ್ರಾಮದ ಕೋಟೆ ರಂಗನಾಥಸ್ವಾಮಿ ಸನ್ನಿದಿಯಲ್ಲಿ ಸಮುದಾಯ ಭವನ ನಿರ್ಮಿಸಲು ರಾಜ್ಯಸಭಾ ಸದಸ್ಯರ ನಿಧಿಯಿಂದ 25 ಲಕ್ಷ ರೂ. ಹಣ ಒದಗಿಸಲಾಗುವುದು,” ಎಂದು ಘೋಷಿಸಿದರು.

ಎಚ್‌.ಡಿ. ದೇವೇಗೌಡ ಅಭಿಮಾನಿ ಬಳಗದವರು, ”ತಾಲೂಕಿನಲ್ಲಿ ಹಾದುಹೋಗಿರುವ ಜಲಸೂರು-ಬೆಂಗಳೂರು ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ ಸಮರ್ಪಕ ಪರಿಹಾರ ನೀಡಿಲ್ಲ. ಕೆಲವರಿಗೆ ಒಂದು ಗುಂಟೆಗೆ 14,000 ರೂ. ನೀಡಿದ್ದರೆ ಇನ್ನೊಬ್ಬರಿಗೆ 2,40,000 ರೂ ನೀಡಲಾಗಿದೆ. ಇದನ್ನು ಸರಕಾರದ ಗಮನಕ್ಕೆ ತಂದು ರೈತರಿಗೆ ನ್ಯಾಯ ಒದಗಿಸಬೇಕು,” ಎಂದು ಮನವಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...