ಶಾಸಕ ಮುನಿರತ್ನ ವಿಚಾರದಲ್ಲಿ ಕಾನೂನು ಪ್ರಕಾರ ನಡೆದುಕೊಳ್ಳದ ಕಾಂಗ್ರೆಸ್ ಸರ್ಕಾರ: ಆರ್‌ ಅಶೋಕ್

Date:

ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಾಗ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಆದರೆ ಶಾಸಕ ಮುನಿರತ್ನ ವಿಚಾರದಲ್ಲಿ ತಕ್ಷಣ ಬಂಧಿಸಲಾಗಿದೆ. ಶಾಸಕರು ನಿಂದಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಆದರೆ, ಕಾನೂನು ಪ್ರಕಾರ ಸರ್ಕಾರ ನಡೆದುಕೊಳ್ಳದೆ ದ್ವೇಷದ ರಾಜಕಾರಣ ಮಾಡಿದೆ ಎಂದು ಆರ್‌ ಅಶೋಕ್ ದೂರಿದರು.

‌ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಫೋರೆನ್ಸಿಕ್‌ ಲ್ಯಾಬ್‌ಗೆ ಧ್ವನಿಮುದ್ರಣ ಕಳುಹಿಸದೇ ಎಲ್ಲ ತೀರ್ಮಾನ ಮಾಡುವುದಾದರೆ ಆ ಲ್ಯಾಬ್‌ಗಳನ್ನು ಮೊದಲು ಮುಚ್ಚಿಸಲಿ. ಶಾಸಕರ ವಿವರಣೆ ಕೂಡ ಕೇಳದೆ ಕೂಡಲೇ ಕ್ರಮ ವಹಿಸಲಾಗಿದೆ” ಎಂದರು.

“ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಷ್ಟು ಮುಸ್ಲಿಮರು ಪೆಟ್ರೋಲ್‌ ಬಾಂಬ್‌ ಎಲ್ಲಿಂದ ತಂದಿದ್ದಾರೆ, ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ ಸೇರಿದಂತೆ ಎಲ್ಲ ಸಂಗತಿಗಳನ್ನು ತನಿಖೆ ಮಾಡಬೇಕಿದೆ. ಇದಕ್ಕಾಗಿ ಈ ಎಲ್ಲ ಪ್ರಕರಣಗಳನ್ನು ಎನ್‌ಐಎಗೆ ವಹಿಸಬೇಕು” ಎಂದರು.

“ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗಿ ದೇಶ ವಿರೋಧಿ ಶಕ್ತಿಗಳ ಜೊತೆ ಟೀ ಪಾರ್ಟಿ ಮಾಡುತ್ತಿದ್ದಾರೆ. ದೇಶ ವಿಭಜನೆ ಮಾಡಿದ ಕಾಂಗ್ರೆಸ್‌, ಈಗ ಮತ್ತೆ ದೇಶ ವಿರೋಧಿ ಶಕ್ತಿಗಳು ತಲೆ ಎತ್ತಲು ಸಹಕಾರ ನೀಡುತ್ತಿದೆ. ಪ್ರಗತಿಪರರ ಮುಖವಾಡ ಹಾಕಿಕೊಂಡ ಸಾಹಿತಿಗಳು ಹಾಗೂ ನಗರ ನಕ್ಸಲರು ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ಇವರ‍್ಯಾರೂ ಈ ಘಟನೆಗಳನ್ನು ಖಂಡಿಸುತ್ತಿಲ್ಲ.‌ ಪ್ರತಿ ದಿನ ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಅರವಿಂದ ಕೇಜ್ರಿವಾಲ್‌ ನಾಟಕದ ಕಂಪನಿ ನಡೆಸುತ್ತಿದ್ದಾರೆ. ಇವರು ಅಪರಾಧಿ ಎಂದು ಸಾಬೀತಾಗುವ ಮೊದಲೇ ರಾಜೀನಾಮೆ ಕೊಡುವ ನಾಟಕವಾಡುತ್ತಿದ್ದಾರೆ. ಅಧಿಕಾರದ ದುರಾಸೆಗಾಗಿ ಅವರು ರಾಜಕೀಯಕ್ಕೆ ಬಂದಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...