ವರ್ಗಾವರ್ಗಿ ದಂಧೆಗೆ ಮುಖ್ಯಮಂತ್ರಿ ಕಚೇರಿಯಲ್ಲೇ ʼಹುಂಡಿʼ ಇದೆ; ಎಚ್‌ ಡಿ ಕುಮಾರಸ್ವಾಮಿ ಆರೋಪ

Date:

ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪವನ್ನೇ ಪ್ರಮುಖ ಅಸ್ತ್ರವಾಗಿ ಬಳಸಿಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ವಿರುದ್ಧವೂ ಈಗ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್‌ ಮಾಡುವ ಮೂಲಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದ್ದಾರೆ.

“ಪಂಚಗ್ಯಾರಂಟಿಗಳ ಕಾಂಗ್ರೆಸ್‌ ಸರ್ಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್ʼ
ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರ್ಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ” ಎಂದು ಎಚ್‌ ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

“ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ. ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? ಸಿಎಂಒ ಎಂದರೆ ಸಿಎಂ ಆಫ್‌ ಕರ್ನಾಟಕವೋ ಅಥವಾ ಕರಪ್ಷನ್‌ ಆಫ್‌ ಕರ್ನಾಟಕವೋ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಲ್ಕು ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಲಪಂಥೀಯರಿಂದ ಟ್ರೋಲ್ : ಬಹಿರಂಗ ಸಭೆಯಲ್ಲೇ ಭಾವುಕಳಾದ ಪತ್ರಕರ್ತೆ

“ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ. ʼಸರ್ಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರ್ಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...