ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್

Date:

  • ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ದೂರು
  • ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲು

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಒಳಗೊಂಡಂತೆ ಹಲವರ ವಿರುದ್ದ ರಾಜ್ಯ ಕಾಂಗ್ರೆಸ್‌ ದೂರು ದಾಖಲಿಸಿದೆ.

ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಚಂಡೀಗಢ ಬಿಜೆಪಿ ರಾಜ್ಯಾಧ್ಯಕ್ಷ ಅರುಣ್ ಸೂದ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಈ ದೂರು ನೀಡಿದ್ದು, ಅಗತ್ಯ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರು ನೀಡಿದ ಬಳಿಕ ಮಾತನಾಡಿದ ಪ್ರಿಯಾಂಕ್‌ ಖರ್ಗೆ ಬಿಜೆಪಿ ಐಟಿ ಸೆಲ್ ನ ಸುಳ್ಳಿನ ಫ್ಯಾಕ್ಟರಿಯನ್ನು ರಾಜ್ಯದಲ್ಲಿ ಬಂದ್ ಮಾಡಲು ತೀರ್ಮಾನಿಸಿದ್ದೇವೆ.

ಅವರು ಸದಾ ಕೋಮು ವಿಷಬೀಜ ಬಿತ್ತಿ, ಸುಳ್ಳನ್ನು ನೀಜ ಎಂದು ಬಿಂಬಿಸುವುದು, ಸಮಾಜದಲ್ಲಿ ಭೀತಿ ಸೃಷ್ಟಿಸುವುದು ಇವರ ಕೆಲಸವಾಗಿದೆ. ಕಳೆದ ಸರ್ಕಾರದಲ್ಲಿ ಇವರ ಆಟ ನಡೆದಿತ್ತು. ನಮ್ಮ ಸರ್ಕಾರದಲ್ಲಿ ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡಿ ತೋರಿಸುತ್ತೇವೆ. ಸುಳ್ಳು ಮಾಹಿತಿ ನೀಡಿ, ಶಾಂತಿ, ಕಾನೂನು ಸುವ್ಯವಸ್ಥೆ ಕದಡಲು ಪ್ರಯತ್ನಿಸುವವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ.

ಇವರು ತಮ್ಮ ವಿಡಿಯೋದಲ್ಲಿ ಕಾಂಗ್ರೆಸ್ ಭಯೋತ್ಪಾದನೆಗಿಂತ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಮುಂದೆ ನಿಂತು ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಜವಾಬ್ದಾರಿ ಸ್ಥಾನದಲ್ಲಿರುವ ನಡ್ಡಾ, ಮಾಳವಿಯಾ ಹಾಗೂ ಸೂದ್ ಅವರು ಅಧಿಕೃತವಾಗಿ ತಪ್ಪು ಮಾಹಿತಿ ನೀಡುವಾಗ ನಾವು ಸುಮ್ಮನೆ ಕೂರುವುದಿಲ್ಲ.

ಅವರು ನಮ್ಮ ವಿರುದ್ಧ ಮಾಡಿರುವ ಆರೋಪವನ್ನು ಸಮರ್ಥಿಸಿಕೊಳ್ಳಬೇಕು. ಬೇಕಾದರೆ ಅವರು ನಮ್ಮ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಿ. ಈದರೆ ಸುಳ್ಳು ಪ್ರಚಾರ ನಡೆಸುತ್ತಿರುವ ಅವರ ವಿರುದ್ಧ ಸೆಕ್ಷನ್ 505(2), 553 (ಎ), 120(ಬಿ), 34 ಸೇರಿದಂತೆ ಇತರೆ ಕಾಯ್ದೆಗಳ ಅಡಿಯಲ್ಲಿ ದೂರು ನೀಡಿದ್ದೇವೆ.

ಈ ಸುದ್ದಿ ಓದಿದ್ದೀರಾ? :ಕೇಂದ್ರ ಸರ್ಕಾರ ಸಂವಿಧಾನದ ಒಕ್ಕೂಟ ತತ್ವಗಳಿಗೆ ಬದ್ಧವಾಗಿ ನಡೆದುಕೊಳ್ಳಲಿ: ಸಮಾನ ಮನಸ್ಕರ ಒಕ್ಕೂಟ ಆಗ್ರಹ

ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ ಸಮಾನತೆ ತರಲು, ಸಂವಿಧಾನದ ಪರವಾಗಿ, ಬಡವರ ಏಳಿಗೆಗೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಇದು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಇಂತಹ ಸುಳ್ಳು ಮಾಹಿತಿ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಇದು ಯಶಸ್ವಿಯಾಗಲು ನಾವು ಬಿಡುವುದಿಲ್ಲ. ಇವರನ್ನು ಕಾನೂನು ಮೂಲಕ ಎದುರಿಸುತ್ತೇವೆ.

ಅಮಿತ್ ಮಾಳವಿಯ ಅವರು ಬೆಂಗಳೂರಿಗೆ ಆಗಮಿಸಿ ಕಾಂಗ್ರೆಸ್ ಪಕ್ಷ ಹೇಗೆ ದೇಶ ವಿರೋಧಿ ಚಟುವಟಿಕೆ ಮಾಡುತ್ತಿದೆ ಎಂದು ಹೇಳಲಿ. ಇಲ್ಲದಿದ್ದರೆ, ಕ್ಷಮೆ ಕೇಳಿ, ಮುಂದೆ ಇಂತಹ ಸುಳ್ಳು ಪ್ರಚಾರ ಮಾಡುವುದಿಲ್ಲ ಎಂದು ಪತ್ರ ಬರೆದುಕೊಡಬೇಕು. ಸುಳ್ಳು ಸುದ್ದಿ, ಕೋಮು ಸೌಹಾರ್ದತೆಗೆ ಧಕ್ಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...