ವಿಧಾನಸೌಧಕ್ಕೆ ಬೀಗ ಹಾಕಿ, ಹಣದ ಚೀಲ ತಂದು ಕಾಂಗ್ರೆಸ್ ಚುನಾವಣೆ ಮಾಡಿದೆ: ಸಂಸದ ಬೊಮ್ಮಾಯಿ

Date:

ರಾಜ್ಯ ಸರ್ಕಾರ ಹದಿನೈದು ದಿನದಿಂದ ವಿಧಾನಸೌಧಕ್ಕೆ ಕೀಲಿ ಹಾಕಿ ಹಣದ ಚೀಲ ತೆಗೆದುಕೊಂಡು ಬಂದು ಚುನಾವಣೆ ಮಾಡಿದ್ದಾರೆ. ಅವರಿಗೆ ಜನರು ಪಾಠ ಕಲಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಅವರು ಇಂದು (ನ.13) ಶಿಗ್ಗಾಂವಿ- ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರೊಂದಿಗೆ ಶಿಗ್ಗಾಂವಿ ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ-1 ನಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

“ಶಿಗ್ಗಾಂವಿ-ಸವಣೂರು ಕ್ಷೇತ್ರದಲ್ಲಿ ಆರಂಭದಿಂದಲೂ ಸಾಮಾನ್ಯ ಮತದಾರರು ಬಹಿರಂಗ ಬೆಂಬಲ ವ್ಯಕ್ತಪಡಿಸಿದ್ದಾರೆ. ದಿನೇ ದಿನೆ ಈ ಬೆಂಬಲ ಹೆಚ್ಚಳವಾಗಿದೆ‌. ಇದೆಲ್ಲದರ ಹಿನ್ನೆಲೆಯಲ್ಲಿ ಭರತ್ ಬೊಮ್ಮಾಯಿ ಬಹಳ ಅಂತರದಿಂದ ಗೆಲ್ಲುತ್ತಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಸರ್ಕಾರ ವಿಧಾನಸೌಧಕ್ಕೆ ಕೀಲಿ ಹಾಕಿ ಹಣದ ಚೀಲ ಹಿಡಿದುಕೊಂಡು ಬಂದು ಚುನಾವಣೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ ಸರ್ಕಾರಿ ಕೆಲಸಗಳನ್ನು ನಿಲ್ಲಿಸಿ ಚುನಾವಣೆ ನಡೆಸಿದ್ದಾರೆ. ಅವರು ತಮ್ಮ ರಾಜಕೀಯ ಅಧಃಪತನವನ್ನು ಈ ರೀತಿ ತೊರಿಸಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾರ್ವಜನಿಕ ಸಂಯಮವೂ, ಸುದ್ದಿ ಮಾಧ್ಯಮಗಳೂ

“ಕಾಂಗ್ರೆಸ್ ನವರು ನಮ್ಮ ಮೇಲೆ ಮಾಡಿರುವ ಅರೋಪ ಯಾವುದು ಸತ್ಯವಲ್ಲ‌. ನವೆಂಬರ್ 23 ರಕ್ಕೆ ಅದಕ್ಕೆಲ್ಲ ಉತ್ತರ ಸಿಗುತ್ತದೆ. ಕಾಂಗ್ರೆಸ್ ಅಭ್ಯರ್ಥಿ ರೌಡಿ ಶೀಟರ್ ಪ್ರಕರಣ ಇನ್ನು ಖುಲಾಸೆಯಾಗಿಲ್ಲ ಎಂದು ಎಸ್ಪಿ ಅವರೇ ಹೇಳಿದ್ದರು. ಅವರೇ ಎರಡು ತಾಸಿನಲ್ಲಿ ಉಲ್ಟಾ ಹೊಡೆದರು. ಗೃಹ ಇಲಾಖೆ ಪೊಲೀಸರನ್ನು ಸಂಪೂರ್ಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ” ಎಂದು ಹೇಳಿದರು.

“ಈ ಚುನಾವಣೆಯಲ್ಲಿ ಅಲ್ಪ ಸಂಖ್ಯಾತರ ತುಷ್ಟೀಕರಣ ಹೆಚ್ಷಾಗಿದೆ. ಕಾಂಗ್ರೆಸ್‌ ಸೋಲಿನ ಭಯದಲ್ಲಿ ತುಷ್ಟೀಕರಣ ನಿರಂತರ ಮಾಡುತ್ತ ಬಂದಿದೆ. ಅವರು ರಾಗದ್ವೇಷ ಇಲ್ಲದೆ ಕೆಲಸ ಮಾಡುವುದಾಗಿ ಪ್ರಮಾಣ ವಚನ ಸ್ವೀಕರಿಸಿದದ್ದರು. ಆದರೆ, ಚುನಾವಣೆ ಗೆಲ್ಲಲು ತುಷ್ಟೀಕರಣ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...