ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ, ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Date:

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಿತು.

ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಮಯೂರ್ ಜೈಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ಸೇರಿ ಪ್ರಮುಖರು ಭಾಗಿಯಾಗಿದ್ದರು.

ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಗ್ಯಾಸ್ ಸಬ್ಸಿಡಿ ತೆಗೆದು ಬಡವರ ವಿರೋಧಿಯಾಗಿರುವದು ಪ್ರಧಾನಿ ಮೋದಿ ಸರ್ಕಾರ. ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿಯಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಯಾವ‌ ಮುಖ ಇಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ಮಾತಾಡುತ್ತಿದೆ? 4 ರೂ. ಹಾಲಿನ ದರ ಹೆಚ್ಚಿಸಿ ಆ ಹಣವನ್ನು ನೇರವಾಗಿ ರೈತರ ಜೇಬಿಗೆ ಹಾಕಿದ್ದೇವೆ. ಅದು ಸರ್ಕಾರಕ್ಕೆ ಬರಲ್ಲ” ಎಂದರು.

“ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ ಆಗಿದೆ. ಸುಳ್ಳೇ ಬಿಜೆಪಿಯ ಮನೆ ದೇವರು. ಆರ್‌ಎಸ್‌ಎಸ್‌ ಸುಳ್ಳಿನ ಮಹಾ ಕಾರ್ಖಾನೆ. ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ” ಎಂದು ಕುಟುಕಿದರು.

“ನಾವು ಸುಳ್ಳಿನ ಕಾರ್ಖಾನೆ ಆರ್‌ಎಸ್‌ಎಸ್‌ ಸುಳ್ಳುಗಳ ವಿರುದ್ಧ ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು. ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಮೋದಿ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ. ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂಪಾಯಿ ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತಾ” ಎಂದು ಪ್ರಶ್ನಿಸಿದರು.

ಸಚಿವರಾದ ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಹೆಚ್.ಸಿ ಮಹದೇವಪ್ಪ, ಚಲುವರಾಯಸ್ವಾಮಿ, ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಬೋಸರಾಜು, ದರ್ಶನಾಪುರ್, ಎಂ.ಸಿ ಸುಧಾಕರ್, ಭೈರತಿ ಸುರೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜು, ರಾಷ್ಟ್ರೀಯ ಯುವ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರಾದ ಬಿ.ವಿ, ಶ್ರೀನಿವಾಸ್, ಎಂಎಲ್ ಸಿ ನಾರಾಯಣಸ್ವಾಮಿ, ನಾಗರಾಜ್ ಯಾದವ್, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ, ಮತ್ತಿತರರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...