ಬಿಜೆಪಿ ಸರ್ಕಾರದ ವೈದಿಕಶಾಹಿ ನೀತಿಗಳನ್ನು ಮುಂದುವರಿಸುತ್ತಿರುವ ಕಾಂಗ್ರೆಸ್: ಶ್ರೀಪಾದ ಭಟ್

Date:

ಹಿಂದಿನ ಬಿಜೆಪಿ ಸರ್ಕಾರದ ವೈದಿಕಶಾಹಿ ನೀತಿಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ಕೊಂಚವೂ ಬದಲಾವಣೆ ಇಲ್ಲದೆ ಮುಂದುವರೆಸುತ್ತಿದ್ದಾರೆ. ಇದಕ್ಕಾಗಿ ಬಿಜೆಪಿ ಸೋಲಿಸಿ, ಕಾಂಗ್ರೆಸ್‌ ಅನ್ನು ಆಯ್ಕೆ ಮಾಡಬೇಕಾಯಿತೇ ಎಂದು ಶಿಕ್ಷಣ ತಜ್ಞ ಬಿ.ಶ್ರೀಪಾದ ಭಟ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ಶಿಕ್ಷಣ ಇಲಾಖೆಯ ಉನ್ನತ ಶಿಕ್ಷಣ ವಲಯದಡಿಯಲ್ಲಿ ಬರುವ ವಿಶ್ವ ವಿದ್ಯಾಲಯ ಗಳಿಗೆ/ಸಂಸ್ಥೆಗಳಿಗೆ (ರಾಜ್ಯ ವಲಯದ ಯೋಜನೆಗಳು) ಸಂಬಂಧಿಸಿದಂತೆ 2025-26 ಸಾಲಿನ ಮುಂದುವರಿಕೆ ಕಾರ್ಯಕ್ರಮಗಳ‌ ಅನುಷ್ಠಾನಕ್ಕೆ ಅನುಮೋದನೆ ಬಿಡುಗಡೆ ಮತ್ತು ಎಪ್ರಿಲ್ 25-ಜೂನ್ 25ರ ಮೊದಲನೇ ತ್ರೈಮಾಸಿಕ ಅನುದಾನವಾಗಿ
ರೂ. 2.5 ಕೋಟಿ ಬಿಡುಗಡೆ ಕುರಿತು ‘ಕರ್ನಾಟಕ ಸರ್ಕಾರದ ನಡಾವಳಿಗಳು’ ಎಂದು ಸುತ್ತೋಲೆ ಪ್ರಕಟಿಸಿದ್ದಾರೆ. ಇದರಲ್ಲಿ ರಾಜ್ಯದ ವಿವಿಗಳು, ಅಕಾಡೆಮಿಗಳು ಒಳಗೊಂಡಿದೆ. ಇದರಲ್ಲಿ ಸಂಸ್ಕೃತ, ವೈದಿಕ ಸಂಶೋಧನಾ ಸಂಸ್ಥೆಗಳು ಅಡಿಯಲ್ಲಿ 11 ವೈದಿಕ, ಚಾತುರ್ವರ್ಣದ ಬ್ರಾಹ್ಮಣಶಾಹಿ ಸಂಸ್ಥೆಗಳಿಗೂ ಅನುದಾನ ಹಂಚಿಕೆ ಮಾಡಿದ್ದಾರೆ” ಎಂದು ಆಕ್ಷೇಪ ಎತ್ತಿದ್ದಾರೆ.

“ಉನ್ನತ ಶಿಕ್ಷಣ ಸಚಿವರಿಗೆ ತಮ್ಮ ಇಲಾಖೆಯ ಈ ನಡೆ ಕುರಿತು ಮಾಹಿತಿ ಇಲ್ಲವೇ? ಅಥವಾ ಗೊತ್ತಿದ್ದೂ ಇವರೂ ಒಪ್ಪಿಕೊಂಡು ಮುಂದುವರಿಸುತ್ತಿದ್ದಾರೆಯೇ? ಅಥವಾ ಹಂತ ಹಂತವಾಗಿ ಬದಲಾಯಿಸುವ ಉದ್ದೇಶವಿದೆಯೇ? ಇದ್ದರೆ ಕಾಲಮಿತಿಯೇನು” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಶ್ರಿ

“ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿರುವುದಿಲ್ಲ. ಗಮನಕ್ಕೆ ಬಂದ ನಂತರವಾದರೂ ಕ್ರಮ ತೆಗೆದುಕೊಳ್ಳುವರೇ? ಕಾಂಗ್ರೆಸ್ ಸರ್ಕಾರ ಮತ್ತು ಕಾರ್ಯಾಂಗ ಒಟ್ಟಾಗಿ ಆರ್‌ಎಸ್‌ಎಸ್‌ ಸಿದ್ಧಾಂತ ಪೋಷಿಸುತ್ತಿದ್ದಾರೆಯೇ? ರಾಜ್ಯ ಶಿಕ್ಷಣ ನೀತಿ ರೂಪಿಸುತ್ತಿರುವ ವಿದ್ವಾಂಸರು ಇಂತಹ ವೈದಿಕಶಾಹಿಯನ್ನು ಒಪ್ಪುವರೇ? ಇಲ್ಲವೆಂದರೆ ಅವರ‌ ನಿಲುವು ಏನಾಗಿರುತ್ತದೆ” ಎಂದು ಕೇಳಿದ್ದಾರೆ.

“ರಾಜ್ಯ ಸರ್ಕಾರದ ನುಡಿಯೇ ಬೇರೆ, ನಡೆಯೇ ಬೇರೆಯೇ? ಕಾಮೂವಿನ ಪ್ಲೇಗ್ ಕಾದಂಬರಿಯ ಡಾ.ಬರ್ನಾಡ್ ಹೇಳುತ್ತಾನೆ; ‘ಇತಿಹಾಸದಿಂದ ಪುಟಿದೆದ್ದು ಬರುತ್ತಿರುವ ನೂರು ಮಿಲಿಯನ್ ಶವಗಳು‌ ನಮಗೆ ಕಲ್ಪನೆಯ ಹೊಗೆಯಾಗಿ ಕಾಣಿಸುತ್ತಿವೆ’ ನಾವೂ ಸಹ ಇವೆಲ್ಲ ಕಲ್ಪಿತ ಬಿಕ್ಕಟ್ಟುಗಳು ಎಂದುಕೊಂಡು ‘ಆರಾಮ , ವಿರಾಮ‌ ಕಾಲ’ದಲ್ಲಿದ್ದೇವೆ. ಹೀಗಾಗಿ ಈ ಪ್ರಶ್ನೆಗಳೂ ಸಹ
‘ ಇದೆಲ್ಲ ಮಾಮೂಲಿ’ ಎನ್ನುವ ವಾತಾವರಣ ಸೃಷ್ಟಿಸುತ್ತದೆ ಅಲ್ಲವೇ?” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...