ಕಾಂಗ್ರೆಸ್ ‘ದೇಶದ ಶತ್ರು’ ಎಂದ ಅರ್ನಬ್ ಗೋಸ್ವಾಮಿ: ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ

Date:

ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಕಾಂಗ್ರೆಸ್‌ ‘ದೇಶದ ಶತ್ರು’ ಎಂದು ಹೇಳಿದ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಅವರು ಇಂದು(ಜುಲೈ 7) ಈ ಅರ್ಜಿಯನ್ನು ಆಲಿಸಿದರು. ಭಾರತ ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿದ್ದಾಗ ರಿಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಕಾರ್ಯಕ್ರಮದಲ್ಲಿ ಗೋಸ್ವಾಮಿ ಮಾನನಷ್ಟಕರ ಹೇಳಿಕೆ ನೀಡಿದ್ದಾರೆ ಎಂದು ಪವನ್ ಖೇರಾ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ ವಿರುದ್ಧ ಸುಳ್ಳು ಮಾಹಿತಿ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಿವಿ ಕಾರ್ಯಕ್ರಮವನ್ನು ನಡೆಸುತ್ತಿದ್ದ ಅರ್ನಬ್ ಗೋಸ್ವಾಮಿ, “ಈಗ ಕಾಂಗ್ರೆಸ್ ದೇಶದ ಶತ್ರುವಿನ ಜೊತೆಗಿದೆ. ನೀವು ಕಾಂಗ್ರೆಸ್ ಮತದಾರರಾಗಿದ್ದರೆ, ನೀವು ಕೂಡ ದೇಶದ ಶತ್ರುವೇ ಆಗುತ್ತೀರಿ” ಎಂದು ಹೇಳಿದ್ದರು.

ಈ ಹೇಳಿಕೆ ವಿರುದ್ಧವಾಗಿ ಖೇರಾ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಆದರೆ ಈ ಹೇಳಿಕೆಯು ಒಂದು ರಾಜಕೀಯ ಪಕ್ಷದ ವಿರುದ್ಧವಾಗಿದೆ, ಇದು ವೈಯಕ್ತಿಕವಲ್ಲ ಎಂದು ನ್ಯಾಯಾಲಯ ಅಭಿಪ್ರಾಯಿಸಿದೆ. ಹಾಗೆಯೇ ದೂರಿನಲ್ಲಿ ಕೊಂಚ ತಿದ್ದುಪಡಿ ಮಾಡುವಂತೆ ಹೈಕೋರ್ಟ್ ಸೂಚಿಸಿದೆ.

ಖೇರಾ ಅವರ ವಕೀಲರು ಅರ್ಜಿಯನ್ನು ತಿದ್ದುಪಡಿ ಮಾಡಿ, ಕಾಂಗ್ರೆಸ್‌ನ ಮೆಮೊವನ್ನೂ ಸಲ್ಲಿಸುವುದಾಗಿ ಹೇಳಿದ್ದಾರೆ. ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ಅವರು ಗೋಸ್ವಾಮಿ ಪರವಾಗಿ ಹಾಜರಾಗಿದ್ದು ತಮಗೆ ಮೊಕದ್ದಮೆಯ ಪ್ರತಿಯನ್ನು ನೀಡಲಾಗಿಲ್ಲ ಎಂದು ವಾದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಹೈಕೋರ್ಟ್‌ ನ್ಯಾಯಮೂರ್ತಿ ಕೌರವ್ “ನಾವು ನಿಮಗೆ ಸಮನ್ಸ್ ಜಾರಿ ಮಾಡಿಲ್ಲ. ನಿಮಗೆ ಸಮನ್ಸ್ ಜಾರಿಯಾದ ನಂತರ ವಿಚಾರಣೆ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ. ಖೇರಾ ತಿದ್ದುಪಡಿ ಮಾಡಿದ ಅರ್ಜಿಯನ್ನು ಸಲ್ಲಿಸಿದ ನಂತರ ಮುಂದಿನ ವಿಚಾರಣೆಯ ದಿನಾಂಕವನ್ನು ನೀಡಲಾಗುವುದು ಎಂದೂ ದೆಹಲಿ ಹೈಕೋರ್ಟ್ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...