ಕಾಂಗ್ರೆಸ್‌ ರಾಜ್ಯದಲ್ಲಿ ಹಣ ಲೂಟಿ ಮಾಡಿ ಬೇರೆ ರಾಜ್ಯಗಳಿಗೆ ಸಾಗಿಸುತ್ತಿದೆ: ಕೇಂದ್ರ ಸಚಿವ ಭಗವಂತ್ ಖೂಬಾ

Date:

ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ. ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಲೂಟಿ ಮಾಡಿ ಬೇರೆ ರಾಜ್ಯಗಳಿಗೆ ಹಣ ಸಾಗಿಸುತ್ತಿದೆ ಎಂದು  ಕೇಂದ್ರ ಸಚಿವ ಭಗವಂತ್ ಖೂಬಾ ಆರೋಪಿಸಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ ಸರ್ಕಾರ ರೈತರಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಬರ ಘೋಷಣೆಯಾಗಿದ್ದರೂ, ರೈತರಿಗೆ ಪರಿಹಾರ ಸಿಕ್ಕಿಲ್ಲ. ಐದು ತಿಂಗಳಲ್ಲಿ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಕಾಂಗ್ರೆಸ್‌ನವರಿಗೆ ಮಾನ-ಮರ್ಯಾದೆ ಇದ್ದರೆ ಅಧಿಕಾರದಿಂದ ಕೆಳಗಿಳಿಯಬೇಕು” ಎಂದಿದ್ದಾರೆ.

“ಕಾಂಗ್ರೆಸ್‌ನ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ. ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರು ತಕ್ಕ ಪಾಠ ಕಲಿಸುತ್ತಾರೆ. ಅವರಿಗೆ ಎಲ್ಲಿಯೂ ನೆಲೆ ಸಿಗುವುದಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...