ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್, ಬಿಆರ್‌ಎಸ್‌ ಅವಿಶ್ವಾಸ ನಿರ್ಣಯ ಮಂಡನೆ

Date:

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಂಸತ್ತಿನ ಕಲಾಪ ಅಸ್ತವ್ಯಸ್ತವಾಗಿರುವ ಸಂದರ್ಭದಲ್ಲಿಯೇ ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಆರ್‌ಎಸ್‌ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ನ ಉಪ ನಾಯಕ ಗೌರವ್ ಗೊಗೊಯ್ ಅವರು ಇಂದು (ಜುಲೈ 26) ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರು. ಈ ಬಗ್ಗೆ ಪಕ್ಷದ ಹಿರಿಯ ನಾಯಕರಾದ ಅಧೀರ್ ರಂಜನ್‌ ಚೌಧರಿ ತಿಳಿಸಿದ್ದಾರೆ.

‘ಇಂಡಿಯಾ’ ಒಕ್ಕೂಟದ ಭಾಗವಲ್ಲದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪ್ರತ್ಯೇಕವಾಗಿ ಅವಿಶ್ವಾಸ ನಿರ್ಣಯ ಮಂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ನಮ್ಮ ಪಕ್ಷದ ಪರವಾಗಿ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದೇವೆ. ಅಧಿವೇಶನ ಪ್ರಾರಂಭವಾದಾಗಿನಿಂದ ಎಲ್ಲ ಪ್ರತಿಪಕ್ಷಗಳ ನಾಯಕರು ಮಣಿಪುರ ವಿಷಯದ ಬಗ್ಗೆ ಚರ್ಚೆಗೆ ಒತ್ತಾಯಿಸುತ್ತಿದ್ದರು. ಪ್ರಧಾನಿ ಈ ಬಗ್ಗೆ ಮಾತನಾಡಿದರೆ, ದೇಶದ ಜನರಲ್ಲಿ ಶಾಂತಿ ನೆಲೆಸುತ್ತದೆ. ಆದ್ದರಿಂದ ನಾವು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದೇವೆ” ಎಂದು ಬಿಆರ್‌ಎಸ್ ಸಂಸದ ನಾಮಾ ನಾಗೇಶ್ವರ ರಾವ್ ಹೇಳಿದ್ದಾರೆ.

ಜುಲೈ 20 ರಂದು ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಂಸತ್ತಿನ ಉಭಯ ಸದನಗಳಲ್ಲಿ ವಿಪಕ್ಷಗಳಿಂದ ಪ್ರತಿಭಟನೆ ನಡೆಯುತ್ತಿದೆ.

ಸದನದಲ್ಲಿ 50 ಸದಸ್ಯರು ಬೆಂಬಲ ನೀಡಿದರೆ ಮಾತ್ರ ಅವಿಶ್ವಾಸ ಗೊತ್ತುವಳಿ ಮಂಡನೆ ನಡೆಯಲಿದೆ. ಕಾಂಗ್ರೆಸ್ ನಿರ್ಣಯವು ಅಗತ್ಯ ಬೆಂಬಲವನ್ನು ಕಂಡುಕೊಳ್ಳುವ ನಿರೀಕ್ಷೆಯಿದೆ. ಬಿಆರ್‌ಎಸ್ ಲೋಕಸಭೆಯಲ್ಲಿ 9 ಸ್ಥಾನಗಳನ್ನು ಹೊಂದಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಕ್ರೋಫೋನ್‌ ಸ್ವಿಚ್ಡ್ ಆಫ್; ‘ಇಂಡಿಯಾ’ ನಾಯಕರಿಂದ ಸಭಾತ್ಯಾಗ  

543 ಸದಸ್ಯರ ಲೋಕಸಭೆಯಲ್ಲಿ, ಆಡಳಿತಾರೂಢ ಎನ್‌ಡಿಎ ಪ್ರಸ್ತುತ 331 ಬಲವನ್ನು ಹೊಂದಿದೆ. ಪ್ರತಿಪಕ್ಷ ‘ಇಂಡಿಯಾ’ ಮೈತ್ರಿಕೂಟವು ಸದನದಲ್ಲಿ 144 ಸದಸ್ಯರನ್ನು ಹೊಂದಿದೆ. 

ಸದ್ಯ ಮುಂಗಾರು ಅಧಿವೇಶನದ 13 ಕೆಲಸದ ದಿನಗಳು ಮಾತ್ರ ಉಳಿದಿವೆ. ಲೋಕಸಭೆ ಸ್ಪೀಕರ್ ಕಾರ್ಯವಿಧಾನದ ಪ್ರಕಾರ ಅವಿಶ್ವಾಸ ನಿರ್ಣಯದ ಚರ್ಚೆಯನ್ನು ನಿಗದಿಪಡಿಸಲು 10 ದಿನಗಳ ಸಮಯ ತೆಗೆದುಕೊಳ್ಳಬಹುದು.

“ಇದು ‘ಇಂಡಿಯಾ’ ಮೈತ್ರಿಕೂಟದ ನಿರ್ಧಾರವಾಗಿದೆ. ಕಾಂಗ್ರೆಸ್ ನಾಯಕರು ಈ ಪ್ರಸ್ತಾಪವನ್ನು ಮಂಡಿಸಲಿದ್ದಾರೆ. ಸರ್ಕಾರದ ದುರಹಂಕಾರವನ್ನು ಮುರಿಯಲು ಮತ್ತು ಮಣಿಪುರದ ಬಗ್ಗೆ ಮಾತನಾಡುವಂತೆ ಮಾಡಲು ಈ ಕೊನೆಯ ಅಸ್ತ್ರವನ್ನು ಬಳಸುವುದು ನಮ್ಮ ಕರ್ತವ್ಯ ಎಂದು ನಾವು ಭಾವಿಸುತ್ತೇವೆ.” ಎಂದು ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್ ಹೇಳಿದ್ದಾರೆ.

ಮಣಿಪುರದ ಬಗ್ಗೆ ಚರ್ಚೆಗೆ ಸಿದ್ಧ ಎಂದು ಸರ್ಕಾರ ಹೇಳಿದೆ. ಆದರೆ ವಿರೋಧ ಪಕ್ಷಗಳು ಮತದಾನ ನಿಯಮದ ಅಡಿಯಲ್ಲಿ ಚರ್ಚೆಗೆ ಒತ್ತಾಯಿಸುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...