ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆಗೆ ಖಂಡನೆ; ಕಾಂಗ್ರೆಸ್‌ನಿಂದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಅಭಿಯಾನ

Date:

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯನ್ನು ಖಂಡಿಸಿ, ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ.

ಈ ಬಗ್ಗೆ ಕಾಂಗ್ರೆಸ್ ನಾಯಕ ಪವನ್ ಖೇರಾ ಮಾಹಿತಿ ನೀಡಿದ್ದು, ಅಭಿಯಾನದಡಿಯಲ್ಲಿ ಪಕ್ಷದ ಮುಖಂಡರು ಪ್ರತಿ ಜಿಲ್ಲೆಯಲ್ಲೂ ‘ಚೌಪಾಲ್’ಗಳನ್ನು ಆಯೋಜಿಸಿ ಬಿಜೆಪಿ-ಆರ್‌ಎಸ್‌ಎಸ್ ದಶಕಗಳಿಂದ ಅಂಬೇಡ್ಕರ್ ಅವರನ್ನು ಹೇಗೆ ಅವಮಾನಿಸುತ್ತಿದೆ ಮತ್ತು ಸಂವಿಧಾನವನ್ನು ಯಾವೆಲ್ಲ ರೀತಿಯಲ್ಲಿ ಅವಮಾನಿಸುತ್ತಿದೆ ಎಂಬುದನ್ನು ಜನರಿಗೆ ತಿಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಗೃಹಸಚಿವ ಅಮಿತ್ ಶಾ ವಿರುದ್ಧ ಜ.9ರಂದು‌ ʼವಿಜಯನಗರ ಬಂದ್’ಗೆ ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 3ರಂದು ಅಭಿಯಾನವು ಪ್ರಾರಂಭವಾಗಿದ್ದು ಜನವರಿ 26ರವರೆಗೆ ನಡೆಯಲಿದೆ. ಅಂಬೇಡ್ಕರ್ ಅವರ ಜನ್ಮಸ್ಥಳವಾದ ಮಧ್ಯಪ್ರದೇಶದ ಮ್ಹೋವ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ ಮೂಲಕ ಈ ಅಭಿಯಾನ ಕೊನೆಯಾಗಲಿದೆ ಎಂದು ಖೇರಾ ಹೇಳಿದರು.

“ಅಂಬೇಡ್ಕರ್ ಅವರ ಪರಂಪರೆ ಮತ್ತು ಮೌಲ್ಯಗಳನ್ನು ಕಾಪಾಡಲು 2025ರ ಜನವರಿ 26ರಿಂದ 2026ರ ಜನವರಿ 26ರವರೆಗೆ ‘ಸಂವಿಧಾನ ಬಚಾವೋ ರಾಷ್ಟ್ರೀಯ ಪಾದಯಾತ್ರೆ’ (ಸಂವಿಧಾನ ಉಳಿಸಿ ಆಂದೋಲನ) ದೇಶದಾದ್ಯಂತ ನಡೆಸಲಾಗುತ್ತದೆ” ಎಂದು ಕೂಡಾ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಸತ್ಯ ಶೋಧ | ಅಂಬೇಡ್ಕರ್ RSS ಶಾಖೆಗೆ ಹೋಗಿದ್ದರು ಎಂಬುದು ಶುದ್ಧ ಸುಳ್ಳು

ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸಬೇಕು ಎಂಬ ನಮ್ಮ ಬೇಡಿಕೆಯನ್ನು ನಾವು ಮತ್ತೆ ಮತ್ತೆ ಪುನರುಚ್ಚರಿಸುತ್ತೇವೆ ಎಂದು ಹೇಳಿದರು.

ದೇಶದ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ ಮಹಾತ್ಮಾ ಗಾಂಧಿ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಜವಾಹರಲಾಲ್ ನೆಹರು ಅವರಂತಹ ರಾಷ್ಟ್ರೀಯ ನಾಯಕರನ್ನು ರಾಕ್ಷಸೀಕರಣ ಮಾಡುವ ಎಲ್ಲಾ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...