ಸಾವರ್ಕರ್ ಗುಣಗಾನ ಮಾಡಿದ್ದ ಕಾಂಗ್ರೆಸ್‌ ನಾಯಕ ದೇಶ್‌ಪಾಂಡೆ; ಟೀಕೆ ಬೆನ್ನಲ್ಲೇ ಪೋಸ್ಟ್‌ ಡಿಲೀಟ್‌

Date:

ಸಾವರ್ಕರ್ ಜನ್ಮದಿನವಾದ ಮೇ 28ರಂದು ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಆರ್‌.ವಿ ದೇಶ್‌ಪಾಂಡೆ ಅವರು ಸಾವರ್ಕರ್‌ ಗುಣಗಾನ ಮಾಡಿ ಪೋಸ್ಟ್‌ ಹಾಕಿದ್ದರು. ಅವರ ಪೋಸ್ಟ್‌ಗೆ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ, ಇದೀಗ ಪೋಸ್ಟ್‌ಅನ್ನು ಡಿಲೀಟ್‌ ಮಾಡಿದ್ದಾರೆ.

ಸಾವರ್ಕರ್ ಗುಣಗಾನ ಮಾಡಿ ಜನ್ಮದಿನದ ಶುಭಾಶಯ ಕೋರಿದ್ದ ಆರ್‌.ವಿ ದೇಶ್‌ಪಾಂಡೆ, “ಯುವಕರಲ್ಲಿ ದೇಶಭಕ್ತಿಯ ಜ್ವಾಲೆಯನ್ನು ಬೆಳಗಿಸಿ, ಸ್ವಾಭಿಮಾನ ಮತ್ತು ಸ್ವಾತಂತ್ರ್ಯದ ಸಾರವನ್ನು ಸಾರಿದ ಅಪ್ರತಿಮ ದೇಶಭಕ್ತರಾಗಿದ್ದ ಸಾವರ್ಕರ್ ಜನ್ಮದಿನದಂದು ಗೌರವಪೂರ್ವಕ ನಮನಗಳು” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು.

ಅವರ ಪೋಸ್ಟ್‌ ವಿರುದ್ಧ ಭಾರೀ ಆಕ್ರೋಶ, ಟೀಕೆಗಳು ವ್ಯಕ್ತವಾಗಿವೆ. ಈ ಬೆನ್ನಲ್ಲೇ, ತಮ್ಮ ಪೋಸ್ಟ್‌ಅನ್ನು ದೇಶ್‌ಪಾಂಡೆ ಡಿಲೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂದಹಾಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಲವಾರು ನಾಯಕರು ಸಾವರ್ಕರ್ ಅವರನ್ನು ಟೀಕಿಸುತ್ತಾರೆ. “ಬ್ರಿಟಿಷರ ಬಳಿ ಕ್ಷಮೆ ಕೇಳಿದ್ದ ಸಾವರ್ಕರ್‌, ಬ್ರಿಟಿಷರ ಸಹಯೋಗಿಯಾಗಿದ್ದರು. ಬ್ರಿಟಿಷರಿಂದ ಪಿಂಚಣಿ ಪಡೆದಿದ್ದರು” ಎಂದು ರಾಹುಲ್‌ ಗಾಂಧಿ ಟೀಕಿಸಿದ್ದರು.

WhatsApp Image 2025 05 28 at 2.35.56 PM

ಅಲ್ಲದೆ, ದೇಶದಲ್ಲಿ ಕೋಮುವಾದವನ್ನು ಹುಟ್ಟುಹಾಕಿದ್ದು, ಮುಸ್ಲಿಂ ದ್ವೇಷವನ್ನು ಹರಡಿದ್ದು ಕೂಡ ಸಾವರ್ಕರ್ ಎಂದು ಕಾಂಗ್ರೆಸ್ಸಿಗರು ಸೇರಿದಂತೆ ಹಲವರು ಆರೋಪಿಸಿದ್ದಾರೆ. ಹೀಗಿದ್ದರೂ, ಕರ್ನಾಟಕದಲ್ಲಿ ಸಂಘಪರಿವಾರದ ಕೋಮು ಪ್ರಯೋಗಶಾಲೆಯಾಗಿರುವ ಕರಾವಳಿ ಭಾಗದವರೇ ಆದ ಆರ್‌.ವಿ ದೇಶ್‌ಪಾಂಡೆ ಅವರು ಸಾವರ್ಕರ್ ಗುಣಗಾನ ಮಾಡಿರುವುದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿತ್ತು.

“ಎರಡು ತಾಸಿನ ಹಿಂದೆ ಸಾವರ್ಕರ್ ಭಜನೆ ಮಾಡಿದ್ದ ಪೋಸ್ಟರ್ ಡಿಲೀಟಾಗಿದೆ! ಅರುವು ಆಗಿದೆ. ದೇಹ ಕಾಂಗ್ರೆಸ್‌ನಲ್ಲಿದೆ. ಆತ್ಮ ಮಾತ್ರ ಬಿಜೆಪಿಯಲ್ಲಿದೆ. ಇಂಥ ಆತ್ಮಗಳು ಕಾಂಗ್ರೆಸ್‌ನಲ್ಲಿ ತುಂಬಾ ಇವೆ…. ಸ್ವಚ್ಛ ಆಗದಿದ್ದರೆ ನಷ್ಟ ಕಾಂಗ್ರೆಸ್ಸಿಗೆ” ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...