65 ದಿನಗಳಲ್ಲಿ 22 ಬಾರಿ ಭಾರತ-ಪಾಕ್ ಕದನ ವಿರಾಮ ತನ್ನಿಂದ ಎಂದ ಟ್ರಂಪ್: ಮೋದಿ ವಿರುದ್ಧ ಕಾಂಗ್ರೆಸ್ ಟೀಕೆ

Date:

ಭಾರತ-ಪಾಕಿಸ್ತಾನ ಕದನ ವಿರಾಮ ತನ್ನಿಂದಲೇ ಆಗಿದ್ದು ಎಂದು 65 ದಿನಗಳಲ್ಲಿ ಒಟ್ಟು 22 ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದು, ಈ ವಿಚಾರದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದಾರೆ.

ನ್ಯಾಟೋ ಪ್ರಧಾನ ಕಾರ್ಯದರ್ಶಿ ಮಾರ್ಕ್ ರುಟ್ಟೆ ಅವರೊಂದಿಗೆ ಭೇಟಿಯ ಸಂದರ್ಭದಲ್ಲಿ ಟ್ರಂಪ್ ಮತ್ತೊಮ್ಮೆ “ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಮಾಡಿದ್ದು ತಾನೇ” ಎಂದು ಮತ್ತೆ ಹೇಳಿಕೊಂಡಿದ್ದಾರೆ. “ಇನ್ನೊಂದು ವಾರದೊಳಗೆ ಭಾರತ ಮತ್ತು ಪಾಕಿಸ್ತಾನದ ನಡುವೆ ಪರಮಾಣು ಯುದ್ಧವಾಗುತ್ತಿತ್ತು. ಆದರೆ ನಾವು ಅದನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದೇವೆ” ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕೇಂದ್ರದ ಕದನ ವಿರಾಮ ನಿರ್ಧಾರ ನಿರಾಸೆ ಮೂಡಿಸಿದೆ: ಸಚಿವ ಪ್ರಿಯಾಂಕ್ ಖರ್ಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕದನ ವಿರಾಮ ಮಾಡದಿದ್ದರೆ ನಿಮ್ಮೊಂದಿಗೆ ವ್ಯಾಪಾರ ಮಾಡುವುದಿಲ್ಲ ಎಂದು ಹೇಳಿ ನಾವು ಈ ಒಪ್ಪಂದ ಮಾಡಿಸಿದ್ದೇವೆ” ಎಂದು ಪುನರುಚ್ಚರಿಸಿದ್ದಾರೆ. ಆದರೆ ಟ್ರಂಪ್ ಅವರ ಈ ಹೇಳಿಕೆಯನ್ನು ವಿರೋಧಿಸದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜೈರಾಮ್ ರಮೇಶ್ ಅವರು ಟೀಕಿಸಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದೊಂದಿಗಿನ ಅಮೆರಿಕದ ವ್ಯಾಪಾರ ಒಪ್ಪಂದವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಘೋಷಿಸುತ್ತಿದ್ದಂತೆಯೇ ಅಧ್ಯಕ್ಷ ಟ್ರಂಪ್ ಈ ಹೇಳಿಕೆಯನ್ನು ನೀಡಿದ್ದಾರೆ. ಒಮ್ಮೆ ತಮ್ಮ ಹಿರಿಯ ಸಹೋದ್ಯೋಗಿ ಘನಶ್ಯಾಮ್ ತಿವಾರಿ ಅವರು ಬಿಜೆಪಿಯ ‘ಟ್ರಂಪ್ ಕಾರ್ಡ್’ ಎಂದು ಬಣ್ಣಿಸಿದ ನರೇಂದ್ರ ಮೋದಿ, ವಿಷಯದ ಬಗ್ಗೆ ಯಾವಾಗ ಮೌನ ಮುರಿಯುತ್ತಾರೆ” ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಭಾರತವು ಅಮೆರಿಕ ಅಧ್ಯಕ್ಷರ ಹೇಳಿಕೆಗಳನ್ನು ನಿರಾಕರಿಸಿದೆ. ಭಾರತ ಮತ್ತು ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಕೇಂದ್ರ ಪ್ರದೇಶಕ್ಕೆ ಸಂಬಂಧಿಸಿದ ಯಾವುದೇ ವಿಷಯವನ್ನು ದ್ವಿಪಕ್ಷೀಯವಾಗಿ ಪರಿಹರಿಸುತ್ತದೆ ಎಂದು ಭಾರತ ಹೇಳಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಈವರೆಗೂ ಟ್ರಂಪ್ ಹೇಳಿಕೆಯನ್ನು ಖಂಡಿಸಿಲ್ಲ.

ಇದನ್ನು ಓದಿದ್ದೀರಾ? ಕದನ ವಿರಾಮ | ವಿಶ್ವಾಸ ದ್ರೋಹ ಎಸಗಿದ ಪ್ರಧಾನಿ ಮೋದಿ: ಮುತಾಲಿಕ್ ಆಕ್ರೋಶ

ಕಾಶ್ಮೀರ ಮೂಲದ ಭಯೋತ್ಪಾದಕ ಸಂಘಟನೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ 26 ಪ್ರವಾಸಿಗರನ್ನು ಕೊಂದಿದೆ. ಇದಕ್ಕೆ ಪತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ 100ಕ್ಕೂ ಅಧಿಕ ಉಗ್ರರನ್ನು ಕೊಂದಿದೆ. ಈ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು ಸದ್ಯ ಕದನ ವಿರಾಮ ಒಪ್ಪಂದ ಮಾಡಲಾಗಿದೆ. ಆದರೆ ಟ್ರಂಪ್ ಮಾತ್ರ ಈ ಒಪ್ಪಂದವನ್ನು ತಾನೇ ಮಾಡಿಸಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...