’70 ಕೋಟಿ ಭಾರತೀಯರಿಗಿಂತ ಅಧಿಕ ಸಂಪತ್ತು 21 ಬಿಲಿಯನೇರ್‌ಗಳಲ್ಲಿದೆ ಅನ್ನೋದನ್ನ ಮೋದಿ ಹೇಳಲ್ಲ’

Date:

ದ್ವೇ‍ಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು, “ಇಂದು 21 ಬಿಲಿಯನೇರ್‌ಗಳು ಒಟ್ಟಾಗಿ 70 ಕೋಟಿ ಭಾರತೀಯತರಲ್ಲಿ ಇರುವ ಸಂಪತ್ತಿಗಿಂತ ಅಧಿಕ ಸಂಪತ್ತನ್ನು ಹೊಂದಿದ್ದಾರೆ ಎಂಬ ಬಗ್ಗೆ ಮೋದಿ ನಿಮಗೆ ಹೇಳುವುದಿಲ್ಲ” ಎಂದಿದ್ದಾರೆ.

ಈ ಬಗ್ಗೆ ತನ್ನ ಎಕ್ಸ್‌ನಲ್ಲಿ ಜೈರಾಮ್ ಪೋಸ್ಟ್‌ ಮಾಡಿದ್ದು, “2012ರಿಂದ 2021ರವರೆಗೆ ದೇಶದಲ್ಲಿ ಸೃಷ್ಟಿಯಾದ ಶೇಕಡ 40ಕ್ಕಿಂತ ಹೆಚ್ಚು ಸಂಪತ್ತು ಕೇವಲ ಶೇಕಡ 1ರಷ್ಟು ಜನರ ಕೈಯಲ್ಲಿದೆ. ಒಟ್ಟು ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ಶೇಕಡ 64ರಷ್ಟು ಪಾಲನ್ನು ದೇಶದ ಬಡವರು, ಕೆಳ ಮಧ್ಯಮ ವರ್ಗ ಮತ್ತು ಮಧ್ಯಮ ವರ್ಗದವರು ತುಂಬುತ್ತಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಮುಸ್ಲಿಮರು, ಕಾಂಗ್ರೆಸ್ ಬಗ್ಗೆ ದ್ವೇಷ ಭಾಷಣ: ಮೋದಿ ವಿರುದ್ಧ ಕಠಿಣ ಕ್ರಮಕ್ಕೆ ಸಿಪಿಐಎಂ ಆಗ್ರಹ

“ಕಳೆದ ಹತ್ತು ವರ್ಷಗಳಲ್ಲಿ, ಹೆಚ್ಚಿನ ಸಾರ್ವಜನಿಕ ಆಸ್ತಿಗಳು ಮತ್ತು ಸಂಪನ್ಮೂಲಗಳನ್ನು ಒಂದು ಅಥವಾ ಎರಡು ಕಂಪನಿಗಳಿಗೆ ಮಾರಾಟ ಮಾಡಲಾಗಿದೆ. ಇದು ಆರ್ಥಿಕತೆಯಲ್ಲಿ ಬೆಳೆಯುತ್ತಿರುವ ಏಕಸ್ವಾಮ್ಯವು ಹಣದುಬ್ಬರಕ್ಕೆ ಕಾರಣವಾಗಿದೆ ಎಂದು ಅರ್ಥಶಾಸ್ತ್ರಜ್ಞರು ಈಗಾಗಲೇ ಹೇಳಿದ್ದಾರೆ. 21 ಬಿಲಿಯನೇರ್‌ಗಳು ಒಟ್ಟಾಗಿ 70 ಕೋಟಿಗಿಂತ ಅಧಿಕ ಭಾರತೀಯರಲ್ಲಿರುವ ಸಂಪತ್ತನ್ನು ಹೊಂಡಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ಆರೋಪಿಸಿದರು.

ಇನ್ನು “ಭಾರತಕ್ಕೆ ತ್ವರಿತ ಆರ್ಥಿಕ ಬೆಳವಣಿಗೆಯ ಅಗತ್ಯವಿದೆ. ಹಾಗೆಯೇ ಹೆಚ್ಚು ಅಂತರ್ಗತ ಆರ್ಥಿಕ ಬೆಳವಣಿಗೆಯ ಅಗತ್ಯವಿದೆ ಮತ್ತು ಹೆಚ್ಚು ಸುಸ್ಥಿರ ಪರಿಸರ ಅಭಿವೃದ್ಧಿಯ ಅಗತ್ಯವಿದೆ. ಭಾರತ ಮಾತ್ರ ಈ ಮೂರನ್ನೂ ಮಾಡಬಲ್ಲದು ಮತ್ತು ಮಾಡಲಿದೆ” ಎಂದು ಜೈರಾಮ್ ರಮೇಶ್ ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ?  ಪ್ರಧಾನಿ ಮೋದಿ ದ್ವೇಷ ಭಾಷಣ: ಒಂದು ಲಕ್ಷಕ್ಕೂ ಅಧಿಕ ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಪತ್ರ

ರಾಜಸ್ಥಾನದ ಬನ್ಸ್ವಾರಾದಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ ಅವರು, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ. ನಿಮ್ಮ ಮಂಗಳಸೂತ್ರವನ್ನು ಬಿಡಲ್ಲ” ಎಂದು ಹೇಳಿದ್ದರು. ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ನುಸುಳುಕೋರರಿಗೆ ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ನೀಡಲು ಕಾಂಗ್ರೆಸ್ ಯೋಜಿಸುತ್ತಿದೆ ಎಂದು ಮೋದಿ ಆರೋಪಿಸಿದರು.

ಪ್ರಧಾನಿ ಮೋದಿ ಅವರ ಈ ದ್ವೇಷ ಭಾಷಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈಗಾಗಲೇ ಒಂದು ಲಕ್ಷಕ್ಕೂ ಅಧಿಕ ಮಂದಿ ಚುನಾವಣಾ ಆಯೋಗಕ್ಕೆ ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿಯನ್ನು ಸಲ್ಲಿಸಿದ್ದಾರೆ. ಆದರೆ ಚುನಾವಣಾ ಆಯೋಗ ಮಾತ್ರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲು ನಿರಾಕರಿಸಿದೆ. ಕಾಂಗ್ರೆಸ್ ಮಾತ್ರವಲ್ಲದೆ ಇತರೆ ವಿಪಕ್ಷಗಳು ಕೂಡಾ ಕಾಂಗ್ರೆಸ್ ಮತ್ತು ಮುಸ್ಲಿಮರ ವಿರುದ್ಧದ ಪ್ರಧಾನಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...