ಬೆಂಗಳೂರು ಮೇಲೂ ಪಾಕ್ ದಾಳಿ ಹೇಳಿಕೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಮನವಿ

Date:

ಬೆಂಗಳೂರು ನಗರದ ಮೇಲೂ ಪಾಕಿಸ್ತಾನ ದಾಳಿ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿ ಜನರಲ್ಲಿ ಭಯ ಹುಟ್ಟಿಸಿರುವ ಯುವ ಬ್ರಿಗೇಡ್‌ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಿಸಲು ಕಾಂಗ್ರೆಸ್ ನಾಯಕ ಎಸ್ ಮನೋಹರ್ ಮನವಿ ಮಾಡಿದ್ದಾರೆ.

ನಿರಂತರವಾಗಿ ಸುಳ್ಳು ಹೇಳಿಕೆ, ತಪ್ಪು ಮಾಹಿತಿ ಪ್ರಚಾರ ಮಾಡುವ ಮೂಲಕ ಸುದ್ದಿಯಾಗುತ್ತಿರುವ ಸೂಲಿಬೆಲೆ, ಇತ್ತೀಚೆಗೆ ಪಾಕಿಸ್ತಾನ ಬೆಂಗಳೂರು ನಗರದ ಮೇಲೂ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಹೇಳಿದ್ದರು. ಈ ಮೂಲಕ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುವ ಯತ್ನ ಮಾಡಿದ್ದರು.

ಇದನ್ನು ಓದಿದ್ದೀರಾ? ಕೋಮು ದ್ವೇಷ ಭಾಷಣ ಆರೋಪ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಷ್ಟು ಮಾತ್ರವಲ್ಲದೆ ಪಾಕಿಸ್ತಾನದ ಉಗ್ರರ ಜೊತೆ ಭಾರತದ ಏಜೆಂಟ್‌ಗಳು ಸಂಪರ್ಕದಲ್ಲಿ ಇದ್ದಾರೆ ಎಂದೂ ಹೇಳಿದ್ದರು. ದೇಶದ ಗೌಪ್ಯ ವಿಚಾರಗಳನ್ನ ಮಾಧ್ಯಮಗಳ ಮುಂದೆ ಹೇಳುತ್ತಿದ್ದಾರೆ. ಕಾಂಗ್ರೆಸ್ ಬೇರೆ ಅಲ್ಲ ಪಾಕಿಸ್ತಾನ ಬೇರೆ ಅಲ್ಲ ಎಂದೂ ಹೇಳಿದ್ದರು. ಈ ಹೇಳಿಕೆಗಳನ್ನು ಖಂಡಿಸಿ ಚಕ್ರವರ್ತಿ ಅವರನ್ನು ಬಂಧಿಸುವಂತೆ ಆಗ್ರಹಿಸಲಾಗಿದೆ.

ಈ ಸಂಬಂಧ ಬೆಂಗಳೂರು ನಗರದ ವಸಂತನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗೆ ಕಾಂಗ್ರೆಸ್ ನಾಯಕರು ಮನವಿ ನೀಡಿದ್ದಾರೆ. “ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಿರಂತರವಾಗಿ ದಾಳಿ ನಡೆಸುತ್ತಿದೆ ಹಾಗೂ ಭಯೋತ್ಪಾದಕರ ಅಡಗು ತಾಣಗಳನ್ನು ಧ್ವಂಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಪ್ರಚಾರ ಪಡೆಯುವ ಚಕ್ರವರ್ತಿ ಸೂಲಿಬೆಲೆ ಎಂಬ ವ್ಯಕ್ತಿ ಭಾರತದ ಸೈನಿಕರ ಆತ್ಮಸ್ಥೈರ್ಯವನ್ನು ಕುಗ್ಗಿಸುವಂತಹ ಭಾಷಣ ಮಾಡುತ್ತಿದ್ದಾನೆ. ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾನೆ. ಆತನ ವಿರುದ್ಧ ಕೂಡಲೇ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ಕೂಡಲೇ ಬಂಧಿಸಬೇಕು” ಎಂದು ದೂರು ನೀಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಕೇಂದ್ರ ಸರ್ಕಾರ ಟೀಕಿಸಿದ ಗಾಯಕಿ ನೇಹಾ ಸಿಂಗ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

“ಚಕ್ರವರ್ತಿ ಸೂಲಿಬೆಲೆ ಎಂಬ ವ್ಯಕ್ತಿ ಪ್ರತಿ ಬಾರಿಯೂ ಸಹ ಹಿಂದೂ ಮುಸ್ಲಿಂ ಹಾಗೂ ಭಾರತ ಪಾಕಿಸ್ತಾನ ಎಂಬ ಹೆಸರಿನಲ್ಲಿ ತನ್ನ ಪ್ರಚಾರವನ್ನು ಗಿಟ್ಟಿಸಿಕೊಳ್ಳಲು ಸುಳ್ಳಿನ ಮಾಹಿತಿಯನ್ನು ಹರಿಬಿಡುತ್ತಾನೆ. ಸುಳ್ಳನ್ನು ಪ್ರಚಾರ ಮಾಡಿ ಸತ್ಯದ ರೀತಿಯಲ್ಲಿ ಬಿಂಬಿಸಿ ದೇಶದ ಯೋಧರ ಆತ್ಮಬಲವನ್ನು ಕುಗ್ಗಿಸುವ ಹೇಳಿಕೆ ನೀಡುತ್ತಾ ಬಂದಿದ್ದಾನೆ” ಎಂದು ದೂರಿದ್ದಾರೆ.

“ಪಾಕಿಸ್ತಾನ ಬೆಂಗಳೂರು ನಗರದ ಮೇಲೂ ದಾಳಿ ನಡೆಸುವ ಸಂಭವವಿದೆ ಎಂಬುವ ಹೇಳಿಕೆಗಳನ್ನ ನೀಡುವ ಮೂಲಕ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾನೆ. ಕಾಂಗ್ರೆಸ್ ಪಾಕಿಸ್ತಾನವನ್ನು ಬೆಂಬಲಿಸುತ್ತಿದೆ ಎಂಬುವ ಆರೋಪ ಹಾಗೂ ಆಧಾರರಹಿತ ಹೇಳಿಕೆ ನೀಡಿ ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಕೂಡಲೇ ಈತನ ಕಾನೂನಾತ್ಮಕವಾಗಿ ತನಿಖೆಗೆ ಒಳಪಡಿಸಿ ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ದೂರಿನಲ್ಲಿ ವಿನಂತಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...